ದಾವಣಗೆರೆ | ಕೊರಳಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಹೆಣ್ಣು ಶಿಶುವಿನ ಮೃತದೇಹ ಪತ್ತೆ

Date:

ಹೆಣ್ಣುಭ್ರೂಣ ಹತ್ಯೆ ಪ್ರಕರಣ ರಾಜ್ಯದಲ್ಲಿ ಗಂಭೀರ ಚರ್ಚೆ ಹುಟ್ಟು ಹಾಕಿದೆ. ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪಿನ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಹೊತ್ತಿನಲ್ಲಿ, ಆಗಷ್ಟೇ ಜನಿಸಿದ್ದ ನವಜಾತ ಹೆಣ್ಣು ಶಿಶುವಿನ ಕೊರಳಿಗ ಹಗ್ಗ ಕಟ್ಟಿ ಕೊಂದು ನಿರ್ಜನ ಪ್ರದೇಶದಲ್ಲಿ ಬಿಸಾಡಿರುವ ಅಮಾನುಷ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಕ್ಯಾಸನಕೆರೆ ಗ್ರಾಮದಲ್ಲಿ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ. ಶಿಶುವಿನ ಕುತ್ತಿಗೆಗೆ ಹಗ್ಗ ಬಿಗಿದು, ಕೊಲೆ ಮಾಡಿ ಬಿಸಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ರಾಜ್ಯದಲ್ಲಿ ಗಂಭೀರ ಚರ್ಚೆಯಾಗುತ್ತಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಲ್ಲಿ ಇಬ್ಬರಾದ ವೀರೇಶ, ಸಿದ್ದೇಶ ಕೂಡ ಇದೇ ಗ್ರಾಮದವರು ಎಂಬುದು ಗಮನಾರ್ಹ. ಇದೀಗ, ಆರೋಪಿಗಳ ಗ್ರಾಮದಲ್ಲಿಯೇ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ.

ಮುಳ್ಳು ಕಂಟಿಗಳಲ್ಲಿ ಬಿದ್ದಿದ್ದ ಹೆಣ್ಣು ಶಿಶುವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಗುವನ್ನು ಪೊದೆಯಿಂದ ಹೊರತೆಗೆದಿದ್ದಾರೆ.

ಮಗುವಿನ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸಾಸ್ವೆಹಳ್ಳಿ ಪೊಲೀಸ್ ಉಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ...

ಚಿಕ್ಕಮಗಳೂರು | ನ.16ರಂದು ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಚಿಕ್ಕಮಗಳೂರು | ಜಿಂಕೆ ಬೇಟೆ: ಆರೋಪ ಬಂಧನ 

ಕಡೂರು ತಾಲೂಕು ದೇವದಾನ ಗ್ರಾಮದ ತೋಟದಲ್ಲಿ ಉರುಳು ಹಾಕಿ ಜಿಂಕೆಯನ್ನು ಬೇಟೆಯಾಡಿದ...

ಚಿಕ್ಕಮಗಳೂರು | ₹58 ಲಕ್ಷ ದರೋಡೆ: ಆರೋಪಿಗಳ ಬಂಧನ 

ಹೊರವಲಯದ ಹೆದ್ದಾರಿಯಲ್ಲಿ ಅಡಿಕೆ ವ್ಯಾಪಾರಿಯ ಕಾರು ಅಡ್ಡಗಟ್ಟಿ ಬರೋಬ್ಬರಿ ₹58 ಲಕ್ಷ...