ರಾಜ್ಯದಲ್ಲಿ ಈ ವರ್ಷ ಡೆಂಗ್ಯೂ ಪ್ರಕರಣಗಳಲ್ಲಿ ಶೇ. 22ರಷ್ಟು ಏರಿಕೆ

Date:

Advertisements

ಅಕಾಲಿಕ ಮಳೆ ಹಾಗೂ ಹವಾಮಾನದ ವೈಪರೀತ್ಯದ ಕಾರಣದಿಂದ ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವೈರಲ್‌ ಜ್ವರ ಸೇರಿದಂತೆ ಡೆಂಗ್ಯೂ ರೋಗ ಲಕ್ಷಣಗಳಿಂದ ಬಳಲುತ್ತಿರುವ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿರುವ ಸಂಖ್ಯೆಯೂ ಹೆಚ್ಚಳವಾಗಿದೆ. 2022ಕ್ಕೆ ಹೋಲಿಕೆ ಮಾಡಿದರೆ, ಈ ವರ್ಷ ಡೆಂಗ್ಯೂ ಪ್ರಕರಣಗಳಲ್ಲಿ ಶೇ. 22ರಷ್ಟು ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಕಾರ್ಯಕ್ರಮದ (ಎನ್‌ವಿಬಿಡಿಸಿಪಿ) ಉಪನಿರ್ದೇಶಕ ಡಾ.ಮಹಮೂದ್ ಷರೀಫ್ ಮಾತನಾಡಿ, “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಕಂಡುಬಂದಿದೆ. ನಗರದ ಪೂರ್ವ, ದಕ್ಷಿಣ ಮತ್ತು ಮಹದೇವಪುರ ವಲಯಗಳಲ್ಲಿ ಒಟ್ಟು 2969 (ಶೇ.60) ಪ್ರಕರಣಗಳು ಕಂಡುಬಂದಿವೆ. ನಗರದಲ್ಲಿ ವಲಸೆ ಜನಸಂಖ್ಯೆ ಹೆಚ್ಚಾಗಿರುವ ಕಾರಣದಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಳ ಕಾಣುತ್ತಿವೆ” ಎಂದರು.

ಕಳೆದ ವರ್ಷ ಜನವರಿಯಿಂದ ಆಗಸ್ಟ್‌ವರೆಗೆ 4,507 ಮಂದಿ ಡೆಂಗ್ಯೂಯಿಂದ ಬಳಲುತ್ತಿದ್ದರು. ಈ ವರ್ಷ ಆಗಸ್ಟ್ 11 ರವರೆಗೆ 5,526 ಜನರಲ್ಲಿ ಡೆಂಗ್ಯೂ ಪ್ರಕರಣಗಳು ಕಂಡುಬಂದಿವೆ. ಇದರಿಂದ ಶೇ.22 ರಷ್ಟು ಸೋಂಕಿನ ಪ್ರಮಾಣ ಹೆಚ್ಚಳವಾಗಿದೆ. ಅಲ್ಲದೆ, ಮೈಸೂರು 353, ವಿಜಯಪುರ 146, ಶಿವಮೊಗ್ಗ 155, ದಕ್ಷಿಣ ಕನ್ನಡ 110, ಉಡುಪಿ 126 ಹಾಗೂ ಬೆಳಗಾವಿಯಲ್ಲಿ 135 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಇವು ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಹೊಂದಿರುವ ಇತರ ಜಿಲ್ಲೆಗಳಾಗಿವೆ.

Advertisements

ಈಡಿಸ್ ಸೊಳ್ಳೆಗಳಿಂದ ಡೆಂಗ್ಯೂ ರೋಗಕ್ಕೆ ಕಾರಣವಾಗುತ್ತವೆ. ಸೊಳ್ಳೆಯು ಜಿಕಾ, ಚಿಕೂನ್‌ಗುನ್ಯಾ ಹಾಗೂ ಇತರ ವೈರಸ್‌ಗಳನ್ನು ಸಹ ಹರಡುತ್ತಿದೆ. ಜಾಗತಿಕವಾಗಿ ಪ್ರತಿ ವರ್ಷ ಸುಮಾರು 400 ಮಿಲಿಯನ್ ಜನರು ಡೆಂಗ್ಯೂ ಸೋಂಕಿಗೆ ಒಳಗಾಗುತ್ತಾರೆ. ಈ ವರ್ಷ ಡೆಂಗ್ಯೂಯಿಂದ ಯಾವುದೇ ಸಾವು ಸಂಭವಿಸಿಲ್ಲ, ಆದರೆ, ರಾಜ್ಯದಲ್ಲಿ ಕಳೆದ ವರ್ಷ ನಾಲ್ಕು ಸಾವು ಸಂಭವಿಸಿದ್ದವು ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ತಿಳಿಸಿದೆ.

