ದಾವಣಗೆರೆ | ಹರಿಹರದ ವಾಲ್ಮೀಕಿ ಗುರುಪೀಠದಲ್ಲಿ ಜಾತ್ರೆ: ಸೋಮವಾರ ಸಿಎಂ ಸಿದ್ದರಾಮಯ್ಯ ಭೇಟಿ

Date:

ಮಹರ್ಷಿ ವಾಲ್ಮೀಕಿ ಗುರು ಪೀಠದಿಂದ ಪ್ರತಿ ವರ್ಷ ಆಚರಿಸಲಾಗುವ ವಾಲ್ಮೀಕಿ ಜಾತ್ರೆಯ ಎಂಟನೇ ವರ್ಷದ ಜಾತ್ರಾ ಮಹೋತ್ಸವ ದಾವಣಗೆರೆ ಜಿಲ್ಲೆ, ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಆಯೋಜನೆಗೊಂಡಿದೆ. ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀಗಳು ಜಾತ್ರೆಯ ಮತ್ತು ಸಮಾರಂಭದ ಸಾನಿಧ್ಯ ವಹಿಸಿದ್ದು ನಾಡಿನ ವಿವಿಧ ಪಕ್ಷಗಳ ರಾಜಕೀಯ ಮುಖಂಡರು, ಸಮಾಜದ ಮುಖಂಡರು ಸೇರಿದಂತೆ ನಾಡಿನ ಸಮಾಜದ ಬಾಂಧವರು ಪಾಲ್ಗೊಂಡಿದ್ದಾರೆ. ಸೋಮವಾರ ಗುರುಪೀಠಕ್ಕೆ ಭೇಟಿ ನೀಡಿ ಜಾತ್ರೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

- Advertisement -
ಸಿದ್ದರಾಮಯ್ಯ 2

ಫೆಬ್ರವರಿ 8 ಮತ್ತು 9ರಂದು ಎರಡು ದಿನಗಳ ಕಾಲ ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು ಇಂದು ಧ್ವಜಾರೋಹಣ ಬಳಿಕ ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ ಸುಮಾರು 12 ಗಂಟೆಗೆ ಪ್ರಾರಂಭವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿದ ರಾಜ್ಯ ಪರಿಶಿಷ್ಟ ಪಂಗಡದ ವಾಲ್ಮೀಕಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ್ ದದ್ದಲ್ ಮಾತನಾಡಿ, *ವಾಲ್ಮೀಕಿ ಮಠದ ಪ್ರಸ್ತುತ ಶ್ರೀಗಳ ಅವಿರತ ಹೋರಾಟದಿಂದ ಸಮಾಜದ ಪರಿಶಿಷ್ಟ ಪಂಗಡದ ಮೀಸಲಾತಿ ಶೇ.7ಕ್ಕೆ ಏರಿಕೆಯಾಗಿದೆ.‌ ಇದರಿಂದ ವಾಲ್ಮೀಕಿ ಸಮುದಾಯಕ್ಕೆ ಮಾತ್ರವಲ್ಲ ಪರಿಶಿಷ್ಟ ಪಂಗಡದ ಎಲ್ಲಾ ಜಾತಿಗಳಿಗೆ ಇದರ ಅನುಕೂಲ ದೊರೆಯಲಿದೆ ” ಎಂದು ಅಭಿಪ್ರಾಯಪಟ್ಟರು.

