ಬೀದರ್‌ | ಬಸವಣ್ಣನವರ ಭಾವಚಿತ್ರಕ್ಕೆ ಅಪಮಾನ: ವ್ಯಾಪಕ ಖಂಡನೆ

Date:

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಸುಟ್ಟು ವಿಕೃತಿ ಮೆರೆದಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಭಾಲ್ಕಿ ತಾಲೂಕು ಕರವೇ (ನಾರಾಯಣ ಗೌಡ) ಬಣದ ಗೌರವಾಧ್ಯಕ್ಷ ರಮೇಶ ಚಿದ್ರಿ ಮತ್ತು ಅಧ್ಯಕ್ಷ ಗಣೇಶ ಪಾಟೀಲ್ ಒತ್ತಾಯಿಸಿದ್ದಾರೆ.

- Advertisement -

ಈ ಕುರಿತು ಸಿಎಂಗೆ ಪತ್ರ ಬರೆದಿರುವ ಅವರು, “ವಿಶ್ವಕ್ಕೆ ಸಮಾನತೆ ಸಾರಿರುವ ವಿಶ್ವಚೇತನ ಬಸವಣ್ಣವರ ಭಾವಚಿತ್ರ ಸುಟ್ಟಿರುವುದರು ಖಂಡನೀಯ. ಕೂಡಲೇ ಸರಕಾರ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ
ಒಳಪಡಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಜಿಲ್ಲಾ ಕುಂಬಾರ ಸಮಾಜ ಖಂಡನೆ

ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಕೆಲವು ಕಿಡಿಗೇಡಿಗಳು ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಸುಟ್ಟು ವಿಕೃತಿ ಮೆರೆದಿರುವ ಘಟನೆಗೆ ಬೀದರ್ ಜಿಲ್ಲಾ ಕುಂಬಾರ ಸಮಾಜದ ಜಿಲ್ಲಾ ಉಪಾಧ್ಯಕ್ಷ ರಾಜಕುಮಾರ ಕುಂಬಾರ ಹಲ್ಬರ್ಗಾ ತೀವ್ರವಾಗಿ ಖಂಡಿಸಿದ್ದಾರೆ.

“ಬಸವಣ್ಣನವರು ಒಂದು ಜಾತಿಗೆ ಸೇರಿದವರಲ್ಲ, ಇಡೀ ವಿಶ್ವವೇ ಬಸವಣ್ಣನವರ ಸಂದೇಶಗಳಿಗೆ ಮಾರುಹೋಗಿ ವಂದಿಸುತ್ತದೆ. ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ್ದರು ಬಸವಣ್ಣನವರು. 12ನೇ ಶತಮಾನದಲ್ಲಿ ಕಲ್ಯಾಣ ರಾಜ್ಯ ನಿರ್ಮಾಣಕ್ಕೆ ಶ್ರಮಿಸಿದವರು. ಇಂತಹ ಮಹಾತ್ಮರ ಭಾವಚಿತ್ರಕ್ಕೆ ಅಪಮಾನಗೊಳಿಸಿದ ಕಿಡಿಗೇಡಿಗಳ ಕೃತ್ಯ ಸಮಸ್ತ ಬಸವಾನುಯಾಯಿಗಳಿಗೆ ನೋವುಂಟು ಮಾಡಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಬಸವಣ್ಣನವರನ್ನು ಪರಿಪೂರ್ಣವಾಗಿ ಅರಿಯದೆ ಹೀನ ಮನಸ್ಥಿತಿ ಉಳ್ಳವರು ಮಾತ್ರ ಇಂತಹ ಕೃತ್ಯ ಎಸಗಲು ಸಾಧ್ಯ. ಇಂತಹ ಹೇಯ ಕೃತ್ಯ ನಡೆದಿರುವುದು ಅಕ್ಷಮ್ಯ ಅಪರಾಧ. ಕೃತ್ಯದಲ್ಲಿ ಭಾಗಿಯಾದವರನ್ನು ಸರ್ಕಾರ ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಈ ರೀತಿಯ ಘಟನೆ ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕು” ಎಂದು ಆಗ್ರಹಿಸಿದರು.

ಕಿಡಿಕೇಡಿಗಳ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

ಕಲ್ಯಾಣ ರಾಜ್ಯ ನಿರ್ಮಾಣ ಕನಸು ಹೊತ್ತು ಸಮಾನತೆ ಸಮಾಜ ಕಟ್ಟಲು ಬಯಸಿದ ಬಸವಣ್ಣನವರಿಗೆ ತನ್ನ ಕಾರ್ಯ ಕ್ಷೇತ್ರದಲ್ಲೇ ಅವಮಾನಿಸಿರುವುದನ್ನು ಕರ್ನಾಟಕ ವಿದ್ಯಾರ್ಥಿ ವೇದಿಕೆ ಹುಮನಾಬಾದ್‌ ತಾಲೂಕು ಘಟಕ ಖಂಡಿಸಿದೆ.

ಈ ಕುರಿತು ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಾಲೂಕು ಆಡಳಿತಕ್ಕೆ ಸಲ್ಲಿಸಿದ ವೇದಿಕೆಯ ಪ್ರಮುಖರು, ” ಬಸವಣ್ಣನವರಿಗೆ ಅವಮಾನಿಸಿದ್ದು ಬಸವ ಅನುಯಾಯಿಗಳಿಗೆ ನೋವುಂಟು ಮಾಡಿದೆ. ಈ ಕೃತ್ಯ ಎಸಗಿದ ಕಿಡಿಗೇಡಿಗಳ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ” ಎಂದು ಅವರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅನಧಿಕೃತ ಡಿಜಿಟಲ್‌ ಖಾತಾ ವಿತರಣೆ: ಚಿಟ್ಟಾ ಗ್ರಾಮ ಪಂಚಾಯಿತಿ ಪಿಡಿಒ ಅಮಾನತು

ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯಾರ್ಥಿ ವೇದಿಕೆಯ ಹುಮನಾಬಾದ್‌ ತಾಲೂಕು ಅಧ್ಯಕ್ಷ ಮನೋಜ ಸಿತಾಳೆ, ಸುಭಾಷ ಕೆನಾಡೆ, ಅರವಿಂದ ಜೋಗಿರೆ, ರಾಮು ಪರೀಟ, ಸಂಗಮೇಶ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...