ದಾವಣಗೆರೆ | ಸಾರಿಗೆ ಬಸ್‌ ನಿಲ್ದಾಣಕ್ಕೆ ʼಮಾಜಿ ಶಾಸಕ ಪಂಪಾಪತಿʼ ಹೆಸರಿಡಲು ಆಗ್ರಹ

Date:

  • ದಾವಣಗೆರೆ ನಗರ ಅಭಿವೃದ್ಧಿಗೆ ಮಾಜಿ ಶಾಸಕ, ಶ್ರಮಿಜೀವಿ ಪಂಪಾಪತಿ ಅವರ ಕೊಡುಗೆ ಅಪಾರ.
  • ಸಾರಿಗೆ ಬಸ್ ನಿಲ್ದಾಣಕ್ಕೆ ಪಂಪಾಪತಿಯವರ ಹೆಸರನ್ನು ನಾಮಕರಣ ಮಾಡದಿದ್ದರೆ ಹೋರಾಟ ಅನಿವಾರ್ಯ

ದಾವಣಗೆರೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ, ಕಾರ್ಮಿಕ ನಾಯಕ ಪಂಪಾಪತಿ ಅವರ ಹೆಸರು ನಾಮಕರಣ ಮಾಡುವಂತೆ ಕಾರ್ಮಿಕ ಸಂಘಟನೆಗಳ ಜಂಟಿ ಜಿಲ್ಲಾ ಸಮಿತಿ ಆಗ್ರಹಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಘಟನೆ ಮುಖಂಡ ಸತೀಶ್ ಅರವಿಂದ್, “ಇತಿಹಾಸದಲ್ಲಿ ದಾವಣಗೆರೆ ನಗರವು ಬೆಳವಣಿಗೆ ಹೊಂದಲು ಹಲವು ನಾಯಕರು ಶ್ರಮಿಸಿದ್ದಾರೆ. ಅದರಲ್ಲಿ ಅಗ್ರಗಣ್ಯವಾಗಿ ಶ್ರಮಜೀವಿ ಕಾ.ಪಂಪಾಪತಿ ಅವರು ಚಿರಸ್ಥಾಯಿಯಾಗಿ ಉಳಿದಿದ್ದಾರೆ. 1960-61 ರಲ್ಲಿ ಮಿಲ್ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಮಾಲಿಕ ವರ್ಗ ಮತ್ತು ತಾಲ್ಲೂಕು ಆಡಳಿತದ ವಿರುದ್ಧದ ಹೋರಾಟದಲ್ಲಿ ಕಾಂ.ಪಂಪಾಪತಿಯವರು ಹೋರಾಟ ಕೈಗೊಂಡಿದ್ದರು. 1974ರಲ್ಲಿ ನಗರಸಭೆ ಚುನಾವಣೆಯಲ್ಲಿ ಗೆದ್ದು ಸಂಪೂರ್ಣ ನಾಲ್ಕು ವರ್ಷ ನಗರಸಭೆಯ ಅಧ್ಯಕ್ಷರಾದ ಸಂದರ್ಭದಲ್ಲಿ ದಾವಣಗೆರೆ ನಗರದಲ್ಲಿ 6 ಸಾವಿರ ಸಸಿಗಳನ್ನು ನೆಟ್ಟು ಪೋಷಣೆ ಮಾಡಿದ್ದು ಶ್ಲಾಘನೀಯವಾಗಿತ್ತು” ಎಂದರು.

