ಬೆಳಗಾವಿ | ಒಂದೇ ದಿನದಲ್ಲಿ ₹8.17 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Date:

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣವರ ಅವರು ಒಂದೇ ದಿನದಲ್ಲಿ ಸುಮಾರು ₹8 ಕೋಟಿ 17 ಲಕ್ಷ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

- Advertisement -

ಕ್ಷೇತ್ರದ ಹಾರೂಗೇರಿ, ಮುಗಳಖೋಡ, ಹಂದಿಗುಂದ, ಹಿಡಕಲ್, ಸವಸುದ್ದಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರಸ್ತೆ ನಿರ್ಮಾಣ, ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ಸೇತುವೆಗಳ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಶಂಕುಸ್ಥಾಪನೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಬೆಳಗ್ಗೆ 10 ಗಂಟೆಗೆ ಆರಂಭವಾದ ಕಾಮಗಾರಿಗಳ ಚಾಲನಾ ಕಾರ್ಯಕ್ರಮ ಸಂಜೆ 4 ಗಂಟೆಯವರೆಗೆ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕುಡಚಿ ಕ್ಷೇತ್ರದಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ, ಗ್ರಾಮೀಣ ಸಂಪರ್ಕ ವ್ಯವಸ್ಥೆ ಸುಧಾರಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಬಳಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರದ ಮೂಲಕ ಕ್ಷೇತ್ರಕ್ಕೆ ಅಭಿವೃದ್ಧಿ ಅನುದಾನ ಒದಗಿಸಿಕೊಳ್ಳುವಲ್ಲಿ ಶಾಸಕ ಮಹೇಂದ್ರ ತಮ್ಮಣ್ಣವರ ಯಶಸ್ವಿಯಾಗಿದ್ದಾರೆ ಎಂದು ಸ್ಥಳೀಯ ಮುಖಂಡರು ಅಭಿಪ್ರಾಯಪಟ್ಟರು.

ಒಂದೇ ದಿನದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿರುವುದು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವ ನಿರೀಕ್ಷೆ ಮೂಡಿಸಿದೆ. ಗ್ರಾಮೀಣ ಪ್ರದೇಶಗಳ ರಸ್ತೆ, ಶಿಕ್ಷಣ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂಬ ಆಶಯವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ AI ತಂತ್ರಜ್ಞಾನದ ನೆರವು: ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿಮತ್ತೆ...

ದೆಹಲಿ | ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ

ಪೂರ್ವ ದೆಹಲಿಯ ಪ್ರೀತ್ ವಿಹಾರ್ ಪ್ರದೇಶದ ಕೆಫೆಯೊಂದರಲ್ಲಿ ಮಂಗಳವಾರ ನಸುಕಿನ ವೇಳೆ...

ಭಾರತದ ಮೇಲೆ‌ ಹೊಸ ಸುಂಕ ಹೇರಲು ಟ್ರಂಪ್ ಆಡಳಿತ ಸಿದ್ಧತೆ; ಶೀಘ್ರವೇ ಅಧಿಕೃತ ಘೋಷಣೆ!

ನಾನಾ ರಾಷ್ಟ್ರಗಳು ದೇಶೀಯ ಕೈಗಾರಿಕಾ ಉತ್ಪಾದನೆಗೆ ಸರ್ಕಾರಿ ಸಬ್ಸಿಡಿ ಮತ್ತು ಬೆಂಬಲ...

ಯಾದಗಿರಿ | ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...