ದಾವಣಗೆರೆ | ವೇದಶಾಲೆ ವಿದ್ಯಾರ್ಥಿ ಮೇಲೆ ಹಲ್ಲೆ: ಕ್ರಮಕ್ಕೆ ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಆಗ್ರಹ

Date:

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕು, ನಾಯಕನಹಟ್ಟಿ ಪಟ್ಟಣದಲ್ಲಿ ಇರುವ ಗುರು ತಿಪ್ಪೇರುದ್ರಸ್ವಾಮಿ ವೇದಾಧ್ಯಯನ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ಸಂಸ್ಕೃತ ಶಿಕ್ಷಕ ಅಮಾನುಷವಾಗಿ ವರ್ತಿಸಿ, ಹಲ್ಲೆ ನಡೆಸಿದ ಘಟನೆಯನ್ನು ಖಂಡಿಸಿ ಕರ್ನಾಟಕ ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಸದಸ್ಯರು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ದಾವಣಗೆರೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

- Advertisement -

ಈ ವೇಳೆ ಮಾತನಾಡಿದ ಮುಖಂಡರು “ವೀರೇಶ್ ಹಿರೇಮಠ ಎಂಬುವವರು 9 ವರ್ಷದ ವಿದ್ಯಾರ್ಥಿಯ ಮೇಲೆ ಅಮಾನುಷವಾಗಿ ಕಾಲುಗಳಿಂದ ಚೆಂಡಿನಂತೆ ಒದ್ದು, ದೈಹಿಕವಾಗಿ ಥಳಿಸಿ ಹಿಂಸೆ ನೀಡಿರುವುದು ಕಂಡು ಬಂದಿರುತ್ತದೆ. ಇಂಥಹ ಅಘಾತಕಾರಿ ಘಟನೆಯನ್ನು ಕರ್ನಾಟಕ ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ – ದಾವಣಗೆರೆ ಉಗ್ರವಾಗಿ ಖಂಡಿಸುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಮಾನವೀಯತೆ ಮರೆತ ಈ ರೀತಿಯ ನಾಚಿಕೆಗೇಡು ವರ್ತನೆ. ಬಂಧಿಸಿರುವ ಶಿಕ್ಷಕನ ವಿರುದ್ದ ಹಾಗೂ ವೇದಾಧ್ಯಯನ ವಸತಿ ಶಾಲೆಯ ಆಡಳಿತ ಮಂಡಳಿಯ ವಿರುದ್ದ ಸಹ ಕಠಿಣ ಕಾನೂನಿನ ಮೂಲಕ ಶಿಕ್ಷೆ ಜರುಗಿಸಬೇಕು. ಶಿಕ್ಷಣವನ್ನು ಅರಸಿ ಪೋಷಕರು ತಮ್ಮ ಇಡಿ ಜೀವನವನ್ನೇ ತೇಯ್ದು, ಹೊಟ್ಟೆ- ಬಟ್ಟೆ ಕಟ್ಟಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಶಾಲೆಗೆ ಕಳುಹಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಶಾಲೆಗಳು ಮಕ್ಕಳ ಪಾಲಿಗೆ ನರಕವನ್ನು ಸೃಷ್ಠಿಸುವ ತಾಣವಾಗಿ ಪರಿಣಮಿಸಿವೆ. ಒಬ್ಬ ಶಿಕ್ಷಕ ತಂದೆ ಮತ್ತು ತಾಯಿಯ ಸ್ಥಾನದಲ್ಲಿ ನಿಂತು ಗುರುವಾಗಿ, ವಿದ್ಯಾಧಾನ ಮಾಡಬೇಕಾದವರು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಮೇಲೆ ರಾಕ್ಷಸ ಪ್ರವೃತ್ತಿ ತೋರಿಸಿ ಎಳೆಯ ಮಕ್ಕಳ ಮೇಲೆ ದೈಹಿಕ ಮತ್ತು ಮಾನಸಿಕ ಹಲ್ಲೆಯನ್ನು ಉಂಟುಮಾಡುತ್ತಿರುವುದು ಅತ್ಯಂತ ದುರಾದೃಷ್ಟಕರ” ಎಂದು ಕಳವಳ ವ್ಯಕ್ತಪಡಿಸಿದರು.

