ದಾವಣಗೆರೆ | ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ: ಫಲಿತಾಂಶ ಘೋಷಣೆ

Date:

ರಾಜ್ಯಾದ್ಯಂತ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಮತ್ತು ಪದಾಧಿಕಾರಿಗಳ ಚುನಾವಣೆ ನಡೆಯುತ್ತಿದ್ದು, ದಾವಣಗೆರೆಯಲ್ಲಿಯೂ ಜಿಲ್ಲಾ ಘಟಕದ ಚುನಾವಣೆಗೆ ಇಂದು ಮತದಾನ ನಡೆದಿದ್ದು, ಸಂಜೆ ನಾಲ್ಕರಿಂದ ನಡೆದ ಮತ ಎಣಿಕೆಯ ಫಲಿತಾಂಶ ರಾತ್ರಿ 10.30ಕ್ಕೆ ಘೋಷಣೆಯಾಗಿದ್ದು, ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಸೇರಿದಂತೆ 15 ಕಾರ್ಯಕಾರಿ ಸಮಿತಿಯ ನಿರ್ದೇಶಕರ 25 ಜನರ ತಂಡ ಆಯ್ಕೆಯಾಗಿದೆ.

- Advertisement -

ನವೆಂಬರ್ 9 ರಂದು ಬೆಳಿಗ್ಗೆ 9:00 ರಿಂದ ಸಂಜೆ ಮೂರರವರೆಗೆ ಜಿಲ್ಲಾ ವಾರ್ತಾ ಭವನದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಚುನಾವಣೆಗೆ ಮೂರು ತಂಡಗಳಲ್ಲಿ ಒಟ್ಟು 55 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...
IMG 20251109 WA0233
ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳು

ಒಂದು ಅಧ್ಯಕ್ಷ ಸ್ಥಾನಕ್ಕೆ 3 ಅಭ್ಯರ್ಥಿಗಳು, ಮೂರು ಉಪಾಧ್ಯಕ್ಷ ಸ್ಥಾನಕ್ಕೆ 7‌ ಅಭ್ಯರ್ಥಿಗಳು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ 3, ಖಜಾಂಚಿ ಸ್ಥಾನಕ್ಕೆ 2, ಮೂರು ಕಾರ್ಯದರ್ಶಿ ಸ್ಥಾನಕ್ಕೆ 7, ರಾಜ್ಯ ಸಮಿತಿ ಕಾರ್ಯಕಾರಿ ಸದಸ್ಯ ಸ್ಥಾನಕ್ಕೆ 2 ಅಭ್ಯರ್ಥಿಗಳು ಸೇರಿದಂತೆ 15 ಕಾರ್ಯಕಾರಿ ಸದಸ್ಯರ ಸ್ಥಾನಕ್ಕೆ 31 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 2025ರಲ್ಲಿ ಮತದಾನಕ್ಕೆ ಅರ್ಹವಿದ್ದ 37 ಮಹಿಳೆಯರು ಸೇರಿದಂತೆ ಪತ್ರಕರ್ತರ ಸಂಘದಲ್ಲಿ 356 ಒಟ್ಟು ಮತಗಳಿದ್ದವು.‌ ಚಲಾವಣೆಯಾದವುಗಳಲ್ಲಿ 306 ಮತಗಳು ಸಿಂಧುವಾಗಿದ್ದವು.

ಅಧ್ಯಕ್ಷರಾಗಿ ಮಂಜುನಾಥ್ ಎಂ ಏಕಬೋಟೆ, ಉಪಾಧ್ಯಕ್ಷರಾಗಿ ತಿಪ್ಪೇಸ್ವಾಮಿ, ಸುಭಾನ್ ಖಾನ್, ಶ್ರೀನಿವಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಬದರಿನಾಥ್, ಖಜಾಂಚಿಯಾಗಿ ವೀರೇಶ್, ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಚಂದ್ರಪ್ಪ, ಕಾರ್ಯದರ್ಶಿಗಳಾಗಿ ಆಂಜನೇಯ, ವೇದಮೂರ್ತಿ, ಮುದ್ದಯ್ಯ ಆಯ್ಕೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಲಿತರ ಸಾಗುವಳಿ ಭೂಮಿಯ ಅತಿಕ್ರಮಣ; ಅಂದನೂರಿನಲ್ಲಿ ದಲಿತ ಶೋಷಣೆಯ ಮತ್ತೊಂದು ಮಗ್ಗುಲು

15 ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನಕ್ಕೆ ಚಿದಾನಂದ್ , ಜೈಮುನಿ, ಸುರೇಶ್ ಕುಣೆಬೆಳೆಕೆರೆ, ಪ್ರವೀಣ್, ಕಿರಣ್, ಮಂಜುನಾಥ್ ಕಾಡಜ್ಜಿ, ರಾಘವೇಂದ್ರರಾವ್, ವಿಷ್ಣುಕುಮಾರ್, ವಿಶ್ವನಾಥ್
ಮೈಲಾಳ್, ರಘುಪ್ರಸಾದ್, ಏಕಾಂತಪ್ಪ, ಚನ್ನಬಸಪ್ಪ, ಅಣ್ಣಪ್ಪ, ಚನ್ನಬಸವ ಎಂ ಎಸ್
ಆಯ್ಕೆಯಾಗಿದ್ದಾರೆ. 37 ಮಹಿಳಾ ಸದಸ್ಯರಿರುವ ದಾವಣಗೆರೆ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿರ್ದೇಶಕರಾಗಿ ಶ್ರೀಮತಿ ಭಾರತಿ ಆಯ್ಕೆಯಾದ ಏಕ ಮಾತ್ರ ಮಹಿಳೆಯಾಗಿದ್ದಾರೆ.‌ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತರಾದ ಮಲ್ಲಿಕಾರ್ಜುನ ಕಬ್ಬೂರು ಕಾರ್ಯ ನಿರ್ವಹಿಸಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...