ದಾವಣಗೆರೆ | ದೇಶದ ಸಂಪತ್ತು ರಕ್ಷಿಸುವಂತೆ ಆಗ್ರಹ; ನ.26ರಿಂದ 28ರವರೆಗೆ ಧರಣಿ

Date:

ದೇಶದ ಸಂಪತ್ತನ್ನು ರಕ್ಷಿಸಿ, ಜನರ ಬದುಕನ್ನು ಉಳಿಸುವ ಪರ್ಯಾಯ ನೀತಿಗಳಿಗಾಗಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ನವೆಂಬರ್‌ 26ರಿಂದ 28ರವರೆಗೆ ದೇಶಾದ್ಯಂತ ಎಲ್ಲ ರಾಜಭವನಗಳ ಮುಂದೆ ಸಹಸ್ರಾರು ಜನರು ಮಹಾಧರಣಿ ನಡೆಸಲು ಎಸ್‌ಕೆಎಂ-ಜೆಸಿಟಿಯು ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ನೇತೃತ್ವದಲ್ಲಿ ಪೋಸ್ಟರ್ ಬಿಡುಗಡೆ ಮಾಡಿದರು.

- Advertisement -

ಸಮಿತಿ ಸಂಚಾಲಕ ಆವರಗೆರೆ ಉಮೇಶ್ ಮಾತನಾಡಿ, “ಕೇಂದ್ರ ಸರ್ಕಾರ ‘ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್ ಯೋಜನೆ’ ಮೂಲಕ ದೇಶದ ಸಂಪತ್ತಾದ ವಿದ್ಯುತ್‌, ರೈಲ್ವೆ, ಕಲ್ಲಿದ್ದಲು, ದೂರ ಸಂಪರ್ಕ, ವಿಮಾ ಕ್ಷೇತ್ರ, ವಿಮಾನಯಾನ, ರಕ್ಷಣಾ ಸಾಮಗ್ರಿಗಳ ಉತ್ಪಾದನಾ ಕೈಗಾರಿಕೆ ಸೇರಿದಂತೆ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ. ಜನರಿಗೆ ಸೇವೆ ಒದಗಿಸಬೇಕಾದ ಅಗತ್ಯ ವಲಯಗಳಾದ ಆರೋಗ್ಯ, ಶಿಕ್ಷಣ, ಸಾರಿಗೆ, ಆಹಾರ, ನೀರು, ಭೂಮಿ, ಗಣಿ, ಅರಣ್ಯ ಸೇರಿದಂತೆ ಎಲ್ಲವನ್ನೂ ಕಾರ್ಪೊರೇಟ್ ವಲಯಕ್ಕೆ ಹಸ್ತಾಂತರಿಸಿ ಸೇವೆಯನ್ನು ಸರಕಾಗಿಸಲು ಹೊರಟಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಹಲವು ಯೋಜನೆಗಳನ್ನು ದುರ್ಬಲಗೊಳಿಸುತ್ತಿದ್ದು, ಸರ್ಕಾರದ ಇಂತಹ ಜನ ವಿರೋಧಿ ಕ್ರಮಗಳು ಕಾರ್ಪೊರೇಟ್ ವರ್ಗದ ಸಂಪತ್ತು ಮತ್ತು ಆದಾಯವನ್ನು ಗಣನೀಯವಾಗಿ ಹೆಚ್ಚಿಸಿದ್ದು, ಶೋಷಿತ ಜನ ಸಮೂಹದ ಜೀವನ ಮಟ್ಟವನ್ನು ದಾರಿದ್ರಕ್ಕೆ ತಳ್ಳಲ್ಪಟ್ಟಿದೆ. ರಾಷ್ಟ್ರೀಯ ಆದಾಯದಲ್ಲಿ ಭಾರತದ ಅತ್ಯಂತ ಮೇಲ್ತರದ ಶೇ.1 ರಷ್ಟು ಜನ ಶೇ.40.5 ರಷ್ಟು ಒಡೆತನ ಹೊಂದಿದ್ದರೆ, ಶೇ.50ರಷ್ಟು ಸಾಮಾನ್ಯ ಜನರ ಒಡೆತನ ಶೇ.3ಕ್ಕೆ ಕುಸಿದಿದ್ದು, ನಿರುದ್ಯೋಗ, ಬಡತನ, ಹಸಿವು, ಮಹಿಳಾ ಮತ್ತು ಮಕ್ಕಳ ಅಪೌಷ್ಟಿಕತೆ ಹೆಚ್ಚಾಗುತ್ತಿದೆ” ಎಂದರು.

“ರೈತರ ಉತ್ಪನ್ನಗಳಿಗೆ ಎಂ ಎಸ್ ಸ್ವಾಮಿನಾಥನ್ ಶಿಫಾರಸಿನ ಸೂತ್ರ ಸಿ2+50% ಪ್ರಕಾರ ಕನಿಷ್ಠ ಬೆಂಬಲ ಬೆಲೆ ಹಾಗೂ ಖರೀದಿ ಖಾತ್ರಿ ಒದಗಿಸುವ ಶಾಸನ ಜಾರಿ ಮಾಡಬೇಕು. ರೈತರಿಗೆ ನೀಡುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ವಿದ್ಯುಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಳವಾಗಬೇಕು. ರೈತರ ಆತ್ಮಹತ್ಯೆ ತಡೆಯಲು ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಕನಿಷ್ಠ ವೇತನ ಮಾಸಿಕ ₹26,000 ನಿಗದಿ, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ, ಖಾಯಂ ಸ್ವರೂಪದ ಕೆಲಸದಲ್ಲಿ ತೊಡಗುವ ಕಾರ್ಮಿಕರ ಖಾಯಂಗೆ ಶಾಸನ ರೂಪಿಸಬೇಕು. ನಾಲ್ಕು ಕಾರ್ಮಿಕ ಸಂಹಿತೆಗಳನ್ನು, ಎಫ್‌ಟಿಇ ಪದ್ಧತಿಯನ್ನು ಹಾಗೂ ಕೆಲಸದ ಅವಧಿಯ ಹೆಚ್ಚಳವನ್ನು ರದ್ದುಪಡಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕೆಲಸ ಮಾಡದ ಅಧಿಕಾರಿಗಳನ್ನು ಎಚ್ಚರಿಸಲು ನಿದ್ದೆ ಚಳುವಳಿ ಹಮ್ಮಿಕೊಂಡ ರೈತರು

ಈ ವೇಳೆ ಕೆ ಎಚ್ ಆನಂದರಾಜ್, ಮಧು ತೊಗಲೇರಿ, ಮಂಜುನಾಥ್ ಕುಕ್ಕವಾಡ, ಹನುಮಂತಪ್ಪ, ಐರಣಿ ಚಂದ್ರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...