ದಾವಣಗೆರೆ | ಹೊಸ ರೀತಿಯ ಅಪರಾಧ ಕೃತ್ಯಗಳು ಪೊಲಿಸರಿಗೆ ಸವಾಲು: ಐಜಿಪಿ ಡಾ.ರವಿಕಾಂತೇಗೌಡ

Date:

“ಭವಿಷ್ಯದಲ್ಲಿ ಪೊಲೀಸರ ವೃತ್ತಿ ಮತ್ತಷ್ಟು ಕಠಿಣವಾಗಲಿದ್ದು, ಹೆಚ್ಚುತ್ತಿರುವ ಹೊಸ ರೀತಿಯ ಅಪರಾಧ ಕೃತ್ಯಗಳು ಸವಾಲಾಗಲಿವೆ, ಪೊಲೀಸರು ಹೊಸ ಟೂಲ್ ಗಳನ್ನು ಪರಿಣಾಮಕಾರಿಯಾಗಿ ಬಳಸಬೇಕಿದೆ” ಎಂದು ದಾವಣಗೆರೆಯಲ್ಲಿ ಪೂರ್ವ ವಲಯ (IGP) ಪೊಲೀಸ್ ಮಹಾನಿರೀಕ್ಷಕ ಡಾ.ರವಿಕಾಂತೇಗೌಡ ಐಪಿಎಸ್ ರವರು ಹೇಳಿದರು* .

- Advertisement -
1003009535

ದಾವಣಗೆರೆ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ನಡೆದ 7 ನೇ ವಲಯ ಪೊಲೀಸ್ ಕರ್ತವ್ಯಕೂಟ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ “ಕರ್ನಾಟಕದಲ್ಲಿ ಪ್ರತಿ ವರ್ಷ 27 ಸಾವಿರ ಸೈಬರ್ ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ವಂಚನೆಯಾಗುತ್ತಿರುವ ಮೊತ್ತ ನೂರಾರು ಕೋಟಿಗಳಾಗಿವೆ. ಈ ರೀತಿ ಹೊಸ ಅಪರಾಧಗಳು, ಹೊಸ ಶೈಲಿಯ ಅಪರಾಧಿಗಳು ನಮ್ಮ ಮುಂದೆ ಬರುತ್ತಿವೆ.‌ ಇದರ ಮಧ್ಯೆ ಪೊಲೀಸ್ ಇಲಾಖೆಯಲ್ಲಿ ಕಟ್ಟಡಗಳು ಮತ್ತು ವಾಹನಗಳು ಉತ್ತಮಗೊಂಡಿರಬಹುದು, ಆದರೆ, ಪೊಲೀಸರಿಗೆ ಎದುರಾಗಿರುವ ಸವಾಲುಗಳ ಸ್ವರೂಪ, ಆಯಾಮ ಬದಲಾಗಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

“ಸೈಬರ್ ಅಪರಾಧಿಗಳು ಕೃತ್ಯ ಎಸಗಲು ಅನೇಕ ಟೂಲ್ ಗಳನ್ನು ಉಪಯೋಗಿಸುತ್ತಿದ್ದಾರೆ. ಅವುಗಳನ್ನು ಭೇದಿಸಲು ಇಲಾಖೆ ಕೂಡ ಅನೇಕ ಟೂಲ್ ಗಳನ್ನು ಉಪಯೋಗಿಸುತ್ತಿದೆ. ಆದರೆ ಈ ರೀತಿಯ ಕೃತ್ಯಗಳು ನಡೆಯದೇ ಇರಲು ಅಥವಾ ಅವುಗಳನ್ನು ಪರಿಣಾಮಕಾರಿಯಾಗಿ ಪತ್ತೆ ಹಚ್ಚುವ ಟೂಲ್ ಗಳನ್ನು ಉಪಯೋಗಿಸುವ ಚಾಕಚಕ್ಯತೆಯನ್ನು ಗಳಿಸಿಕೊಂಡರೆ ಅಪರಾಧಿಗಳಿಗಿಂತ ನಾವು ಒಂದು ಹೆಜ್ಜೆ ಮುಂದೆ ಹೋಗಬಹುದು. ಇಲ್ಲವಾದರೆ ಅಪರಾಧಿ ಸಾವಿರ ಹೆಜ್ಜೆ ಮುಂದೆ ಇರುತ್ತಾನೆ, ನಾವು ಇದ್ದಲ್ಲೇ ಇರುತ್ತೇವೆ” ಎಂದು ತಿಳಿಸಿದರು.

1003009536

“ನ್ಯಾಯಾಲಯದ ಮುಂದೆ ವೈಯಕ್ತಿಕ ಸಾಕ್ಷಿಗಳು ಪ್ರಮಾಣ ವಚನ ತೆಗೆದುಕೊಂಡ ನಂತರ, ಹಿಂದೆ ಪೊಲೀಸರಿಗೆ ನೀಡಿದ ಹೇಳಿಕೆಗೆ ವಿರುದ್ಧವಾಗಿ ನುಡಿಯುತ್ತಾರೆ. ಇದಕ್ಕೆ ಒತ್ತಡ, ಆಸೆ-ಆಮಿಷ ಅಥವಾ ವೈರಾಗ್ಯ ಸೇರಿದಂತೆ ಬೇರೆ ಬೇರೆ ಕಾರಣಗಳು ಇರಬಹುದು.. ಆದರೆ ವೈಜ್ಞಾನಿಕವಾಗಿ ಸಂಗ್ರಹ ಮಾಡಿದಂತಹ ಸಾಕ್ಷಿಗಳು ಯಾವತ್ತೂ ಬದಲಾವಣೆ ಆಗುವುದಿಲ್ಲ. ಅವುಗಳೇ ಪೊಲೀಸರನ್ನು ಕಾಪಾಡುತ್ತವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.‌

