ದಾವಣಗೆರೆ | ಸಿಜೆಐ ಮೇಲೆ ಶೂ ಎಸೆತ ಯತ್ನ: ಶಾಲೆ ಉಳಿಸಿ ಹೋರಾಟ ಸಮಿತಿ ಖಂಡನೆ

Date:

ದೇಶದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಸಿಜೆಐ ಬಿ.ಆರ್ ಗವಾಯಿಯವರ ಮೇಲೆ ಶೂ ಎಸೆದಿರುವ ವಕೀಲನ ಕೃತ್ಯವನ್ನು ಖಂಡಿಸಿ ಕರ್ನಾಟಕ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ, ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್‌ನನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ ಎಂ ಅವರಿಗೆ ಮನವಿ ಸಲ್ಲಿಸಿತು.

- Advertisement -

ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಧೀಶರಾದ ನ್ಯಾಯಾಧೀಶರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ಘಟನೆ ನಡೆದಿದೆ. ಸಂವಿಧಾನ ಮತ್ತು ಆಡಳಿತಾತ್ಮಕ ಕಾನೂನಿನಲ್ಲಿ ವ್ಯಾಪಕ ಅನುಭವವನ್ನು ಗವಾಯಿಯವರು ಹೊಂದಿದ್ದಾರೆ. ಬುದ್ದ, ಅಂಬೇಡ್ಕರ್ ಹಾಗೂ ಅವರ ತಂದೆಯವರಿಂದ ಸ್ಪೂರ್ತಿಗೊಂಡು ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಅಂತಹವರ ಮೇಲೆ ಧಾರ್ಮಿಕ ಮೂಲಭೂತವಾದಿಗಳು, ಮನುವಾದಿಗಳು ಶೂ ಎಸೆದಿದ್ದಾರೆ. ಈ ಕೃತ್ಯವನ್ನು ಕರ್ನಾಟಕ ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶೂ ಎಸೆದಿರುವ ವಿಚಾರ ಸಂವಿಧಾನಕ್ಕೆ ಹಾಗೂ ಈ ನೆಲದ ಕಾನೂನಿಗೆ ಮಾಡಿದಂತಹ ಹೇಯಕೃತ್ಯ. ವಕೀಲನನ್ನು ಈ ಕೂಡಲೇ ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗೋಮಾಳ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ, ಸ್ಥಳೀಯ ಆಡಳಿತದ ದೌರ್ಜನ್ಯ ಆರೋಪ

ಮನವಿ ಸಲ್ಲಿಸಿದ ವೇಳೆ ಲಿಂಗರಾಜ ಎಂ ಗಾಂಧಿನಗರ, ರಾಕೇಶ್ ಕಕ್ಕರಗೊಳ್ಳ, ಪ್ರವೀಣ್ ಕಕ್ಕರಗೊಳ್ಳ, ನಾಗೇಶಣ್ಣ ಸೇರಿದಂತೆ ಇತರ ಸದಸ್ಯರು ಹಾಜರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...