“ಕೋವೀಡ್‌ ಸಮಯದಲ್ಲಿ ಹೆಚ್ಚಿನ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿತ್ತು. ಹೀಗಾಗಿ, ಡೆಂಗ್ಯೂ ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಮಕ್ಕಳನ್ನು ಹೆಚ್ಚಾಗಿ ಬಾಧಿಸುತ್ತಿವೆ. ಈ ಮಳೆಗಾಲದಲ್ಲಿ ಡೆಂಗ್ಯೂ, ವೈರಲ್ ಜ್ವರ, ಟೈಫಾಯಿಡ್, ಅತಿಸಾರ ರೋಗ ಹಾಗೂ ವೈರಲ್ ನ್ಯುಮೋನಿಯಾ ಪ್ರಕರಣಗಳು ಸಹ ಏರಿಕೆ ಕಂಡಿವೆ” ಎಂದು ವೈದ್ಯರು ಹೇಳಿದ್ದಾರೆ.

“ಡೆಂಗ್ಯೂ ಹಾಗೂ ಇತರ ಸಾಂಕ್ರಾಮಿಕ ರೋಗಗಳು ಹರಡದಿರಲು ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಡಿಕೊಳ್ಳಬೇಕು. ಮನೆಗಳ ಒಳಗೆ ಮತ್ತು ಸುತ್ತಮುತ್ತ ಸಂಗ್ರಹವಾಗಿರುವ ನೀರನ್ನು ಹೊರಹಾಕಬೇಕು. ಸೊಳ್ಳೆ ನಿಯಂತ್ರಣ ಔಷಧಿಗಳನ್ನು ಸಿಂಪಡಿಸಬೇಕು. ಉದ್ದನೆಯ ತೋಳಿನ ಬಟ್ಟೆ ಧರಿಸಬೇಕು. ಜ್ವರ, ಮೂಗು ಸೊರುವಿಕೆ, ತಲೆನೋವು ಹಾಗೂ ಮೈ ಕೈ ನೋವು ಮುಂತಾದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ 57 ಗುತ್ತಿಗೆದಾರರ ವಿರುದ್ಧ ಎಫ್‌ಐಆರ್‌ ದಾಖಲು

“ಈ ವರ್ಷ ಪೂರ್ವ ಮತ್ತು ದಕ್ಷಿಣ ವಲಯಗಳಲ್ಲಿ ಹೆಚ್ಚಿನ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಪ್ರಕರಣಗಳ ತೀವ್ರತೆಯನ್ನು ಅಧ್ಯಯನ ಮಾಡಲು ಮತ್ತು ಹೊಸ ವೈರಸ್‌ಗಳನ್ನು ಪತ್ತೆ ಮಾಡಲು ಶಾಲೆಗಳು, ದೇವಸ್ಥಾನಗಳು, ಮನೆಗಳು ಮತ್ತು ಹೆಚ್ಚಿನ ರೋಗಿಗಳು ಭೇಟಿ ನೀಡುವ ಆಸ್ಪತ್ರೆಗಳಲ್ಲಿ ಕಣ್ಗಾವಲು ಇಡಲಾಗಿದೆ. ವಿಶೇಷವಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ.ಕೆ.ವಿ.ತ್ರಿಲೋಕ್ ಚಂದ್ರ ಹೇಳಿದ್ದಾರೆ.

ಇತ್ತೀಚೆಗೆ ಲೋಕಲ್ ಸರ್ಕಲ್ಸ್‌ ಕರ್ನಾಟಕದಲ್ಲಿ ಸಮೀಕ್ಷೆ ನಡೆಸಿದೆ. ಈ ಸಮೀಕ್ಷೆಗೆ ಒಳಪಟ್ಟ 33 ಪ್ರತಿಶತ ಕುಟುಂಬಗಳು ಪ್ರಸ್ತುತ ಒಂದು ಅಥವಾ ಹೆಚ್ಚಿನ ವ್ಯಕ್ತಿಗಳು ವೈರಲ್/ಕೋವಿಡ್ ತರಹದ ರೋಗಲಕ್ಷಣಗಳಿಂದ ಅಸ್ವಸ್ಥರಾಗಿದ್ದಾರೆ ಎಂದು ವರದಿ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X