ಬಾಕಿ ವೇತನ ಪಾವತಿಗೆ ಆಗ್ರಹ; ಕಬ್ಬು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

Date:

ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಉಳಿಸಿಕೊಂಡಿರುವ ವೇತನವನ್ನು ಶೀಘ್ರ ಪಾವತಿ ಮಾಡುವಂತೆ ಸೂಚಿಸಬೇಕು ಎಂದು ಒತ್ತಾಯಿಸಿ ಬಾಲಗಕೋಟೆ ಜಿಲ್ಲಾಡಳಿತ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.

- Advertisement -

ಮುಧೋಳ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಕಬ್ಬು ರೈತರು ಸಕ್ಕರೆ ಕಾರ್ಖಾನೆಗಳ ವಿರುದ್ಧ ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ ನೀತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ರೈತ ಮುಖಂಡರೊಂದಿಗೆ ಮಾತುಕತೆ ನಡೆಯಿತು. ಅಧಿಕಾರಿಗಳು ರೈತರಿಗೆ ಶೀಘ್ರದಲ್ಲೇ ಬಾಕಿ ಪಾವತಿ ಸಂಬಂಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾಡಳಿತ ಭವನದ ಗೇಟ್ ಬಂದ್ ಮಾಡಿ ಬ್ಯಾರಿಕೇಡ್ ಅಳವಡಿಸಿದ್ದು, ರೈತರ ಆಕ್ರೋಶಕ್ಕೆ ಕಾರಣವಾಯಿತು. ಬ್ಯಾರಿಕೇಡ್ ತಳ್ಳಿ ಆವರಣಕ್ಕೆ ತೆರಳಲು ರೈತರು ಯತ್ನಿಸಿದಾಗ ಪೊಲೀಸರು ತಡೆದರು. ಕೋಪಗೊಂಡ ರೈತ ಮುಖಂಡರು “ಜಿಲ್ಲಾಡಳಿತ ಭವನಕ್ಕೆ ಮನವಿ ನೀಡಲು ತೆರಳುತ್ತಿರುವ ನಮಗೆ ಗೌರವವಿಲ್ಲವೇ? ನಾವೇನು ಭಯೋತ್ಪಾದಕರಾ? ಜಿಲ್ಲಾಡಳಿತ ಪದೇ ಪದೆ ರೈತರ ಬಗ್ಗೆ ನಿರ್ಲಕ್ಷ ಧೋರಣೆ ತಾಳುತ್ತಿದೆ. ನಮಗೆ ಒಳಗೆ ಹೋಗಲು ಅವಕಾಶ ಕೊಡಿ ಕೊಡಿ” ಎಂದು ಆಕ್ರೋಶಗೊಂಡರು. ಪೊಲೀಸರು ಹಾಗೂ ರೈತರ ಮದ್ಯೆ ವಾಗ್ವದ ನಡೆಯಿತು. ಕೊನೆಗೆ ಪೊಲೀಸರು ರೈತರು ಒಳಗೆ ಹೋಗಲು ಅವಕಾಶ ಕೊಟ್ಟರು.

WhatsApp Image 2025 06 20 at 1.41.08 PM

ಸಭೆಯಲ್ಲಿ ಮಾತನಾಡಿದ ಆಹಾರ, ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ”ಜಿಲ್ಲೆಯ 14 ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಹಂಗಾಮಿಗೆ ಕಬ್ಬು ನುರಿಸಿವೆ. ಏ.23 ರಂದು ನಡೆಸಿದ ಸಭೆ ಸಂದರ್ಭದಲ್ಲಿ ಅಂದಾಜು 498 ಕೋಟಿ ರೂ. ಬಾಕಿ ಇತ್ತು. ಸಕ್ಕರೆ ಆಯುಕ್ತರ ನೇತೃತ್ವದಲ್ಲಿ ನೋಟಿಸ್ ನೀಡಿ ಬಾಕಿ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ. ಸದ್ಯ 98 ಕೋಟಿ ರೂ. ಬಾಕಿ ಪಾವತಿಸಬೇಕಿದೆ. ಈ ಮಧ್ಯೆ 4 ಕಾರ್ಖಾನೆಗಳು ಬಾಕಿ ಪಾವತಿಗೆ ಕಾಲಾವಕಾಶ ಕೋರಿ ಹೈಕೋರ್ಟ್ ಮೊರೆಹೋಗಿವೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬಾಗಲಕೋಟೆ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಶಿಕ್ಷಕ ಬಂಧನ