“ಇತ್ತೀಚಿಗೆ ಎಲ್ಲಿ ನೋಡಿದರೂ ಮಕ್ಕಳ ಮೇಲೆ ಅಮಾನವೀಯ ರೀತಿಯಲ್ಲಿ ದೌರ್ಜನ್ಯ ಎಸಗಿರುವ ಸುದ್ದಿಗಳೇ ಬರಸಿಡಿಲಿನಂತೆ ಎರಗುತ್ತಿವೆ. ಶಿಕ್ಷಕರನ್ನು ನಂಬಿ ಶಾಲೆಗೆ ವಿದ್ಯೆ ಕಲಿಯಲು ಬರುವ ಮಕ್ಕಳನ್ನು ಕಾಪಾಡುವವರು ಯಾರು? ಎಂದು ಪ್ರಶ್ನಿಸುವಂತಾಗಿದೆ? ಶಿಕ್ಷಕರು ಮಕ್ಕಳನ್ನು ಪ್ರೀತಿಸಿ ಅವರ ಭವಿಷ್ಯವನ್ನು ರೂಪಿಸುವ ಮಾರ್ಗದರ್ಶಕರಾದಾಗ ಸಕಾರಾತ್ಮಕ ಪರಿಣಾಮ ಬಿರುತ್ತದೆ. ಆದರೆ ಕೆಲವು ಶಿಕ್ಷಕರು ಶಿಸ್ತಿನ ಹೆಸರಿನಲ್ಲಿ ಮಕ್ಕಳನ್ನು ಅನಗತ್ಯವಾಗಿ ದಂಡಿಸಿ, ಹಿಂಸಿಸಿ ಅವಮಾನಿಸುವುದು, ಮಕ್ಕಳಿಗೆ ಮಾನಸಿಕ ಕಿರುಕುಳ ದೀರ್ಘಕಾಲದ ಭಯವನ್ನು ಸೃಷ್ಟಿಸುತ್ತದೆ. ಇದರಿಂದ ಖಿನ್ನತೆ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗಿ ಸಮಾಜದಿಂದ ದೂರ ಸರಿಯುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.‌

“ಶಿಕ್ಷಕರಿಗೆ ಸಕಾರಾತ್ಮಕವಾಗಿ ಮಕ್ಕಳೊಂದಿಗೆ ವ್ಯವಹರಿಸುವ ಕುರಿತು ಸೂಕ್ತ ತರಬೇತಿ ನೀಡಬೇಕು. ಶಾಲಾ ಆಡಳಿತ ಮಂಡಳಿಯು ಕಿರುಕುಳ ನಿಲ್ಲಿಸಲು ಕಟ್ಟುನಿಟ್ಟಾದ ನೀತಿಗಳನ್ನು ಜಾರಿಗೆ ತರಬೇಕು. ಯಾವುದೇ ಕಾರಣಕ್ಕೂ ಕಿರುಕುಳ ನೀಡುವ ಶಿಕ್ಷಕರನ್ನು ಸಮರ್ಥಿಸಿಕೊಳ್ಳಬಾರದು. ಈ ನಿಟ್ಟಿನಲ್ಲಿ ಮಕ್ಕಳ ಮೇಲೆ ಕಿರುಕುಳ ನೀಡುವವರ ವಿರುದ್ದ ಕರ್ನಾಟಕ ಶಿಕ್ಷಣ ಕಾಯ್ದೆ ಮತ್ತು ಸಂಬಂಧಿತ ಕಾನೂನುಗಳ ಅಡಿಯಲ್ಲಿ ಸರ್ಕಾರ, ಶಿಕ್ಷಣ ಇಲಾಖೆ, ರಕ್ಷಣಾ ಆಯೋಗ, ಮುಂತಾದವರು ಇತಂಹ ಘಟನೆಗಳ ವಿರುದ್ದ ತಕ್ಷಣದ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲೆ ಈ ಮೂಲಕ ಒತ್ತಾಯಿಸುತ್ತದೆ” ಎಂದರು.

“ಶಾಲೆಗಳು ಪ್ರೀತಿ, ಭದ್ರತೆ ಮತ್ತು ಪ್ರೋತ್ಸಾಹದ ಕೇಂದ್ರಗಳಾಗಬೇಕು. ಶಿಕ್ಷಕರು ಮಾರ್ಗದರ್ಶಕರಾಗಿ, ಸ್ನೇಹಿತರಾಗಿ, ತತ್ವಜ್ಞಾನಿಗಳಾಗಿ ಮಕ್ಕಳೊಂದಿಗೆ ನಡೆದುಕೊಳ್ಳಬೇಕು. ನಮ್ಮ ಮಕ್ಕಳಿಗೆ ಭಯ ಮುಕ್ತ ವಾತಾವರಣದ ಅವಕಾಶ ನೀಡಬೇಕು. ‘ಕಿರುಕುಳ ಮುಕ್ತ ಶಾಲೆ ನಮ್ಮ ಗುರಿ, ಭಯ ಮುಕ್ತ ವಾತಾವರಣವೇ ನಮ್ಮ ಗುರಿ’ ಆಗಬೇಕು” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕನಕ ಜಯಂತಿ ಪ್ರಯುಕ್ತ ಲಕ್ಷ ದೀಪೋತ್ಸವ ರಾಜ್ಯ ಮಟ್ಟದ ಟಗರಿನ ಕಾಳಗ, ಕಬಡ್ಡಿ ಮತ್ತು ಕೃಷಿ ಮೇಳ

ಈ ವೇಳೆ ಕರ್ನಾಟಕ ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿಯ‌ ಲಿಂಗರಾಜು ಎಂ. ಗಾಂಧಿನಗರ, ಆದಿಲ್ ಖಾನ್, ತಿಪ್ಪೇರುದ್ರೇಶ್, ಪ್ರವೀಣ್ ಕಕ್ಕರಗೊಳ್ಳ, ರಾಕೇಶ್ ಕಕ್ಕರಗೊಳ್ಳ, ನಾಗೇಶ್ ಸೇರಿದಂತೆ ಇತರ ಸದಸ್ಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...