ದಾವಣಗೆರೆ | ಶಾಲೆಗಳ ಖಾಸಗೀಕರಣ ವಿರೋಧಿಸಿ ಎಸ್‌ಎಫ್‌ಐ ಪ್ರತಿಭಟನೆ

Date:

ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರವನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ನಿಂದ ಅಂಬೇಡ್ಕರ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯಿತು. ನಂತರ ತಹಸಿಲ್ದಾರ್ ನಟರಾಜ್ ರವರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಸಂಜನಾಯ್ಕ ಎಲ್ ಜಿ ಮಾತನಾಡಿ, ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ದತ್ತು ಕೊಡುವ ಹೆಸರಿನಲ್ಲಿ ಶಿಕ್ಷಣವನ್ನು ಮಾರಾಟದ ಸರಕನ್ನಾಗಿ ಮಾಡಲು ಹವಣಿಸುತ್ತಿದೆ. ಸಮುದಾಯದ ಸಹಭಾಗಿತ್ವ ಹಾಗೂ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯ ಬಳಿಸಿ ಈ ಯೋಜನೆಗಳನ್ನು ಜಾರಿ ಮಾಡಲು ಹೊರಟಿದೆ. ಆದರೆ ಇದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಖಾಸಗಿ ಹಸ್ತಕ್ಷೇಪಕ್ಕೆ ಸರ್ಕಾರ ಅವಕಾಶ ಮಾಡಿಕೊಡುವ ಹುನ್ನಾರವಾಗಿದೆ ಎಂದು ವಿರೋಧ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಡವಾಳಶಾಹಿಯ ನಾಲ್ಕು ಕಟ್ಟುಕಥೆಗಳು ಮತ್ತು ನಮ್ಮ ಬದುಕಿನ ಬೆಲೆ

ನಮ್ಮ ಸುತ್ತಮುತ್ತಲಿನ ಪ್ರಪಂಚವನ್ನು ಒಮ್ಮೆ ಗಮನಿಸಿ ನೋಡಿ. ಒಂದು ಕಡೆ, 2025ರ ಒಂದೇ ವರ್ಷದಲ್ಲಿ ಜಗತ್ತಿನ ಅತ್ಯಂತ ಶ್ರೀಮಂತ 500 ವ್ಯಕ್ತಿಗಳ ಸಂಪತ್ತು ಸುಮಾರು 2.2 ಟ್ರಿಲಿಯನ್ ಡಾಲರ್‌ಗಳಷ್ಟು ಹೆಚ್ಚಾಗಿದೆ. ಇನ್ನೊಂದು ಕಡೆ,...

ಸಂವಿಧಾನಕ್ಕೆ 77 – ಈಡೇರದ ಕನಸು…..

ಸಂವಿಧಾನ ದಿನ ಒಂದು ಬಗೆಯ ಲಯವಿದೆ. ಅಂದು ಮುಂಜಾನೆಯಿಂದ ಇರುಳಿನವರೆಗೂ ಸಂವಿಧಾನದ್ದೇ ಸದ್ದು. ಅದರ ಮಹತ್ವ, ಅಗತ್ಯ, ಅನಿವಾರ್ಯತೆ, ಅನುಕೂಲತೆ ಬಗ್ಗೆ ಸ್ಮರಿಸಿಕೊಂಡು ಸಂಭ್ರಮಿಸುತ್ತೇವೆ. ಪ್ರಧಾನಿಯಿಂದ ಗ್ರಾಮ ಪಂಚಾಯಿತಿ ಸದಸ್ಯರವರೆಗೂ ಪ್ರಶ್ನಿಸಲು ಇರುವ "ಅಧಿಕಾರಭಾಗ್ಯ"...

ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ...

ನವೆಂಬರ್ 26ರ ಸಂವಿಧಾನ ದಿನಾಚರಣೆಯಿಂದ ನವೆಂಬರ್ 26, 2027ರವರೆಗೆ ಐಕ್ಯ ಹೋರಾಟ ಸಮಿತಿಯ ಒಂದು ವರ್ಷದ ಅಭಿಯಾನ; ಅಂಬೇಡ್ಕರ್ ಕನಸಿನ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಹೊಸ ಸಂಕಲ್ಪ ನಮಗೆ ಸ್ವಾತಂತ್ರ್ಯ ಬಂದು ಏಳು ದಶಕಗಳಿಗೂ...

ನಂತರ ಪ್ರಮುಖ ಆಗ್ರಹಗಳನ್ನು ಸರ್ಕಾರದ ಮುಂದಿಡಲಾಯಿತು

1. 2,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಯೋಜನೆಯನ್ನು ತಕ್ಷಣ ಕೈಬಿಡಬೇಕು.

2. ಸರ್ಕಾರಿ ಶಾಲೆಗಳ ವಿಲೀನ ಮತ್ತು ಮುಚ್ಚುವ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸಬೇಕು.

3. ಸರ್ಕಾರಿ ಶಾಲೆಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.

4. ರಾಜ್ಯದ ಎಲ್ಲಾ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು.

5. ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಗುಣಮಟ್ಟದ ಶೂ, ಸೈಕಲ್ ಹಾಗೂ ಅಗತ್ಯ ಕಲಿಕಾ ಸೌಲಭ್ಯಗಳನ್ನು ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿಯೇ ಒದಗಿಸಬೇಕು.

6. ಗ್ರಾಮೀಣ ಪ್ರದೇಶದ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು.

7. ಖಾಸಗಿ ಶಾಲೆಗಳೊಂದಿಗೆ ಸರ್ಕಾರಿ ಶಾಲೆಗಳನ್ನು ಜೋಡಿಸುವ ಬದಲು ಹೊಸ ಸರ್ಕಾರಿ ಶಾಲೆಗಳನ್ನು ಆರಂಭಿಸಬೇಕು.

8. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಎಲ್ಲಾ ಕ್ರಮಗಳನ್ನು ಕೈಬಿಡಬೇಕು.

9. ಖಾಸಗಿ ಶಾಲೆಗಳನ್ನು ನಿಯಂತ್ರಣ ಮಾಡಬೇಕು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುವತಿ ನೀಡಬಾರದು

10. ಈಗಾಗಲೇ ಅನುಮತಿ ನೀಡಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಗುಣಮಟ್ಟವನ್ನು ಪರಿಶೀಲನೆ ಮಾಡಬೇಕು.

ಸರ್ಕಾರಿ ಶಾಲೆಗಳನ್ನು ಉಳಿಸುವುದು ಕೇವಲ ಶಾಲೆಗಳನ್ನು ಉಳಿಸುವ ಹೋರಾಟವಲ್ಲ; ದಲಿತ, ಹಿಂದುಳಿದ, ಅಲ್ಪಸಂಖ್ಯಾತರ, ಬಡವರ, ರೈತರ, ಕಾರ್ಮಿಕರ, ಕೃಷಿ ಕೂಲಿಕಾರರ ಹಾಗೂ ಗ್ರಾಮೀಣ ಪ್ರದೇಶ ಮಕ್ಕಳ ಶಿಕ್ಷಣದ ಹಕ್ಕನ್ನು ಉಳಿಸುವ ಹೋರಾಟವಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಮತ್ತು ಖಾಸಗಿಯವರೊಂದಿಗೆ ಜೋಡಣೆ ಮಾಡುವ ಸರ್ಕಾರದ ಕ್ರಮವನ್ನು ವಿರೋಧಿಸುತ್ತದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿ ಕೆ ಆಕಾಶ್ ಪದಾಧಿಕಾರಿ ಮಂಗಳಾ, ವಿದ್ಯಾರ್ಥಿಗಳಾದ ರೋಹಿತ್, ನಿಂಗರಾಜ್, ಪ್ರಶಾಂತ್, ಪೃಥ್ವಿರಾಜ್, ಅಂಕಿತಾ, ಕೀರ್ತಿ, ಸಿಂಚನ ಮತ್ತು ನೂರಾರು ಜನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಕೋಬಾರ್ ಅರಣ್ಯ ಹಕ್ಕು ವಿವಾದ: ಪ್ರಮಾಣಪತ್ರ ಸಲ್ಲಿಸಲು ಕೇಂದ್ರಕ್ಕೆ ಡಿ.10ರವರೆಗೆ ಗಡುವು

ಗ್ರೇಟ್ ನಿಕೋಬಾರ್ ಯೋಜನೆಗಾಗಿ 166 ಚದರ ಕಿಲೋಮೀಟರ್ ಅರಣ್ಯ ಭೂಮಿಯನ್ನು ವರ್ಗಾಯಿಸಲು...

ಶಿವಮೊಗ್ಗ | SIR ರದ್ದತಿಗೆ ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ವ್ಯಾಪಕ ಲೋಪದೋಷಗಳು...

ಶಿವಮೊಗ್ಗ | ಸಂವಿಧಾನದ ಆಶಯಗಳಂತೆ ನಡೆದುಕೊಳ್ಳುವುದೇ ನಿಜವಾದ ಸಂವಿಧಾನ ದಿನದ ಆಚರಣೆ: ನ್ಯಾ. ಜಿ.ಎ ಮಂಜುನಾಥ

ಭಾರತದ ಸಂವಿಧಾನವನ್ನು ಪ್ರಜೆಗಳಾದ ನಾವು ನಮಗಾಗಿ ಅರ್ಪಿಸಿಕೊಂಡ ದಿನದ ಪ್ರಯುಕ್ತ ಇಂದು...

ಬಂಡವಾಳಶಾಹಿಯ ನಾಲ್ಕು ಕಟ್ಟುಕಥೆಗಳು ಮತ್ತು ನಮ್ಮ ಬದುಕಿನ ಬೆಲೆ

ನಮ್ಮ ಸುತ್ತಮುತ್ತಲಿನ ಪ್ರಪಂಚವನ್ನು ಒಮ್ಮೆ ಗಮನಿಸಿ ನೋಡಿ. ಒಂದು ಕಡೆ, 2025ರ...