ದಾವಣಗೆರೆ | ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ತರಬೇತಿಗೆ ಅರ್ಜಿ ಅಹ್ವಾನ

Date:

ಕನ್ನಡ ಬಾರದ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಗಾಗಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾ ಲಯ ಹಾಗೂ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ವತಿಯಿಂದ ಹಮ್ಮಿಕೊಳ್ಳಲಾಗಿರುವ 12 ತಿಂಗಳು ಅವಧಿಯ ‘ಅಂಚೆ ಮೂಲಕ ಕನ್ನಡ ಶಿಕ್ಷಣ’ ಎಂಬ ಯೋಜನೆಯ 2026-27ನೇ ಸಾಲಿನ 40ನೇ ತಂಡದ ತರಬೇತಿಯು ಜನವರಿ 2027 ರಿಂದ ಆರಂಭಗೊಳ್ಳಲಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

- Advertisement -

ಕರ್ನಾಟಕ ಸರ್ಕಾರದ ನೌಕರರು, ನಗರ ಸಭೆ ,ಕ. ವಿ. ಪ್ರ. ನಿ. ನಿ, ಕೆ ಎಸ್ ಆರ್ ಟಿ ಸಿ,ವಿಶ್ವವಿದ್ಯಾಲಯಗಳು,ಶಾಲಾ ಕಾಲೇಜುಗಳು, ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ನೌಕರರಿಗೆ ಈ ಕೋರ್ಸ್‌ಗೆ ಸೇರಲು ಯಾವುದೇ ಶುಲ್ಕವಿರುವುದಿಲ್ಲ. ತರಬೇತಿ ಮತ್ತು ಪರೀಕ್ಷಾ ಅವಧಿಯನ್ನು ‘ಕರ್ತವ್ಯದ ಅವಧಿ’ ಎಂದು ಪರಿಗಣಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಅಲ್ಲದೆ, ಕೆ.ಪಿ.ಎಸ್.ಸಿ.ಯ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ಪಡೆಯಲು ಇದು ಸಹಕಾರಿಯಾಗಲಿದೆ. ಸಾರ್ವಜನಿಕರೂ ಕೂಡ ಈ ಕೋರ್ಸ್‌ಗೆ ಅರ್ಜಿ ಸಲ್ಲಿಸಬಹುದಾಗಿದ್ದು, 18 ರಿಂದ 50 ವರ್ಷ ವಯೋಮಿತಿ ಹಾಗೂ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಸಾರ್ವಜನಿಕರು ಬರ್ತಿ ಮಾಡಿದ ಅರ್ಜಿಗಳೊಂದಿಗೆ 250 ರೂ.ಗಳ ಡಿ.ಡಿ. ಯೊಂದಿಗೆ ಡಿಸೆಂಬರ್ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ನಮೂನೆ ಮತ್ತು ತರಬೇತಿ ವಿವರವಾದ ಮಾಹಿತಿಗಾಗಿ ರೂ. 5/- ರ ಅಂಚೆ ಚೀಟಿ ಅಂಟಿಸಿರುವ ಸ್ವವಿಳಾಸವಿರುವ ಲಕೋಟೆಯೊಂದಿಗೆ ಪ್ರಭಾರಿ ಅಧಿಕಾರಿ, ಕನ್ನಡ ಶಿಕ್ಷಣ ವಿಭಾಗ , ಭಾರತೀಯ ಭಾಷಾ ಸಂಸ್ಥಾನ, ಮಾನಸ ಗಂಗೋತ್ರಿ, ಮೈಸೂರು -570006 ಈ ವಿಳಾಸಕ್ಕೆ ಪತ್ರ ಬರೆದು ಪಡೆದುಕೊಳಬಹುದು, ಭರ್ತಿ ಮಾಡಿದ ಅರ್ಜಿಗಳನ್ನು ಪ್ರಭಾರಿ ಅಧಿಕಾರಿಗೆ ತಲುಪಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-235128 ಗೆ ಸಂಪರ್ಕಿಸಬಹುದು ಎಂದು ದಾವಣಗೆರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಪಿಐ ಪ್ರತಿಭಟನೆ

ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಸಿಪಿಐ, ಮುಖ್ಯ ಚುನಾವಣಾ...

ಕಳೆಗುಂದಿದ ದರಿಯಾ ದೌಲತ್: ಟಿಪ್ಪು ಅರಮನೆಯ ಮೂಲ ಸೌಂದರ್ಯ ಉಳಿಸುವ ಹೊಣೆ ಯಾರದ್ದು?

ನೂರಾರು ವರ್ಷಗಳ ಇತಿಹಾಸವನ್ನು ತನ್ನೊಳಗೆ ಹುದುಗಿಸಿಕೊಂಡಿರುವ ಐತಿಹಾಸಿಕ ಸ್ಮಾರಕವೊಂದು ಮೂಲ ಸೌಂದರ್ಯವನ್ನು...

ಗದಗ | ಕೆಲಸಕ್ಕೆ ಸಿದ್ಧರಿರುವ ಕೂಲಿಕಾರರಿಗೆ ಎರಡು ದಿನದಲ್ಲಿ ಉದ್ಯೋಗ ಕಲ್ಪಿಸಿ: ಸಿಇಒ ಮುಕುಲ್ ಜೈನ್

ಗ್ರಾಮೀಣ ಭಾಗದಲ್ಲಿ ಮಾನವ ದಿನಗಳ ಸೃಜನೆ ಹೆಚ್ಚಿಸಲು ವಿಬಿ-ಜಿ ರಾಮ್-ಜಿ ಯೋಜನೆಯಡಿ...