ದಾವಣಗೆರೆ | ಕಾರ್ಮಿಕರೊಬ್ಬರಿಂದ ಒಳಚರಂಡಿ ಸ್ವಚ್ಛತೆ; ಎಫ್‌ಐಆರ್‌ ದಾಖಲು

Date:

ದಾವಣಗೆರೆ ನಗರದ ಕಲ್ಯಾಣ ಮಂಟಪವೊಂದರಲ್ಲಿ ಕೂಲಿ ಕಾರ್ಮಿಕರೊಬ್ಬರನ್ನು ಒಳಚರಂಡಿ ಸ್ವಚ್ಛತೆಗೆ ಚರಂಡಿಗೆ ಇಳಿಸಿದ ಪ್ರಕರಣ ಸಂಬಂಧ ಇಲ್ಲಿನ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

- Advertisement -

ಕೂಲಿ ಕಾರ್ಮಿಕ ಸಿದ್ದೇಶ ಅವರನ್ನು ಒಳಚರಂಡಿಗೆ ಇಳಿಸಿದ ಸಂಬಂಧ ಪರಿಶೀಲನೆ ನಡೆಸಿದ್ದು, ಕೃತ್ಯ ಸಾಬೀತಾದ ಕಾರಣ ಕಲ್ಯಾಣ ಮಂಟಪದ ಮಾಲೀಕರು, ಮೇಲ್ವಿಚಾರಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಸಹಾಯಕ ಎಂಜಿನಿಯರ್‌(ಯುಜಿಡಿ) ಪಿ ಮಧುಸೂಧನ್‌ ಬಡಾವಣೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಒಳಚರಂಡಿ ವ್ಯವಸ್ಥೆಯ ದುರವಸ್ಥೆ ಬಗ್ಗೆ ಪಾಲಿಕೆಗೆ ದೂರು ಸಲ್ಲಿಸದೆ ಕಾರ್ಮಿಕನಿಂದ ಸ್ವಚ್ಛ ಮಾಡಿಸಲಾಗಿದೆ. ಈ ಸಂಬಂಧ ಮಾಲೀಕರು, ಮೇಲ್ವಿಚಾರಕರು ಹಾಗೂ ಇತರರ ವಿರುದ್ಧ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ–2013 ಕಾಯ್ದೆ ಹಾಗೂ ಸೆಕ್ಷನ್–20ರ ಅಡಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ನಮ್ಮೂರಿನಲ್ಲಿ ವಿದ್ಯುತ್ ಅನ್ನೋದನ್ನೇ ಕಂಡಿಲ್ಲ: ಆದಿವಾಸಿ ಜನರು

“ಕಿರಿಯ ಆರೋಗ್ಯ ನಿರೀಕ್ಷಕ ನಿಖಿಲ್ ಅವರೊಂದಿಗೆ ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿದಾಗ ಒಳಚರಂಡಿ ಛೇಂಬರ್ ತೆರೆದಿತ್ತು. ಮೇಲ್ವಿಚಾರಕ ಮುಪ್ಪಯ್ಯ ಅವರು ಕಾರ್ಮಿಕ ಸಿದ್ದೇಶ ಅವರಿಂದ ಒಳಚರಂಡಿ ಸ್ವಚ್ಛಗೊಳಿಸಿರುವುದನ್ನು ಒಪ್ಪಿಕೊಂಡಿದ್ದಾರೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...