ಬೀದರ್‌ | ಕಲ್ಲಡ್ಕ ಪ್ರಭಾಕರ್‌ ಭಟ್ ಬಂಧನಕ್ಕೆ ದಸಂಸ ಆಗ್ರಹ

Date:

Advertisements

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಬಣ) ಜಿಲ್ಲಾ ಘಟಕ ಆಗ್ರಹಿಸಿದೆ.

ಈ ಕುರಿತು ದಸಂಸ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿದರು.

“2023ರ ಡಿಸೆಂಬರ್‌ 24ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಮಾತನಾಡಿ, ʼಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡ, ಜೀವನಪೂರ್ತಿ ಪರ್ಮನೆಂಟ್‌ ಗಂಡನೇ ಇರಲಿಲ್ಲ. ಅವರಿಗೆ ಪರ್ಮನೆಂಟ್‌ ಗಂಡ ಕೊಟ್ಟಿದ್ದು ಮೋದಿ ಸರ್ಕಾರʼ ಎಂದು ಬಾಯಿ ಚಪಲಕ್ಕಾಗಿ ಹೇಳುವ ಮೂಲಕ ಮುಸ್ಲಿಂ ಮಹಿಳೆಯರನ್ನು ಅವಮಾನಿಸಿದ್ದಾರೆ. ಧರ್ಮ ಧರ್ಮಗಳ ಮಧ್ಯೆ ಬೆಂಕಿ ಹಚ್ಚುವಂತಹ, ಕೋಮು ಗಲಭೆಗಳಿಗೆ ಪ್ರಚೋದನೆ ನೀಡುವ ಕೆಲಸ ಮಾಡಿದ್ದಾರೆ” ಎಂದು ದೂರಿದರು.

Advertisements

“ಕಲ್ಲಡ್ಕ ಪ್ರಭಾಕರ ಭಟ್ಟನ ದ್ವೇಷ ಭಾಷಣದಿಂದ ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿ ಜೀವ ಹಾನಿಯೂ ಸಂಭವಿಸಬಹುದಾಗಿದ್ದು, ಇಂಥಹ ದ್ವೇಷ ಭಾಷಣಗೈಯುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ, ಅಲ್ಲದೆ ದ್ವೇಷ ಭಾಷಣ ಮಾಡಿದವರ ವಿರುದ್ಧ ಪೊಲೀಸರೇ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಅವಕಾಶವಿದೆ. ಆದರೆ ಅವನ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇದು ಮುಸ್ಲಿಂ ಮಹಿಳೆಯರಿಗೆ ಮಾಡಿದ ಅಪಮಾನ ಅಲ್ಲದೇ ಎಲ್ಲಾ ಜಾತಿ ಧರ್ಮದ ಮಹಿಳೆಯರಿಗೆ ಆದ ಅಪಮಾನವಾಗಿದೆ, ಯಾವುದೇ ಧರ್ಮ, ಜಾತಿಗೆ ಸೇರಿದ ಮಹಿಳೆಯನ್ನು ಅವಮಾನಿಸುವುದು ಸರಿಯಲ್ಲ. ಕೂಡಲೇ ಪ್ರಭಾಕರ್‌ ಭಟ್‌ನನ್ನು ಗುಂಡಾ ಕಾಯ್ದೆಯಡಿ ಬಂಧಿಸಿ, ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದರು.

“ಸರ್ಕಾರ ಕಾಂತರಾಜ ಆಯೋಗದ ವರದಿ ಜಾರಿಗೆ ತರಬೇಕು. ಜ.26ರಂದು ಎಲ್ಲ ಇಲಾಖೆಗಳಲ್ಲಿ ಕಡ್ಡಾಯವಾಗಿ ಸಂವಿಧಾನ ದಿನ ಆಚರಿಸಬೇಕು. ಆಚರಿಸದವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ದಲಿತರಿಗೆ ಹೋಟೆಲ್‌ನಲ್ಲಿ ಊಟ ಕೊಡದೆ ಅಸ್ಪೃಶ್ಯತೆ ಆಚರಣೆ

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪೂರ, ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ಲಾಧಾ, ಔರಾದ್‌ ತಾಲ್ಲೂಕು ಸಂಚಾಲಕ ಜೈಪ್ರಕಾಶ ಅಷ್ಟೂರೆ, ಭಾಲ್ಕಿ ತಾಲ್ಲೂಕು ಸಂಚಾಲಕ ಆಕಾಶ ಸಿಂಧೆ, ಪ್ರಮುಖರಾದ ಜಗದೀಶ ಸೋನಿ, ಪ್ರಭುರಾವ ಬಾಚೆಪಳ್ಳಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X