ತರಬೇತಿಯ ನಂತರ ತಮ್ಮ ಅನಿಸಿಕೆ ವ್ಯಕ್ತಪಡಿಸಿದ ಶಿವಮೊಗ್ಗ ವಿಭಾಗದ ಸಂಚಾರಿ ವಿಭಾಗದ ಸಿಪಿಐ ದೇವರಾಜ್ ಮಾತನಾಡಿ, “ಪೊಲೀಸ್ ಕರ್ತವ್ಯದಲ್ಲಿ ವೃತ್ತಿಪರತೆಯನ್ನು ಬೆಳೆಸಿಕೊಳ್ಳಲು ಮತ್ತು ಆಧುನಿಕ ತನಿಖಾ ಕೌಶಲ್ಯಗಳನ್ನು ಕಲಿಯಲು ಪೊಲೀಸ್ ಕರ್ತವ್ಯ ಕೂಟಗಳು ಅತ್ಯಂತ ಸಹಕಾರಿಯಾಗಿವೆ. ಇಂದಿನ ದಿನಗಳಲ್ಲಿ ಸಾರ್ವಜನಿಕರು ಪೊಲೀಸರ ಕಾರ್ಯವೈಖರಿ ಮತ್ತು ವೃತ್ತಿಪರತೆಯನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಾರೆ” ಎಂದು ಇತ್ತೀಚೆಗೆ ಮೈಸೂರು ದಸರಾ ಹಾಗೂ ಧರ್ಮಸ್ಥಳದ ಪ್ರಕರಣಗಳನ್ನು ಉದಾಹರಿಸಿದರು.

ಸಮಾರೋಪ ಸಮಾರಂಭದಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ ಪಿಎಸ್ ಐ ಅರವಿಂದ ಬಿ ಎಸ್ ಮಾತನಾಡಿ “ನಮ್ಮ ದೈನಂದಿನ ಕರ್ತವ್ಯಗಳಲ್ಲಿ ತರಬೇತಿಯು ತುಂಬಾ ಪ್ರಮುಖವಾಗಿದೆ. ಇಂತಹ ಸ್ಪರ್ದೇಗಳಿಂದ ನಮ್ಮ ಕರ್ತವ್ಯದ ಸಮಯದಲ್ಲಿ ಹೆಚ್ಚಿನ ಪರಿಪಕ್ವತೆ ಕಾಣಬಹುದಾಗಿದೆ” ಎಂದು ತಿಳಿಸಿದರು.

1003009533

7 ನೇ ವಲಯ ಪೊಲೀಸ್ ಕರ್ತವ್ಯಕೂಟದಲ್ಲಿ ಎರಡು ದಿನಗಳ ಕೂಟದಲ್ಲಿ 23 ಪ್ರಶಸ್ತಿಗಳನ್ನು ಪಡೆದುಕೊಂಡ ದಾವಣಗೆರೆ ಪೊಲೀಸ್ ತಂಡ ಸರ್ವೋತ್ತಮ ಪ್ರಶಸ್ತಿಗೆ ಭಾಜನವಾಯಿತು. ದಾವಣಗೆರೆ ಜಿಲ್ಲೆಯ ಶ್ವಾನದಳದ ‘ತಾರಾ’ ಬೆಸ್ಟ್ ಡಾಗ್ ಪ್ರಶಸ್ತಿ ಪಡೆಯಿತು.
ಪೊಲೀಸ್ ಪೋಟೋಗ್ರಾಫಿ ಸ್ಪರ್ದೆಯಲ್ಲಿ ಪ್ರಥಮ ಹಾಗೂ ವಿಡಿಯೋಗ್ರಾಫಿಯಲ್ಲಿ ಸ್ಪರ್ದೆಯಲ್ಲಿ ದ್ವಿತೀಯ ಸ್ಥಾನಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ಕಛೇರಿಯ ಪೊಲೀಸ್ ಪೋಟೋಗ್ರಾಫರ್ ಪ್ರಶಾಂತ್ ಕುಮಾರ ಭಾಜನರಾದರು.

ಈ ಸುದ್ದಿ ಓದಿದ್ದೀರಾ? ಭಾರೀ ಮಳೆ | ನೆಲಕಚ್ಚಿದ ಮೆಕ್ಕೆಜೋಳದ ಇಳುವರಿ ಕುಸಿತ: ನಷ್ಟದಲ್ಲಿರುವ ರೈತರನ್ನು ಮೇಲೆತ್ತುವವರು ಯಾರು?

ಕಾರ್ಯಕ್ರಮದಲ್ಲಿ ದಾವಣಗೆರೆಯ ಪೊಲೀಸ್ ಅಧೀಕ್ಷಕಿ ಶ್ರೀಮತಿ ಉಮಾ ಪ್ರಶಾಂತ್, ಹಾವೇರಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಶ್ರೀಮತಿ ಯಶೋಧಾ ವಂಟಗೋಡಿ, ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್, ದಾವಣಗೆರೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ವಲಯ ಮಟ್ಟದ ಕ್ರೀಡಾಕೂಟದ ನೋಡಲ್ ಅಧಿಕಾರಿ ಡಿವೈಎಸ್ಪಿ ಶ್ರೀ ರುದ್ರೇಶ್ ಎ ಕೆ ಹಾಗೂ ಡಿವೈಎಸ್ಪಿ ಪಿ ಬಿ ಪ್ರಕಾಶ್ ರವರು ಸೇರಿದಂತೆ ಅನೇಕರು ಹಾಜರಿದ್ದರು.‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...