1003646201

“ಪರಿಶಿಷ್ಟ ಪಂಗಡದ ಅಧಿಕಾರಿಗಳಿಗೆ ಸರ್ಕಾರದ ಅಯಕಟ್ಟಿನ ಹುದ್ದೆಗಳು ಸ್ಥಾನಮಾನಗಳು ಸಿಗುತ್ತಿಲ್ಲ.‌ ಇದರ ಬಗ್ಗೆ ನಮಗೆ ಸಾಕಷ್ಟು ನೋವಿದೆ. ಉತ್ತಮ ಸ್ಥಾನಮಾನದಲ್ಲಿರುವ ಸಮಾಜದ ಮುಖಂಡರು ಹಾಗೂ ಅಧಿಕಾರಿಗಳು ಸಮಾಜದಲ್ಲಿ ಬಡವರ ಹಿಂದುಳಿದವರ ಬಗ್ಗೆ ಯೋಚಿಸಿ ಅವರನ್ನು ಬಡತನದಿಂದ ಮೇಲೆತ್ತುವ ಕೆಲಸ ಮಾಡಬೇಕಾಗಿದೆ. ಈ ನೆಲಲ್ಲಿ ವಾಲ್ಮೀಕಿ ನಿಗಮದಲ್ಲಿ ಕೂಡ ಸಮಾಜದ ಬಡವರಿಗೆ ಹಲವು ರೀತಿಯ ಸಹಾಯ ಮತ್ತು ಉಪಯೋಗಗಳನ್ನು ಮಾಡಿಕೊಡಲಾಗುತ್ತಿದೆ. ಪ್ರತಿಯೊಂದು ಸಮಾಜಗಳ ಮಠಗಳಿಗೆ ಬೆಂಗಳೂರಿನಲ್ಲಿ ನಾಲ್ಕು ಎಕರೆ ಜಮೀನು ಮಂಜೂರು ಮಾಡುವ ಮೂಲಕ ಹಿಂದುಳಿದ ವರ್ಗಗಳ ಮತ್ತು ಎಲ್ಲಾ ಸಮಾಜಗಳು ಬೆಂಗಳೂರಿನಲ್ಲಿ ಮಠಗಳನ್ನು ಸ್ಥಾಪಿಸಿ ಆಮೂಲಕ ವಿದ್ಯಾರ್ಥಿಗಳ ಮತ್ತು ಸಮಾಜದ ಬಡವರ ಬಂಧುಗಳ ಏಳಿಗೆಗೆ ಸಿದ್ದರಾಮಯ್ಯ ಮತ್ತು ಕರ್ನಾಟಕ ಸರ್ಕಾರ ಕೆಲಸ ಮಾಡಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನೌಕರರ ಸಂಘದ ಕಾರ್ಯದರ್ಶಿ ಶಂಕರ್ ಜಾಲಿಹಾಳ್ ಪ್ರಾಸ್ತಾಪಿಕವಾಗಿ ಮಾತನಾಡಿ, “ನೇಮಕಾತಿ, ಬಡ್ತಿ ಪ್ರಕ್ರಿಯೆ, ವರ್ಗಾವಣೆಗಳಲ್ಲಿ ಪರಿಶಿಷ್ಟ ಪಂಗಡದ ನೌಕರರಿಗೆ ಅನ್ಯಾಯವಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಪರಿಶಿಷ್ಟ ಪಂಗಡದ ಅಧಿಕಾರಿಗಳಿಗೆ ಅವಕಾಶ ಸಿಗುತ್ತಿಲ್ಲ. ಸಮಾಜಮುಖಿ ಕೆಲಸ ಮಾಡುವ ಯಾವ ಹುದ್ದೆಗಳೂ ಸಮಾಜದ ಅಧಿಕಾರಿಗಳಿಗೆ ದೊರಕುತ್ತಿಲ್ಲ ಎನ್ನುವ ಕೊರಗಿದೆ. ಉತ್ತಮ ಅವಕಾಶಗಳು ದೊರಕಲು ಮಠ, ಸಮಾಜದ ಮುಖಂಡರು, ಶಾಸಕರು ಹಾಗೂ ಸಚಿವರು ಗಮನಹರಿಸಬೇಕು” ಎಂದು ಮನವಿ ಮಾಡಿದರು.‌

.ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಮಾಜ ಮುನ್ನಡೆಸುವ ಶಕ್ತಿಯಿರುವ ಮಹಿಳೆಗೆ ಅವಕಾಶ ನೀಡಬೇಕು: ನಾಗಲಕ್ಷ್ಮಿ ಚೌಧರಿ

ಕಾರ್ಯಕ್ರಮದಲ್ಲಿ ಫೆಬ್ರವರಿ 9ರವರೆಗೆ ಗೋಷ್ಠಿಗಳು ಜರುಗಲಿದ್ದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀಗಳು ಸಾನಿಧ್ಯ ವಹಿಸುವರು.‌ ವೇದಿಕೆಯಲ್ಲಿ ವಾಲ್ಮೀಕಿ ನಿಗಮದ ಅಧ್ಯಕ್ಷ ಶಾಸಕ ಬಸವರಾಜ್ ದದ್ದಲ್, ಪರಿಷತ್ ಸದಸ್ಯ ಸಿಟಿ ರವಿ, ಜಾತ್ರೆ ಸಮಿತಿ ಸಂಚಾಲಕರಾದ ನಿವೃತ್ತ ಪೊಲೀಸ್ ಅಧಿಕಾರಿ ಪಂಪಾಪತಿ,
ನೌಕರರ ಸಂಘದ ಶ್ರೀನಿವಾಸ್, ಹರಿಹರ ಶಾಸಕ ಬಿಪಿ ಹರೀಶ್, ಮಾಜಿ ಶಾಸಕ ವೈ ರಾಮಪ್ಪ, ಸಮಾಜದ ಮುಖಂಡ ವೀರಣ್ಣ ಸೇರಿದಂತೆ ಸಮಾಜದ ನೌಕರರು, ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...