ದಾವಣಗೆರೆ | ಸಾಲಬಾಧೆಯಿಂದ ಮನನೊಂದ ರೈತ ಆತ್ಮಹತ್ಯೆ

Date:

ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಸಾಲಕ್ಕೆ ಹೆದರಿ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸಾಲಬಾಳು ಗ್ರಾಮದಲ್ಲಿ ನಡೆದಿದೆ.

ಸಾಲಬಾಳು ಗ್ರಾಮದ ಸತೀಶ ನಾಯ್ಕ(33) ಆತ್ಮಹತ್ಯೆಗೆ ಶರಣಾದ ರೈತ. ಸತೀಶ ನಾಯ್ಕ ಮತ್ತು ಸಹೋದರರ ಹೆಸರಿಗೆ ಜಂಟಿ ಖಾತೆಯಲ್ಲಿದ್ದ 2.10ಎಕರೆ ಜಮೀನಿನಲ್ಲಿ ಅಡಿಕೆ ತೋಟದ ಜೊತೆ ಮೆಕ್ಕೆ ಜೋಳ ಕೃಷಿ ಮಾಡಿಕೊಂಡಿದ್ದರು.‌ ಬೀಜ, ಗೊಬ್ಬರ ಸೇರಿದಂತೆ ಜಮೀನು ಅಭಿವೃದ್ಧಿಗಾಗಿ ಹೊನ್ನಾಳಿ ಪಿಎಲ್‌ಡಿ ಬ್ಯಾಂಕ್‌ನಲ್ಲಿ ₹1.40 ಲಕ್ಷ, ಧರ್ಮಸ್ಥಳ ಸಂಘದಲ್ಲಿ ₹50,000 ಹಾಗೂ ಕೈಗಡವಾಗಿ ಅಂದಾಜು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಮಳೆ ಕೈಕೊಟ್ಟಿದ್ದರಿಂದ ಸತೀಶ ನಾಯ್ಕ ಆತಂಕಕ್ಕೆ ಒಳಗಾಗಿದ್ದರೆಂದು ಅವರ ಸಂಬಂಧಿಕರು, ಸ್ನೇಹಿತರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಔರಾದ ತಾಲೂಕನ್ನು ಬರಪಿಡಿತವೆಂದು ಘೋಷಿಸಲು ಆಗ್ರಹ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಳೆ ಬಾರದಿದ್ದರಿಂದ ಬಿತ್ತಿದ್ದ ಬೆಳೆಯ ಕೈಗೆ ಬರಲಿಲ್ಲ. ಬ್ಯಾಂಕ್, ಸಂಘ ಹಾಗೂ ಕೈಗಡ ಸಾಲವನ್ನು ಹೇಗೆ ತೀರಿಸುವುದೆಂಬ ಆತಂಕದಲ್ಲಿ ಸತೀಶನಾಯ್ಕ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮೃತನ ಪತ್ನಿ ರೇಷ್ಮಾ ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಬಸವಣ್ಣ ಮಾನವ ಕುಲಕ್ಕೆ ಬೇಕಾಗಿರುವಂತಹ ವಿಶ್ವಗುರು: ಬಸವಪ್ರಭು ಸ್ವಾಮೀಜಿ

ಬಸವಣ್ಣ ಕೇವಲ ಲಿಂಗಾಯತರ, ಕನ್ನಡಿಗರ ಸ್ವತ್ತಲ್ಲ. ಇಡೀ ಮಾನವ ಕುಲಕ್ಕೇ ಬೇಕಾಗಿರುವಂತಹ...

ದಾವಣಗೆರೆ | ಮೋದಿಯವರು ಮೈಸೂರು ಮಹಾ ಸಂಸ್ಥಾನದ ಪ್ರತಿಧ್ವನಿಯಂತೆ ಕೆಲಸ ಮಾಡುತ್ತಿದ್ದಾರೆ: ಯದುವೀರ್ ಒಡೆಯರ್

ದಾವಣಗೆರೆಗೂ ಮೈಸೂರು ಅರಮನೆಗೂ ಅವಿನಾಭಾವ ಸಂಬಂಧವಿದೆ ಅದಕ್ಕೆ ಕಾರಣ ದಾವಣಗೆರೆ ಅಂದಿನ...

ದಾವಣಗೆರೆ | ತ್ಯಾಜ್ಯ ವಿಲೇವಾರಿ ಘಟಕದಲ್ಲಿನ ಆಕಸ್ಮಿಕ ಬೆಂಕಿ

ದಾವಣಗೆರೆ ನಗರದ ಹೊರವಲಯದಲ್ಲಿರುವ ಆವರಗೊಳ್ಳದ ತ್ಯಾಜ್ಯ ವಿಲೇವಾರಿ ಘಟಕದಲ್ಲಿನ ಆಕಸ್ಮಿಕವಾಗಿ ಕಸದ...