ಮಹಿಳೆಯರನ್ನು ಅವಮಾನಿಸಿದ ಕಲ್ಕಡ ಪ್ರಭಾಕರ್ ಭಟ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಸದಸ್ಯರು ದಾವಣಗೆರೆ ಉಪ ವಿಭಾಗಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
“ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡ ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ, ಮುಸ್ಲಿಂ ಯುವಕರು ಮಾತ್ರ ಮುಸ್ಲಿಂ ಯುವತಿಯರಿಗೆ ಮೋಸ ಮಾಡುತ್ತಿದ್ದಾರೆ ಎನ್ನುವ ತುಚ್ಛ ಹೇಳಿಕೆ ನೀಡಿ ಒಂದು ಸಮುದಾಯ ಮತ್ತು ಮಹಿಳೆಯರನ್ನು ಅವಮಾನ ಮಾಡಿರುವ ಕಲ್ಕಡ ಪ್ರಭಾಕರ್ ಅವರನ್ನು ಕೂಡಲೇ ಬಂಧಿಸಬೇಕು” ಎಂದು ಪ್ರತಿಭಟಿಸಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಅಸಮರ್ಪಕ ಬಸ್ ಸೇವೆ ವಿದ್ಯಾರ್ಥಿಗಳ ಪ್ರತಿಭಟನೆ
“ಸಮುದಾಯಗಳ ನಡುವೆ ಕೋಮು ಸೌಹಾರ್ಧತೆಯನ್ನು ಕೆಡಿಸುವ ಹೇಳಿಕೆಗಳನ್ನು ನಿರಂತರವಾಗಿ ನೀಡುತ್ತಾ ಸಮಾಜದ ಶಾಂತಿಗೆ ಭಂಗ ತರುವಂತಹ ಕೆಲಸವನ್ನು ಮಾಡುತ್ತಿರುವ ಕಲ್ಲಡ್ಕ ಪ್ರಭಾಕರ್ ಭಟ್‌ನನ್ನು ರಾಜ್ಯ ಸರ್ಕಾರ ಬಂಧಿಸಬೇಕು. ಸಮಾಜದಲ್ಲಿ ಸೌಹಾರ್ಧತೆ ಕದಡುತ್ತಿರುವ, ಕ್ರಿಮಿನಲ್ ಹಿನ್ನಲೆಯಿರುವ ಇವರನ್ನು ಗಡಿಪಾರು ಮಾಡಿ, ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದರು.
ಅಧ್ಯಕ್ಷೆ ಜಬೀನಾಖಾನಂ, ಪ್ರಧಾನ ಕಾರ್ಯದರ್ಶಿ ಕರಿಬಸಪ್ಪ, ಸೈಯದ್, ರಹಮತವುಲ್ಲಾ, ಆಸೀಯಾಬಾನು, ಜಬೀವುಲ್ಲಾ, ಸಬೀನಾ ಸೇರಿದಂತೆ ಇತರರು ಇದ್ದರು.