‌ಜಾತಿ ನಿಂದನೆ ಆರೋಪದಡಿ ಬಿಜೆಪಿ ಶಾಸಕ ಬಿ ಪಿ ಹರೀಶ್‌ಗೆ ಬಂಧನದ ವಾರೆಂಟ್: ನಾಳೆ ವಿಚಾರಣೆ

Date:

ದಾವಣಗೆರೆ ಜಿಲ್ಲೆಯ ಹರಿಹರದ ಬಿಜೆಪಿ ಶಾಸಕ ಬಿ ಪಿ ಹರೀಶ್‌ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನದ ವಾರೆಂಟ್ ಜಾರಿ ಮಾಡಿದೆ.

- Advertisement -

ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶುಭಾಶಯ ಕೋರಲು ಬಂದಿದ್ದ ಪರಿಶಿಷ್ಟ ಜಾತಿಯ ಪೌರಕಾರ್ಮಿಕರಿಗೆ ಜಾತಿನಿಂದನೆ ಮಾಡಿದ ಆರೋಪದಡಿ ನಡೆಯುತ್ತಿದ್ದ ವಿಚಾರಣೆಗೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ ಪಿ ಹರೀಶ್ ಮತ್ತು ಇವರ ಪರ ವಕೀಲರು ಹಾಜರಾಗದಿದ್ದ ಕಾರಣ ಶಾಸಕರನ್ನು ಬಂಧಿಸಲು ನ್ಯಾಯಾಲಯ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...
ಬಿಜೆಪಿ ಶಾಸಕ ಹರೀಶ್

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಶಾಸಕರ ವಿರುದ್ಧ ಬಂಧನದ ವಾರೆಂಟ್ ಜಾರಿಗೊಳಿಸಿ, ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ್ದಾರೆ.

ಪ್ರಕರಣದ ಹಿನ್ನೆಲೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಬಿ ಪಿ ಹರೀಶ್ ಅವರನ್ನು ಅಭಿನಂದಿಸಲು 2023ರ ಮೇ 16ರಂದು ಆಗಮಿಸಿದ್ದ ಹರಿಹರ ನಗರಸಭೆಯ ಪೌರಕಾರ್ಮಿಕರು ಹಾಗೂ ಮಾದಿಗ ಸಮಾಜದ ಮುಖಂಡರನ್ನು ʼಒಳಮೀಸಲಾತಿ ನೀಡಿದ್ದರೂ ನಿಮ್ಮ ಸಮಾಜದವರು ನಮ್ಮ ಪಕ್ಷವನ್ನು ಬೆಂಬಲಿಸಿಲ್ಲ, ನಿಮಗೆ ಕೃತಜ್ಞತೆಯಿಲ್ಲʼವೆಂದು ಜಾತಿಯ ಹೆಸರನ್ನು ಉಲ್ಲೇಖಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಆರೋಪಿಸಲಾಗಿತ್ತು.

ಇದನ್ನೂ ಓದಿದ್ದೀರಾ? ಬಾಗಲಕೋಟೆ ಉಪಸಮರ: ನಿರೀಕ್ಷೆ ಮೀರಿ ದಿಗ್ವಿಜಯ ಸಾಧಿಸಿದ ಕಾಂಗ್ರೆಸ್

ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಿ ಹನುಮಂತಪ್ಪ ಅವರು ಈ ಬಗ್ಗೆ ಹರಿಹರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಈ ಪ್ರಕರಣವನ್ನು ದಾವಣಗೆರೆಯ ವಿಶೇಷ ಜಿಲ್ಲಾ ನ್ಯಾಯಾಲಯದಿಂದ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...