“ಬಾತಿಕೆರೆಯನ್ನು ಶುದ್ದೀಕರಣಗೊಳಿಸಿ ದಾವಣಗೆರೆ ಜನತೆಗೆ ದಿನಕ್ಕೆ ಎರಡು ಬಾರಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಯುವಕರಿಗಾಗಿ ವ್ಯಾಯಾಮ ಶಾಲೆಗಳು ಮತ್ತು ಗರಡಿಮನೆ ನಿರ್ಮಾಣಕ್ಕೆ ಪ್ರೋತ್ಸಾಹ ಕೊಡುತ್ತಿದ್ದರು. ಅಂದಿನ ವ್ಯಾಯಾಮ ಶಾಲೆಗಳು ನಗರದಲ್ಲಿ ಈಗಲೂ ಕಾಣಬಹುದು. 1978ರಲ್ಲಿ ಶಾಸಕರಾಗಿ ಚುನಾಯಿತರಾದ ಮೇಲೆ ಮೊದಲ ಬಾರಿಗೆ ದಾವಣಗೆರೆಗೆ ಎರಡು ನಗರ ಸಾರಿಗೆ ಬಸ್ ನೀಡಿದ್ದರು, ದಾವಣಗೆರೆಯು ಜಿಲ್ಲಾ ಕೇಂದ್ರವಾಗುವ ಎಲ್ಲ ಅರ್ಹತೆಯನ್ನು ಹೊಂದಿದ್ದು, ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಮತ್ತು ಡಿಪೋ ಸ್ಥಾಪನೆಗಾಗಿ ಈಗಿನ ಮಹಾನಗರ ಪಾಲಿಕೆಯ ಗಾಂಧೀಜಿ ಪ್ರತಿಮೆ ಮುಂಭಾಗ ಸತತ ಐದು ದಿನಗಳ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಿದ ಪರಿಣಾಮ ಅಂದಿನ ಸರ್ಕಾರ ದಾವಣಗೆರೆ ನಗರಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಹಾಗೂ ಅಗತ್ಯವಿರುವ ಅನುದಾನವನ್ನು ಮಂಜೂರು ಮಾಡಿತ್ತು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾರ್ಮಿಕ ಮುಖಂಡ ಹೆಚ್.ಜಿ. ಉಮೇಶ್ ಮಾತನಾಡಿ, “ಪಂಪಾಪತಿ ಹಲವು ಕಾರ್ಮಿಕ ನಾಯಕರನ್ನು ಮುನ್ನೆಲೆಗೆ ತಂದಿದ್ದು, ಅದೇ ಸಂದರ್ಭದಲ್ಲಿ ನಗರದಲ್ಲಿ 11 ಹೊಸ ಬಡಾವಣೆಯನ್ನು ನಿರ್ಮಾಣ ಮಾಡುವುದರ ಜೊತೆಗೆ 18 ಸಾವಿರ ಆಶ್ರಯ ನಿರಾಶ್ರಿತರಿಗೆ ನಿವೇಶನಗಳನ್ನು ಹಂಚಿಕೆಮಾಡಿ ಸೂರು ಮಾಡಿಕೊಟ್ಟಿರುವುದು ಈಗ ಇತಿಹಾಸವಾಗಿದೆ. ಇದೇ ರೀತಿ ಹಲವು ಯೋಜನೆಗಳನ್ನು ದಾವಣಗೆರೆ ನಗರಕ್ಕೆ ಶ್ರಮಿಜೀವಿ ಪಂಪಾಪತಿ ಅವರ ಕೊಡುಗೆ ಅಪಾರ. ಮರು ನಿರ್ಮಾಣವಾಗುತ್ತಿರುವ ಸಾರಿಗೆ ಬಸ್ ನಿಲ್ದಾಣಕ್ಕೆ ಶ್ರಮಜೀವಿ ಪಂಪಾಪತಿ ಅವರ ಹೆಸರನ್ನು ನಾಮಕರಣ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಗ್ರಾಮ ಭಾರತಕ್ಕೆ ಬೇಕಿರುವುದು ಯೋಗ, ಧ್ಯಾನ ಕೇಂದ್ರಗಳಲ್ಲ ಬಡವರಿಗೆ ನೆರವಾಗುವ ಆರೋಗ್ಯ ಕೇಂದ್ರಗಳು

“ಎರಡನೇ ಹಂತವಾಗಿ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳುವುದು, ಮೂರನೇ ಹಂತವಾಗಿ ಮುಖ್ಯಮಂತ್ರಿಗಳಿಗೆ ಸಾರಿಗೆ ಸಚಿವರಿಗೆ ಮತ್ತು ಜಿಲ್ಲಾ ಮಂತ್ರಿಗಳ ಬಳಿ ನಿಯೋಗ ಹೋಗುವುದು ಹಾಗೂ ನಾಲ್ಕನೇ ಹಂತವಾಗಿ ದೊಡ್ಡಮಟ್ಟದ ಹೋರಾಟವನ್ನು, ಹಮ್ಮಿಕೊಳ್ಳಲಾಗುವುದು” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಆನಂದರಾಜು, ಮಹಮ್ಮದ್ ರಫೀಕ್, ಎಸ್‌. ರಾಜೇಂದ್ರ ಬಂಗೇರಾ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...

ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ...

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನು ಹೊರತುಪಡಿಸಿ,...

ಪೊಲೀಸ್ ಸಿಬ್ಬಂದಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯಕ್ಕಾಗಿ ಕ್ರಮ; ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶೇ.87 ರಷ್ಟು ಪೊಲೀಸರು ಸ್ಥೂಲಕಾಯ, ಬೊಜ್ಜು ಅಥವಾ ಕಡಿಮೆ...