ದಾವಣಗೆರೆ | ಸ್ಲಂ ನಿವಾಸಿಗಳಿಗೆ ನಿವೇಶನ ನೀಡುವಂತೆ ಆಗ್ರಹ

Date:

ಸ್ಲಂನಲ್ಲಿ ವಾಸಿಸುವ ವಸತಿ ಹೀನರಿಗೆ ನಿವೇಶನಗಳನ್ನು ನೀಡುವಂತೆ ಹಲವು ವರ್ಷಗಳಿಂದ ಸ್ಲಂಜನಾಂದೋಲನ ಕರ್ನಾಟಕ, ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ದಾವಣಗೆರೆ ಜಿಲ್ಲಾ ಸಮಿತಿಯಿಂದ ಹೋರಾಟ ಮಾಡುತ್ತಾ ಬಂದಿದ್ದರೂ ನಮ್ಮ ಮನವಿಗೆ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಸಂದಿಸುತ್ತಿಲ್ಲ ಎಂದು ಸಮಿತಿ ಗೌರವಾಧ್ಯಕ್ಷ ಎಸ್ ಎಲ್ ಆನಂದಪ್ಪ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂಘಟನೆಯ ಹೋರಾಟಕ್ಕೆ ಸ್ಪಂದಿಸಿದ ಹಿಂದಿನ ಜಿಲ್ಲಾಧಿಕಾರಿಗಳಾಗಿದ್ದ ಗೌತಮ್ ಬಗಾದಿ ಅವರು ಜಿಎಂಐಟಿ ಬಳಿ 41 ಎಕರೆ ಹಾಗೂ ಬಾತಿ ಸರ್ವೇ ನಂಬರ್‌ನಲ್ಲಿ 20 ಎಕರೆ ಭೂಮಿ ಖರೀದಿಸಿದ್ದು, ಮೊದಲ ಆದ್ಯತೆಯನ್ನು ಸ್ಲಂ ವಸತಿರಹಿತರಿಗೆ ನೀಡುವುದಾಗಿ ಭರವಸೆ ನೀಡಿದ್ದರು. ಅವರ ವರ್ಗಾವಣೆ ನಂತರ ಇಬ್ಬರು, ಮೂವರು ಜಿಲ್ಲಾಧಿಕಾರಿಗಳು ಬಂದರು. ಅವರಿಗೂ ಕೂಡ ಮನವಿ ಸಲ್ಲಿಸಿದರು ಕ್ರಮ ಕೈಗೊಂಡಿಲ್ಲ”
ಎಂದು ಆಕ್ಷೇಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಈಗಿನ ಜಿಲ್ಲಾಧಿಕಾರಿಗೆ ಜನವರಿ 8ರಂದು ವಸತಿ ರಹಿತರ ಪರವಾಗಿ ಸಂಘಟನೆಯಿಂದ ಮನವಿ ಸಲ್ಲಿಸಲಾಗುವುದು. ಕ್ರಮ ಕೈಗೊಳ್ಳದಿದ್ದಲ್ಲಿ ಜನವರಿ 16ರಿಂದ ನಿವೇಶನ ಸಿಗುವವರೆಗೂ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಾಗುವುದು” ಎಂದು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ರೇಣುಕಾ ಯಲ್ಲಮ್ಮ ಮಾತನಾಡಿ, “ನಮ್ಮ ಸಂಘಟನೆಯಿಂದ ಕಳೆದ 14 ವರ್ಷಗಳಿಂದ ಮೂಲ ಸೌಕರ್ಯಕ್ಕಾಗಿ ಹೋರಾಟ ಮಾಡಿಕೊಂಡು ಬರಲಾಗಿದೆ. ಸ್ಲಂನಿವಾಸಿಗಳ ನಿವೇಶನಕ್ಕಾಗಿ ಹೋರಾಟ ನಡೆಸಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಈಗಿನ ಜಿಲ್ಲಾಧಿಕಾರಿಗಳು ನಮ್ಮ ಮನವಿಗೆ ಕ್ರಮ ಕೈಗೊಳ್ಳದಿದ್ದರೆ ಸುಮಾರು 1000ಕ್ಕೂ ಹೆಚ್ಚು ನಿವೇಶನ ರಹಿತ ಮಹಿಳೆಯರು, ಮಕ್ಕಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಿವೇಶನ ನೀಡುವವರೆಗೂ ನಿರಂತರ ಧರಣಿ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾರ್ಮಿಕರೊಬ್ಬರಿಂದ ಒಳಚರಂಡಿ ಸ್ವಚ್ಛತೆ; ಎಫ್‌ಐಆರ್‌ ದಾಖಲು

ಸುದ್ದಿಗೋಷ್ಟಿಯಲ್ಲಿ ಎಂ ಶಬ್ಬಿರ್ ಸಾಬ್, ಮುನ್ನಾ ಸಾಬ್, ಮಂಜುಳ, ಜಂಶಿದಾಬಾನು, ನಯಾಜ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...