ಪತ್ರಕರ್ತ ಕೇಳಿದ್ದ ಮಾಹಿತಿ ನಿರಾಕರಣೆ: ವಾರ್ತಾಧಿಕಾರಿ ರೋಹಿಣಿಗೆ ದಂಡ ವಿಧಿಸಿದ ಹೈಕೋರ್ಟ್

Date:

Advertisements

ಪತ್ರಕರ್ತರೋರ್ವರು ಆರ್‌ಟಿಐ ಮೂಲಕ ಕೇಳಿದ್ದ ಮಾಹಿತಿ ನೀಡಲು ನಿರಾಕರಿಸಿದ ಆರೋಪದ ಮೇಲೆ ತಮ್ಮ ಮೇಲೆ ಮಾಹಿತಿ ಆಯೋಗ ದಂಡ ವಿಧಿಸಿದ್ದ ಪ್ರಕರಣವನ್ನು ರಿಟ್ ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದ ವಾರ್ತಾಧಿಕಾರಿಯೋರ್ವರ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದ್ದು, ದಂಡ ವಿಧಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.

2013ರಲ್ಲಿ ರೋಹಿಣಿ ಕೆ ಅವರು ದ. ಕ. ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದಾಗ ಪತ್ರಕರ್ತ ಇಕ್ಬಾಲ್ ಕುತ್ತಾರ್ ಎಂಬುವವರು ಇಲಾಖೆಯು ಏರ್ಪಡಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಪ್ರೌಢಶಾಲಾ ಗಿರಿಜನ ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದ ಖರ್ಚು ವೆಚ್ಚಗಳ ವಿವರ ಕೋರಿ ಮಾಹಿತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಮಾಹಿತಿ ನೀಡದೆ ನಿರಾಕರಿಸಿದ್ದ ವಾರ್ತಾಧಿಕಾರಿ ರೋಹಿಣಿ ವಿರುದ್ಧ ಇಕ್ಬಾಲ್ ಕುತ್ತಾರ್ ರಾಜ್ಯ ಮಾಹಿತಿ ಆಯೋಗದಲ್ಲಿ ದೂರು ಸಲ್ಲಿಸಿದಾಗ, ತನಿಖೆ ನಡೆಸಿದ ಆಯೋಗ ಮಾಹಿತಿ ನಿರಾಕರಿಸಿರುವುದು ಸರಿಯಲ್ಲವೆಂದು ರೋಹಿಣಿ ಅವರಿಗೆ ದಂಡ ವಿಧಿಸಿ ಆದೇಶ ನೀಡಿತ್ತು.

ಮಾಹಿತಿ ಆಯೋಗದ ಈ ಆದೇಶವನ್ನು ಸಂವಿಧಾನದ ಕಲಂ 226 ಮತ್ತು 227ರ ಪ್ರಕಾರ ರದ್ದುಪಡಿಸುವಂತೆ ರೋಹಿಣಿ ಅವರು ರಾಜ್ಯ ಹೈಕೋರ್ಟ್ ಮೆಟ್ಟಿಲೇರಿ 2015ರಲ್ಲಿ ರಿಟ್ ಅರ್ಜಿ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಜ್ಯ ಮಾಹಿತಿ ಆಯೋಗ ಹಾಗೂ ಇಕ್ಬಾಲ್ ಕುತ್ತಾರ್ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದರು.

Advertisements

ಕಳೆದ ಎಂಟು ವರ್ಷಗಳಿಂದ ಫಿರ್ಯಾದುದಾರರು ಹಾಗೂ ಪ್ರತಿವಾದಿಗಳ ವಾದ ಪ್ರತಿವಾದಗಳನ್ನು ಆಲಿಸಿದ ರಾಜ್ಯ ಹೈಕೋರ್ಟ್, ಈ ಪ್ರಕರಣದಲ್ಲಿ ಇದೀಗ ಮಹತ್ವದ ಆದೇಶ ನೀಡಿದೆ.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ ‘ಕೈ’ಗೆ ಸಿಗುತ್ತಿದ್ದಂತೆ ರಾಮ ರಾಜ್ಯ ತುಘಲಕ್ ರಾಜ್ಯವಾಗಿ ಬದಲಾಗಿದೆ: ಬಿಜೆಪಿ ವಾಗ್ದಾಳಿ

ಪ್ರಕರಣದಲ್ಲಿ ಫಿರ್ಯಾದುದಾರರ ಅರ್ಹತೆಯ ಕೊರತೆಯಿದ್ದು, ರಾಜ್ಯ ಮಾಹಿತಿ ಆಯೋಗದ ಆದೇಶ ರದ್ದುಪಡಿಸಲು ಯೋಗ್ಯವಲ್ಲವೆಂದು ಮನಗಂಡಿದೆ. ಅಲ್ಲದೆ ವಾರ್ತಾಧಿಕಾರಿ ರೋಹಿಣಿ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿ, ಪ್ರಕರಣದಲ್ಲಿ ಮಾಹಿತಿ ನಿರಾಕರಿಸಲ್ಪಟ್ಟು ಆಯೋಗಕ್ಕೆ ದೂರು ಸಲ್ಲಿಸಿ ದಂಡನೆ ವಿಧಿಸಲು ಕಾರಣರಾದ ಇಕ್ಬಾಲ್ ಕುತ್ತಾರ್ ಅವರಿಗೆ ರೋಹಿಣಿ ಅವರು ಒಂದು ತಿಂಗಳೊಳಗಾಗಿ 25 ಸಾವಿರ ರೂ. ದಂಡವನ್ನು ನೀಡುವಂತೆ ನ್ಯಾಯಮೂರ್ತಿ ಆರ್. ನಟರಾಜ್ ತೀರ್ಪು ನೀಡಿರುವುದು ಹೈಕೋರ್ಟ್ ಆದೇಶದಲ್ಲಿ ಪ್ರಕಟವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X