ದಾವಣಗೆರೆ | ಮಾದಕ ವಸ್ತು ಸೇವನೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

Date:

Advertisements

ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳಿಗೆ ಯುವಜನರು ಆಕರ್ಷಿತರಾಗುವುದನ್ನು ನಿಯಂತ್ರಿಸಲು ದಾವಣಗೆರೆ ಜಿಲ್ಲೆಯ ಶಾಲೆ ಕಾಲೇಜುಗಳ ವ್ಯಾಪ್ತಿಯಲ್ಲಿ ತೀವ್ರ ನಿಗಾ ವಹಿಸಲು ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ ವಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಾರ್ಕೋ ಕೋ-ಆರ್ಡಿನೇಷನ್ ಸೆಂಟ‌ರ್ (ಎನ್‌ಸಿಒಆರ್‌ಡಿ) ಮೆಕ್ಯಾನಿಸಂ, ಸಿಗರೇಟ್ ಮತ್ತು ಇತರ ತುಂಬಾಕು ಉತ್ಪನ್ನಗಳ ನಿಧಿ ಕಾಯ್ದೆ (ಸಿಒಟಿಪಿಎ) ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಗಾಂಜಾ ಹಾಗೂ ತಂಬಾಕು ಉತ್ಪನ್ನಗಳನ್ನು ಹೆಚ್ಚಾಗಿ ಬೆಳೆಯುವ ಸಾಧ್ಯತೆ ಇದ್ದು, ಅಂತಹ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು. ಗಾಂಜಾ ಮಾರಾಟ ಮಾಡುವುದು ಹಾಗೂ ಬೆಳೆಯುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದರು.

Advertisements

“ಯುವಕರು ಮಾದಕ ವಸ್ತುಗಳಿಗೆ ಹೆಚ್ಚು ಬಲಿಯಾಗುತ್ತಿದ್ದು, ಹಾಸ್ಟೆಲ್ ಮತ್ತು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವರ್ತನೆಯನ್ನು ಗಮನಿಸಬೇಕು. ಅನುಮಾನ ಬಂದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಸಂದರ್ಶಿಸಿ ಖಿನ್ನತೆಯಿಂದ ವಿಮುಕ್ತರನ್ನಾಗಿ ಮಾಡಬೇಕು. ಜಿಲ್ಲೆಯ ಕಾರಾಗೃಹಗಳಲ್ಲಿ ಕೈದಿಗಳಿಗೆ ಗಾಂಜಾ ಹಾಗೂ ತಂಬಾಕು ಉತ್ಪನ್ನಗಳನ್ನು ಪೂರೈಸುತ್ತಿರುವುದು ಕಂಡುಬರುತ್ತಿದ್ದು, ಪೊಲೀಸ್ ಇಲಾಖೆ ಕ್ರಮ ವಹಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಬೈಕ್ ಕಳ್ಳರ ಬಂಧನ; 43 ಲಕ್ಷ ರೂ. ಮೌಲ್ಯದ ದ್ವಿಚಕ್ರಗಳು ವಾಹನ ವಶ

“ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟು ಸೇರಿದಂತೆ ತಂಬಾಕು ಉತ್ಪನ್ನಗಳ ಸೇವನೆ ನಿಯಂತ್ರಿಸಲು ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ತಂಬಾಕು ಉತ್ಪನ್ನಗಳಿಗೆ ಸಂಬಂಧಿಸಿದ ಇಲಾಖೆಗಳು ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು” ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್, ಜಿಲ್ಲಾ ಉಪ ವಿಭಾಗಾಧಿಕಾರಿ ದುರ್ಗಶ್ರೀ, ಡಿಡಿಪಿಐ ಕೊಟ್ರೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X