ಆರೋಪಿಯ ವಿವರಣೆ ಕೇಳದೆ ಗಡಿಪಾರು; ಸರ್ಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್‌

Date:

ಅಪರಾಧ ಚಟುವಟಿಕೆಗಳಲ್ಲಿ ತೊಡಗಿ, ಸಾರ್ವಜನಿಕ ಶಾಂತಿ ಹಾಳು ಮಾಡುತ್ತಿದ್ದ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಹಲಗೂರಿನ ಆರ್ ಪ್ರಮೋದ್ ಎಂಬಾತನನ್ನು ಮಂಡ್ಯ ಜಿಲ್ಲೆಯಿಂದ ಗಡಿಪಾರು ಮಾಡಿ ಸರ್ಕಾರ ಆದೇಶಿಸಿದೆ. ಈ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಪ್ರಮೋದ್ ವಿರುದ್ಧ ಹಲಗೂರು ಠಾಣೆಯಲ್ಲಿ ಕೊಲೆ ಆರೋಪ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಆತನಿಂದಾಗಿ ಸಾರ್ವಜನಿಕ ಶಾಂತಿ ಹಾಳಾಗುತ್ತಿದೆ ಎಂದು ಠಾಣೆಯ ಪೊಲೀಸರು ವರದಿ ಸಲ್ಲಿಸಿದ್ದರು. ವರದಿ ಆಧರಿಸಿ ಆತನನ್ನು ಏಪ್ರಿಲ್ 2ರಿಂದ ಜುಲೈ 7ರವರೆಗೆ ಮಂಡ್ಯ ಜಿಲ್ಲೆಯಿಂದ ಕೋಲಾರ ಜಿಲ್ಲೆಗೆ ಗಡಿಪಾರು ಮಾಡಿ ಮಂಡ್ಯ ಉಪ ವಿಭಾಗದ ಸಹಾಯಕ ಉಪ ವಿಭಾಗಾಧಿಕಾರಿ ಆದೇಶಿಸಿದ್ದರು.

ಗಡಿಪಾರು ಅದೇಶ ರದ್ದು ಮಾಡುವಂತೆ ಕೋರಿ ಪ್ರಮೋದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಚಾರಣೆ ವೇಳೆ ಪ್ರಮೋದ್‌ ಪರ ವಾದ ಮಂಡಿಸಿದ ವಕೀಲ ಸಿ.ಎನ್‌. ರಾಜು, ”ಗಡಿಪಾರು ಮಾಡುವ ಮುನ್ನ ಆರೋಪಿಯ ವಿವರಣೆ ಕೇಳಿ ಶೋಕಾಸ್‌ ನೋಟಿಸ್‌ ತಲುಪಿಸಿಲ್ಲ. ಪ್ರಮೋದ್ ಬೆಂಗಳೂರಿನಲ್ಲಿ ವಾಸವಾಗಿದ್ದು, ಪೊಲೀಸರು ಹಲಗೂರಿನಲ್ಲಿರುವ ಆತನ ಮನೆಗೆ ನೋಟಿಸ್‌ ಅಂಟಿಸಿ ಹೋಗಿದ್ದಾರೆ. ಅಲ್ಲದೆ, ಆ ನೋಟಿಸ್‌ನಲ್ಲಿಯೂ ವಿವರಣೆ ನೀಡಲು ಉಪ ವಿಭಾಗಾಧಿಕಾರಿ ಎದುರು ಯಾವ ದಿನದಂದು ಹಾಜರಾಗಬೇಕು ಎಂಬ ದಿನಾಂಕವನ್ನೇ ನಮೂದಿಸಿಲ್ಲ. ಅವರಿಗೆ ತಿಳಿಯದಂತೆ ಗಡಿಪಾರು ಆದೇಶ ಹೊರಡಿಸಲಾಗಿದೆ” ಎಂದು ವಾದಿಸಿದ್ದಾರೆ.

ವಾದವನ್ನು ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, “ಆರೋಪಿ ಪ್ರಮೋದ್‌ಗೆ ಶೋಕಾಸ್‌ ನೋಟಿಸ್‌ ತಲುಪಿಸದೇ ಮತ್ತು ಅವರ ವಿವರಣೆಯನ್ನೂ ಕೇಳದೇ ಗಡಿಪಾರು ಮಾಡಿರುವುದು ಕಾನೂನು ಬಾಹಿರವಾಗಿದೆ. ಒಂದು ವೇಳೆ, ಅರ್ಜಿದಾರರ ವಿರುದ್ಧ ಕ್ರಮ ಜರುಗಿಸುವುದು ಅಗತ್ಯವೇ ಇದ್ದಲ್ಲಿ, ಕಾನೂನು ಪ್ರಕಾರ ನಿಯಮಗಳನ್ನು ಅನುಸರಿಸಿ ಕ್ರಮ ಕೈಗೊಳ್ಳಬಹುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃದ್ಧರು ಹಾಗೂ ವಿಕಲಚೇತನರ ಬೆಂಬಲ ಸಭೆ

ಪಿಂಚಣಿ ಕಡಿತ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಮತ್ತು ವಿಕಲಚೇತನರಿಗೆ ಉಂಟಾಗುತ್ತಿರುವ...

ಕೋಲಾರ | ಜಡತ್ವಕ್ಕೆ ವಿವೇಕ ನೀಡಿದ ಕುಸ್‌ ಕುಸ್ ದಿಲ್ ಕುಶ್ ನಾಟಕ

ಯಾವುದು ಸ್ಥಿರವಲ್ಲ. ಗಳಿಗೆ ಗಳಿಗೆಯೂ ಬದಲಾಗುತ್ತಿರುತ್ತದೆ. ಸ್ಥಿರವೆಂದು ಭಾವಿಸಿದವನಿಗೆ ಅವನ ತಲೆಯೇ...

ರಾಯಚೂರು | ಮದುವೆಗೆ ಪ್ರಿಯಕರನ ಮನೆಯವರ ವಿರೋಧ : ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

ಪ್ರೀತಿಸಿದ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಯುವತಿ ಮಹಿಳಾ...

ದಕ್ಷಿಣ ಕನ್ನಡ | ಭಾರೀ ಮಳೆ; ಕಲ್ಲಡ್ಕದಲ್ಲಿ ರಸ್ತೆಯೇ ಮಾಯವಾದ ದೃಶ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಭಾರೀ ಮಳೆ ಸುರಿಯಿತು....