ದಾವಣಗೆರೆ | ಅಜಾತಶತ್ರು ಶಾಮನೂರು ಶಂಕರಜ್ಜ; ಅಂತಿಮ ದರ್ಶನ ವೀರಶೈವ ಸಂಪ್ರದಾಯದಂತೆ ಅಂತ್ಯಕ್ರಿಯೆ

Date:

ರಾಜಕೀಯದ ಅಜಾತಶತ್ರು ಎಂದೆನಿಸಿದ್ದ, ಬೆಂಗಳೂರಿನಲ್ಲಿ ನಿಧನರಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರ, ದೇಶದ ಅತ್ಯಂತ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ ವೀರಶೈವ ಲಿಂಗಾಯತ ಸಂಪ್ರದಾಯ, ವಿಧಿ ವಿಧಾನಗಳೊಂದಿಗೆ ಇಂದು ಸಂಜೆ 4.30ರ ಸಮಯಕ್ಕೆ ಆನೆಕೊಂಡ ಬಳಿಯ ಕಲ್ಲೇಶ್ವರ ಅಕ್ಕಿ ಗಿರಣಿ ಆವರಣದಲ್ಲಿ ಧರ್ಮಪತ್ನಿ ಪಾರ್ವತಮ್ಮನವರ ಸಮಾಧಿಯ ಪಕ್ಕದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಶಾಸಕರ ಪಾರ್ಥಿವ ಶರೀರವನ್ನು ಬೆಂಗಳೂರಿನ ವೀರಶೈವ ಲಿಂಗಾಯತ ಮಹಾಸಭೆಯ ಕಛೇರಿಯಿಂದ ಸೋಮವಾರ ಬೆಳಗಿನ ವೇಳೆ ಹಿರಿಯ ಪುತ್ರ ಬಕ್ಕೇಶ್ ಅವರ ಮನೆಗೆ ತರಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....
1003307009
ಅಂತಿಮ ಯಾತ್ರೆಯಲ್ಲಿ ಜನಸ್ತೋಮ, ಬಿಗಿ ಪೊಲೀಸ್ ಬಂದೋಬಸ್ತ್

ನಂತರ ಪುತ್ರರಾದ ಗಣೇಶ್, ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಮನೆಯಲ್ಲಿ ಪೂಜೆ ನಡೆಸಿ ಅಂತಿಮ ದರ್ಶನಕ್ಕೆ ಮನೆ ಆವರಣದಲ್ಲಿ ಇರಿಸಲಾಗಿತ್ತು . ಮಧ್ಯಾಹ್ನ 1 ಗಂಟೆಗೆ ಪಾರ್ಥಿವ ಶರೀರವನ್ನು ನಗರದ ಹೈಸ್ಕೂಲ್ ಆವರಣಕ್ಕೆ ಕೊಂಡೊಯ್ದು ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ ಅವಕಾಶ ನೀಡಲಾಗಿದೆ.

ಮಧ್ಯ ಕರ್ನಾಟಕದ ಚಿತ್ರದುರ್ಗ, ಶಿವಮೊಗ್ಗ, ಹಾವೇರಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ರಾಜಕೀಯ ನಾಯಕರು, ಜನರು ಆಗಮಿಸುವ ಹಿನ್ನೆಲೆಯಲ್ಲಿ ನಗರದ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಬಸ್ ಗಳನ್ನು ಹೊರಭಾಗದಲ್ಲಿ ತಾತ್ಕಾಲಿಕವಾಗಿ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಜನಸಂದಣಿ ಹೆಚ್ಚುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಎಂಸಿಸಿ ಬ್ಲಾಕ್ ನಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಸಂಬಂಧಿಕರು, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಈಗಾಗಲೇ ವಿರಕ್ತ ಮಠದ ಬಸವಪ್ರಭು ಶ್ರೀ, ಮುರುಘಾ ಶರಣರು ಸೇರಿದಂತೆ ವಿವಿಧ ಮಠಾಧೀಶರು, ದಾವಣಗೆರೆ ಜಿಲ್ಲೆಯ ಹಾಗೂ ಅಕ್ಕಪಕ್ಕದ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ದರ್ಶನ ಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಿಂದ ಆಗಮಿಸಿ ಸಂಜೆ ನಾಲ್ಕು ಗಂಟೆಗೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆಯಲ್ಲಿ ಕಾಂಗ್ರೆಸ್ ಎಂದರೆ ಶಾಮನೂರು ಎಂಬಂತಿದ್ದ ಶಾಮನೂರು ಶಿವಶಂಕರಪ್ಪ ನಿಧನ

‘ಎಸ್ಎಸ್, ಶಂಕರಜ್ಜ’ ಎಂದೇ ಜನಪ್ರಿಯರಾಗಿದ್ದ ಶಾಮನೂರು ಸದಾ ಲವಲವಿಕೆಯಿಂದಿರುತ್ತಿದ್ದರು. ಮಹಾನ್ ದೈವಭಕ್ತ ಹಾಗೂ ಜನಾನುರಾಗಿಯಾಗಿದ್ದು, ಜನಸಾಮಾನ್ಯರ ಸಂಕಷ್ಟಕ್ಕೆ ಸದಾ ಸ್ಪಂದಿಸುವ ದಾನಿಯಾಗಿದ್ದರು ಎಂದು ಬಹುತೇಕರು ನೆನಪಿಸಿಕೊಳ್ಳುತ್ತಾರೆ. ಜನಸಾಮಾನ್ಯನಾಗಿ ಹುಟ್ಟಿ, ಅಕ್ಕಿ ವ್ಯಾಪಾರದ ಮೂಲಕ ಪ್ರಾರಂಭಿಸಿ, ಅನೇಕ ಉದ್ಯಮ, ಶಿಕ್ಷಣ, ವೈದ್ಯಕೀಯ ಸೇವೆ ಸೇರಿದಂತೆ ಸಾಮಾಜಿಕ ಸೇವಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿ ಅಸಾಮಾನ್ಯರಾಗಿ ಜೀವಿಸಿದ್ದರು. ನೇರ ನುಡಿಗೆ ಹೆಸರಾಗಿದ್ದರೂ ಯಾರೊಂದಿಗೂ ದ್ವೇಷವಿಲ್ಲದೇ ಅಜಾತಶತ್ರು ಎನಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR: ಹಿರಿಯರು, ಅನಾರೋಗ್ಯ ಪೀಡಿತರಿಗೆ ಮನೆಬಾಗಿಲಲ್ಲೇ ಪರಿಶೀಲನೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಣೆಗೆ ಹಾಜರಾಗಲು ಸೂಚನೆ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು ಬೆಸೆಯಲಿ

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ...

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...