ದಾವಣಗೆರೆ | ಸಮರ್ಪಕ ಚರಂಡಿ ನಿರ್ಮಾಣಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ.

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ  ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಲಕ್ಕಂಪುರ ಗ್ರಾಮಸ್ಥರು ಸಮರ್ಪಕ ಚರಂಡಿ ನಿರ್ಮಾಣಕ್ಕೆ ಆಗ್ರಹಿಸಿ  ಹೊಸಕೆರೆ ಗ್ರಾಮ ಪಂಚಾಯಿತಿ ಮುಂಬಾಗ ಪ್ರತಿಭಟನೆ ನಡೆಸಿ, ತಾ.ಪಂ ಸಹಾಯಕ ನಿರ್ದೇಶಕ ಅರವಿಂದ್ ಮೂಲಕ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ದಸಂಸ ತಾಲೂಕು ಅಧ್ಯಕ್ಷ ಸತೀಶ್ ಮಲೆಮಾಚಿಕೆರೆ ಮಾತನಾಡಿ, “ಲಕ್ಕಂಪುರ-ಹೊಸೂರು ಗ್ರಾಮದಲ್ಲಿ  ದಲಿತರು ವಾಸಿಸುವ ಕೇರಿಯಲ್ಲಿ ಹಲವು ವರ್ಷಗಳಿಂದ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಬಳಕೆ ನೀರು ಸರಾಗವಾಗಿ ಹೊರಗಡೆ ಹರಿಯದೆ, ಅನೈರ್ಮಲ್ಯಕ್ಕೆ ಕಾರಣವಾಗಿದೆ. ಕೆಲವರು ಕೊಳಚೆ ನೀರಿನ ಹರಿವಿಗೆ ಅಡ್ಡಲಾಗಿ ಮಣ್ಣುಹಾಕಿದ್ದು, ಇದರಿಂದ ಸಾಕಷ್ಟು ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿ ನಿವಾಸಿಗಳು ಜೀವನ ಸಾಗಿಸುತ್ತಿದ್ದಾರೆ. ಗ್ರಾಮಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ಸಲ್ಲದು ಕೂಡಲೇ ಸಮರ್ಪಕ ಚರಂಡಿ ನಿರ್ಮಾಣಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತಾಲೂಕು ಪಂಚಾಯಿತಿಗೆ ಮುತ್ತಿಗೆ ಹಾಕಲಾಗುವುದು” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಂಬೇಡ್ಕರ್ ಶಿಕ್ಷಣ, ಸಾಧನೆಯ ಬೆನ್ನಿಗೆ ನಿಂತ ರಮಾಬಾಯಿ, ಭಾರತರತ್ನ ಪ್ರಶಸ್ತಿಗೆ ಅರ್ಹರು

ಈ ಸಂದರ್ಭದಲ್ಲಿ ದಸಂಸ ಸಂಘಟನಾ ಸಂಚಾಲಕ ಹನುಮಂತಪ್ಪ ಕ್ಯಾಸೇನಹಳ್ಳಿ, ಭರಮಣ್ಣ ನಾಯಕ, ರಮೇಶ್, ರೇಣುಕ ಪ್ರಸಾದ್, ಹನುಮಂತಪ್ಪ, ರಮೇಶ್, ರಾಮಣ್ಣ, ಪಾಲಮ್ಮ, ಶಾರದಮ್ಮ, ಕರಿಯಮ್ಮ, ಅಂಜಿನಮ್ಮ, ಲಕ್ಷ್ಮಿ, ಪ್ರಕಾಶ್ ಸೇರಿದಂತೆ ಅನೇಕ ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...