ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣ; ಸಿಬಿಐ ತನಿಖೆಗೆ ದಾವಣಗೆರೆ ದಸಂಸ ಆಗ್ರಹ

Date:

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಹಾಗೂ ಮನೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

- Advertisement -

ಜಗಳೂರು ಪಟ್ಟಣದ ತಾಲೂಕು ಕಚೇರಿ ಮುಂಬಾಗ ಜಮಾಯಿಸಿದ ದಸಂಸ ಕಾರ್ಯಕರ್ತರು ತಹಶೀಲ್ದಾ‌ರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಅಂಬೇಡ್ಕ‌ರ್ ಪುತ್ಥಳಿ ಸಮಿತಿ ಅಧ್ಯಕ್ಷ ಪೂಜಾರ್ ಸಿದ್ದಪ್ಪ ಮಾತನಾಡಿ, “ದಲಿತ ಕುಟುಂಬದ ಹನುಮಂತಪ್ಪನವರ ಮೂಕಪ್ರಾಣಿಗಳನ್ನು ರಾಮೇಗೌಡನ ಜಮೀನಿನಲ್ಲಿ ಮೇಯಿಸಿದ ಕಾರಣಕ್ಕೆ ಹನುಮಂತಪ್ಪ ಅವರಿಗೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಲ್ಲದೆ, ಸಹೋದರ ರೆಡ್ಡೆಪ್ಪ ಅವರ ಮೇಲೆಯೂ ಹಲ್ಲೆ ಮಾಡಿದ್ದಾರೆ. ಜತೆಗೆ ಅವರು ವಾಸವಾಗಿದ್ದ ಗುಡಿಸಲಿಗೆ ಬೆಂಕಿ ಹಚ್ಚಿರುವುದು ಖಂಡನೀಯ. ದೇಶದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ದಲಿತ ವಿರೋಧಿ ನೀತಿ ಕಾಣುತ್ತಿದೆ. ಕೂಡಲೇ ದಲಿತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಇಲ್ಲವಾದರೆ ತೀವ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ವಕೀಲ ಹನುಮಂತಪ್ಪ ಮಾತನಾಡಿ, “ದೇಶದಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿದ್ದು, ಮನುವಾದಿಗಳು ಕೋಲಾರ ಜಿಲ್ಲೆಯ ದಲಿತ ಸಮುದಾಯದ ಹನುಮಂತಪ್ಪ ಅವರ ಗುಡಿಸಲಿಗೆ ಬೆಂಕಿ ಹಚ್ಚಿರುವುದು ದೌರ್ಜನ್ಯದ ಪರಮಾವಧಿ. ಪೋಲಿಸರು ಸಮಯಕ್ಕೆ ಸರಿಯಾಗಿ ಘಟನಾ ಸ್ಥಳಕ್ಕೆ ಆಗಮಿಸದಿದ್ದರೆ ಕಂಬಾಲಪಲ್ಲಿ ಪ್ರಕರಣ ಮರುಕಳಿಸುತ್ತಿತ್ತು” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹುಚ್ಚು ನಾಯಿಗಳ ಹಾವಳಿಗೆ ಬೇಸತ್ತ ಜನ; ಕ್ರಮ ಕೈಗೊಳ್ಳದ ನಗರಸಭೆಯ ವಿರುದ್ಧ ಆಕ್ರೋಶ

ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಕುಬೇಂದ್ರಪ್ರ, ಮುಖಂಡರುಗಳಾದ ವಕೀಲ ಆರ್ ಓಬಳೇಶ್, ಮಾದಿಹಳ್ಳಿ ಮಂಜುನಾಥ್, ಶಿವಣ್ಣ, ರವಿ, ಮೆದಗಿನಕೆರೆ ಹನುಮಂತಪ್ಪ, ಮುನಿಸ್ವಾಮಿ, ಪಲ್ಲಾಗಟ್ಟಿ ರಂಗಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...