ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

Date:

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲಿದ್ದ 46 ಬೃಹತ್ ಮರಗಳನ್ನು ಅಕ್ರಮವಾಗಿ ಕಡಿದಿರುವ ಘಟನೆ ವಿರುದ್ಧ, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಅರಣ್ಯ ಭವನದ ಮುಂದೆ ಪ್ರತಿಭಟನೆ ನಡೆಸಿದರು.

- Advertisement -

ಪರಿಸರಕ್ಕಾಗಿ ನಾವು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ ಮಾತನಾಡಿ, ಘಟನೆ ನಡೆದು ಎರಡು ವಾರಗಳಾದರೂ ತನಿಖೆಯಲ್ಲಿ ಯಾವುದೇ ಪ್ರಗತಿ ಆಗಿಲ್ಲ. ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಿಲ್ಲ. ಮರಗಳನ್ನು ಅಕ್ರಮವಾಗಿ ಕಡಿಯಲು ಕಾರಣರಾದವರನ್ನು ಇನ್ನೂ ಪತ್ತೆ ಹಚ್ಚಿಲ್ಲ. ಇಷ್ಟು ಗಂಭೀರವಾದ ಘಟನೆಯನ್ನು ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತ ಹಗುರವಾಗಿ ತೆಗೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಹಾಡುಹಗಲೇ ರಾಜಾರೋಷವಾಗಿ ಸರ್ಕಾರಿ ಜಾಗದಲ್ಲಿದ್ದ 46 ಬೃಹತ್ ಮರಗಳನ್ನು ಅಕ್ರಮವಾಗಿ ಕಡಿದಿರುವುದು ಅರಣ್ಯ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿಷ್ಕ್ರಿಯತೆಯನ್ನು ತೋರಿಸುತ್ತದೆ. ಈ ಘಟನೆ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಿ ಮರಗಳನ್ನು ಕಡಿದರವರಿಗೆ, ಕಡಿಯಲು ಕಾರಣರಾದವರಿಗೆ ಮತ್ತು ಇವರ ಜೊತೆಗೆ ಶಾಮೀಲಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಲು ತಕ್ಷಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಘಟನೆ ನಡೆದಿರುವುದು ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಅಷ್ಟೇ ಅಲ್ಲ, ಅವರೇ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ. ಮುಖ್ಯ ಮಂತ್ರಿಗಳೇ ಖುದ್ದು ಆಸಕ್ತಿ ವಹಿಸಿ ಈ ಅಕ್ರಮ ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗುವಂತೆ ಕಾನೂನು ರೀತ್ಯಾ ಕ್ರಮಗಳನ್ನು ವಹಿಸುವ ಮೂಲಕ ಇಂತಹ ಘಟನೆಗಳನ್ನು ಸರ್ಕಾರ ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡಬೇಕು ಎಂದು ಉಪ ಸಂರಕ್ಷಣಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಪ್ರತಿಭಟನೆಯಲ್ಲಿ ಪರಿಸರಕ್ಕಾಗಿ ನಾವು ಸಂಘಟನೆಯ ಲೀಲಾ, ಭಾಗ್ಯ, ಅಂಜನಾ, ಸುಗುಣ, ಪ್ರಭಾ, ಗಂಟಯ್ಯ, ಬಾನು ಪ್ರಶಾಂತ್, ಶೈಲಜೇಶ್, ಗುರುಸ್ವಾಮಿ, ಸವಿತಾ, ಸ್ಮಿತಾ, ಅಕ್ಬರ್, ಬಂಗಾರ ನಾಯಕ, ವಿಶ್ವನಾಥ್, ಸುಧೀರ್, ಶಿವಶಂಕರ್, ಸುಮಲತಾ, ಶ್ಯಾಮಲಾ, ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಹೊಸಕೋಟೆ ಬಸವರಾಜು, ಪಿ. ಮರಂಕಯ್ಯ, ಕೆ ಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರವಿಕುಮಾರ್, ರಾಜ್ಯ ಉಪಾಧ್ಯಕ್ಷ ಕೆ. ಎಸ್ ಸೋಮಸುಂದರ್, ಮೈಸೂರು ಗ್ರಾಹಕರ ಪರಿಷತ್ತಿನ ಶೋಭನಾ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...