ರಾಯಚೂರು | ಅಂಗನಾಡಿ ಅಡುಗೆ ಸಹಾಯಕಿ ಹುದ್ದೆ ಖಾಯಂಗೊಳಿಸಲು ಒತ್ತಾಯ; 6ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

Date:

ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಗ್ರಾಮದ 1ನೇ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕಿಯಾಗಿ ಸೇವೆ ಸಲ್ಲಿಸಿದ ಪರಿಶಿಷ್ಟ ಪಂಗಡದ ಮಹಿಳೆಯನ್ನು ಖಾಯಂ ಮಾಡಲು ಆಗ್ರಹಿಸಿ ನಡೆಯುತ್ತಿರುವ ಧರಣಿ ಶುಕ್ರವಾರ ಆರನೇ ದಿನಕ್ಕೆ ಕಾಲಿಟ್ಟಿದೆ.

- Advertisement -

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಈ ಅಂಗನವಾಡಿ ಕೇಂದ್ರದಲ್ಲಿ ಸುಮಾರು 30 ತಿಂಗಳಿನಿಂದ ಅಡುಗೆ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದರೂ, ನಕಲಿ ದಾಖಲೆ ನೀಡಿದ ಮತ್ತೊಬ್ಬ ಮಹಿಳೆಗೆ ನೇಮಕಾತಿ ಆದೇಶ ನೀಡಿರುವುದಕ್ಕೆ ವಿರೋಧವಾಗಿ ಡಿವೈಎಫ್ಐ ಸಂಘಟನೆ ಮತ್ತು ಮಹಿಳೆಯ ಕುಟುಂಬಸ್ಥರು ನಿರಂತರ ಧರಣಿ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಪ್ರತಿಭಟನೆ ನಿರಂತರ ಆರು ದಿನಗಳಿಂದ ನಡೆಯುತ್ತಿದ್ದರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಬಾರದೇ ಇರುವುದು ಅಧಿಕಾರಿಗಳ ಕೈವಾಡವಿದೆ ಎಂದು ಶಂಕೆ ವ್ಯಕ್ತವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

ಸಹಾಯಕಿ ನೇಮಕಾತಿ ಆದೇಶ ರದ್ದುಗೊಳಿಸಿ ಕಳೆದ 30 ತಿಂಗಳಿಂದ ಸೇವೆ ಸಲ್ಲಿಸಿದ ಬಡ ಮಹಿಳೆಗೆ ಅಡುಗೆ ಸಹಾಯಕಿ ಹುದ್ದೆಗೆ ಖಾಯಂ ಮಾಡಬೇಕು ಹಾಗೂ ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು ಇಲ್ಲದಿದ್ದರೆ ಬೃಹತ್‌ ಹೋರಾಟ ಮಾಡಲಾಗುವುದು ಎಂದು ಡಿವೈಎಫ್ಐ ಸಂಘಟನೆಯ ಕಾರ್ಯದರ್ಶಿ ರಾಜು ನಾಯಕ ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

ಇದೆ ಸಂಧರ್ಭದಲ್ಲಿ ಡಿವೈಎಫ್ಐ ಸಂಘಟನೆಯ ಅದ್ಯಕ್ಷ ರಿಯಾಜ್ ಆರ್ತೀ, ಜಿಲ್ಲಾ ಮುಖಂಡರಾದ ಶಬ್ಬೀರ್, ಗ್ರಾ.ಪಂ ಸದಸ್ಯರಾದ ಮಕ್ತುಮ್ ಭಾಷಾ, ತಿಮ್ಮಣ್ಣ ನಾಯಕ ದಿವಾನ, ಮುಖಂಡರಾದ ರಂಗನಾಥ ಮುರಾಳ, ರಂಗನಾಥ ಬುಂಕಲದೊಡ್ಡಿ, ಅಮೀರ್ ಪಟೇಲ್, ಕಲಿಂ, ಮೈಬೂ, ಮಹಾಲಿಂಗ ದೊಡ್ಡಮನಿ, ಗುರು ತೋಟದ್, ಭೀಮಾಶಂಕರ ಮಕಾಶಿ, ಮಾಜಿ ಗ್ರಾ.ಪಂ ಅದ್ಯಕ್ಷ ರಂಗನಾಥ ಮಾಕಾಶಿ, ನೊಂದ ಮಹಿಳೆ ನರಸಮ್ಮ ಸೇರಿದಂತೆ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...