ಮುಖಂಡರಾದ ಮುತ್ತಪ್ಪ ಕೋಮಾರ, ಈರಪ್ಪ ಹಂಚಿನಾಳ, ಯಲ್ಲಪ್ಪ ಹೆಗಡೆ, “ಬಾಕಿ ಪಾವತಿಸಬೇಕಾದ ಕಾರ್ಖಾನೆಗಳು ಹೈಕೋರ್ಟ್ ಮೊರೆ ಹೋದರೆ ರೈತರಿಗೆ ಯಾವಾಗ ಹಣ ದೊರೆಯಬೇಕು? ಕುಟುಂಬ ನಿರ್ವಹಣೆ ಕಷ್ಟಕರವಾಗಿರುವಾಗ ಬಾಕಿ ಕೊಡದಿದ್ದರೆ ಕೃಷಿ ಕೈಗೊಳ್ಳಲು ಸಾಧ್ಯವಿಲ್ಲ. ಹೈಕೋರ್ಟ್‌ನಲ್ಲಿ ಸಮರ್ಥವಾಗಿ ವಾದ ಮಂಡಿಸಬೇಕು. ನಿಯಮದ ಪ್ರಕಾರ 14 ದಿನದಲ್ಲಿ ಬಾಕಿ ಕೊಡದಿದ್ದರೆ ಬಡ್ಡಿ ಪಾವತಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ನ್ಯಾಯಾಲಯದ ಗಮನ ಸೆಳೆಯಬೇಕು. ನಾವು ಕಾರ್ಖಾನೆಗಳ ಎದುರು ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆ. ಕಬ್ಬು ಆಯುಕ್ತರ ನೇತೃತ್ವದಲ್ಲಿ ಸಭೆ ನಡೆಸಿ 20 ದಿನದಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ಕೊಡಬೇಕು” ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಸಂಗಪ್ಪ ಎಂ ಮಾತನಾಡಿ, ”ಕಾನೂನಾತ್ಮಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನಹರಿಸಲಾಗುತ್ತದೆ. ತಡೆಯಾಜ್ಞೆ ತೆರವುಗೊಳಿಸಲು ಅಧಿಕಾರಿಗಳು ಸಮರ್ಪಕ ಮಾಹಿತಿ ಒದಗಿಸಲಿದ್ದಾರೆ. ಕಬ್ಬು ಆಯುಕ್ತರೊಂದಿಗೆ ಮಾತನಾಡಿ ಶೀಘ್ರದಲ್ಲಿ ಸಭೆ ಆಯೋಜಿಸಲಾಗುತ್ತದೆ. ನಮಗೆ 20 ದಿನ ಕಾಲಾವಕಾಶ ನೀಡಬೇಕು. ರೈತರ ಪರವಾಗಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ” ಎಂದು ಭರವಸೆ ನೀಡಿದರು.

ಸಭೆಯಲ್ಲಿ ಜಿಪಂ ಸಿಇಒ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಎಸ್‌ಪಿ ಅಮರನಾಥ ರೆಡ್ಡಿ ಹಾಗೂ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರಾಜ್ಯ ಸರ್ಕಾರದ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ: ಸರ್ಕಾರದ ಶವಯಾತ್ರೆ, ಪ್ರತಿಕೃತಿ ದಹನ

ಆರ್ಥಿಕ ದಿವಾಳಿತನದತ್ತ ಸಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ...

ಹಾಸನ | ಸೆ. 27ರಂದು ಭಗತ್ ಸಿಂಗ್ ಜನ್ಮದಿನ; ‘ನಾನೇಕೆ ನಾಸ್ತಿಕ’ 3ನೇ ರಾಜ್ಯಮಟ್ಟದ ವೈಚಾರಿಕ ಸಂವಾದ ಸಮಾವೇಶ

ಹಾಸನ, ಸೆ. 23: ಸ್ವಾತಂತ್ರ್ಯ ಚಳವಳಿಯ ಧ್ರುವತಾರೆ, ಕ್ರಾಂತಿಕಾರಿ ಶಹೀದ್ ಭಗತ್...

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ನಡೆಸಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು...

ಹಾಸನ | ಮೂಢನಂಬಿಕೆ, ಜಾತಿ ತಾರತಮ್ಯ ಮತ್ತು ಅಸಮಾನತೆ ವಿರುದ್ಧ ವೈಚಾರಿಕತೆ ಅಗತ್ಯ; ಸಿಪಿಐಎಂ ಧರ್ಮೇಶ್ 

ಇಂದಿನ ಸಮಾಜದಲ್ಲಿ ಮೂಢನಂಬಿಕೆ, ಕಂದಾಚಾರ, ಜಾತಿ ತಾರತಮ್ಯ, ಅಸ್ಪೃಶ್ಯತೆ, ಕೋಮುವಾದ ಸೇರಿದಂತೆ...