ದಾವಣಗೆರೆ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಪಿಐ ಪ್ರತಿಭಟನೆ

Date:

ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಸಿಪಿಐ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದೆ. ದಾವಣಗೆರೆಯ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಸಿಪಿಐ ಕಾರ್ಯಕರ್ತರು ಆಗ್ರಹಿಸಿದರು.

- Advertisement -

ಸಿಪಿಐ ಜಿಲ್ಲಾ ಮಂಡಳಿ ಸಹ ಕಾರ್ಯದರ್ಶಿ ಆವರಗೆರೆ ಚಂದ್ರು ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರಜಾಪ್ರಭುತ್ವ ಸಂಸ್ಥೆಗಳ ಸ್ವಾಯತ್ತತೆ ಮತ್ತು ಉತ್ತರದಾಯಿತ್ವವನ್ನು ದುರ್ಬಲಗೊಳಿಸುತ್ತಿದೆ. ಚುನಾವಣಾ ಆಯೋಗವು ಸ್ವತಂತ್ರವಾಗಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಸಾಂವಿಧಾನಿಕ ಸಂಸ್ಥೆಯಾಗಿದೆ ಆದರೆ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ಖಾತೆಯಲ್ಲಿ ಕೇಂದ್ರ ಸರ್ಕಾರದ ಪ್ರಭಾವ ಹೆಚ್ಚಾಗಿರುವುದು ಆಯೋಗದ ಸ್ವಾತಂತ್ರ ಮತ್ತು ವಿಸ್ವಾರ್ಹತೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕಿದ್ದು, ಕೇಂದ್ರ ಸರ್ಕಾರದ ಮೂಗು ತೂರಿಸುವಿಕೆಯಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ. ಅರ್ಹ 13 ಕೋಟಿ ಮತದಾರರು ಮತದಾನದಿಂದ ವಂಚಿತರಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಪ್ರತಿಭಟನೆಯನ್ನುದ್ದೇಶಿಸಿ ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಕಾಂ ಹೆಚ್ ಜಿ ಉಮೇಶ್,ಕಾಂ ಐರಣಿ ಚಂದ್ರು,ಕಾಂ ಕೆರನಹಳ್ಳಿ ರಾಜು ಮಾತನಾಡಿದರು.ಜಿ ಯಲ್ಲಪ್ಪ,ವಿ ಲಕ್ಷ್ಮಣ, ಚಿನ್ನಪ್ಪ, ಶೇಖರ ನಾಯಕ, ರಮೇಶ್ ಸಿ ದಾಸರ, ಸರೋಜ, ಪುಷ್ಪ, ನಾಗಮ್ಮ, ಎ ತಿಪ್ಪೇಶ್, ಕೆ ಜಿ ಶಿವಮೂರ್ತಿ, ಜಯಪ್ಪ, ಸುರೇಶ್, ಶಾಗಲೆ ಶರಣಪ್ಪ, ಕೃಷ್ಣಪ್ಪ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ ಕರೆಘಂಟೆಯೇ?

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ...

ಬೀದರ್‌ | ನ.1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಬೀದರ್‌ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು...

ಬೀದರ್‌ | ವಾಲ್ಮೀಕಿ ರಾಮಾಯಣ ಮಾನವ ಸಂಬಂಧಗಳ ಮೌಲ್ಯ ಸಾರುತ್ತದೆ: ನಾ.ಗೀತಾಚಾರ್ಯ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಮಾನವ ಸಂಬಂಧಗಳ ಮಹತ್ವ, ಕುಟುಂಬದ ಜವಾಬ್ದಾರಿ,...