ದಾವಣಗೆರೆ | ಭದ್ರಾ ಜಲಾಶಯದಿಂದ 100 ದಿನ ನೀರು ಹರಿಸಬೇಕು; ರೈತರ ಆಗ್ರಹ

Date:

ನೀರಾವರಿ ಇಲಾಖೆ ಕೊಟ್ಟ‌ ಮಾತಿನಂತೆ ಭದ್ರಾ ಜಲಾಶಯದಿಂದ 100 ದಿನಗಳ ಕಾಲ ನಿರಂತರ ನೀರು ಹರಿಸಬೇಕು. ಮುಂಗಾರು ಹಂಗಾಮಿನ ನೀರು ಹರಿಸುವುದನ್ನು ನಿಲ್ಲಿಸುವ ಸಲುವಾಗಿಯೇ ಗುರುವಾರದಂದು ಕಾಡಾ ಸಭೆ ಕರೆದಿದ್ದಾರೆ ಎಂದು ಭಾರತೀಯ ರೈತ ಒಕ್ಕೂಟದ ರೈತ ಮುಖಂಡರು ಆರೋಪಿಸಿದರು.

- Advertisement -

ಕಾಡಾ ಸಭೆ ವಿರೋಧಿಸಿ ದಾವಣಗೆರೆಯಲ್ಲಿ ಪ್ರತಿಭಟಿಸಿದ ರೈತರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, “ಈ ಸಭೆ ರದ್ದುಪಡಿಸದಿದ್ದರೆ ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಭದ್ರಾ ಜಲಾಶಯ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯ ರೈತರ ಬೆಳೆಗೆ ಮುಖ್ಯ ನೀರಿನ ಮೂಲ. ನಿರಂತರ ನೂರು ದಿನಗಳ ಕಾಲ ಮುಂಗಾರು ಹಂಗಾಮಿನ ನೀರು ಹರಿಸುವುದಾಗಿ ನೀರಾವರಿ ಇಲಾಖೆ ಭರವಸೆ ನೀಡಿತ್ತು. ಇದೀಗ ಚನ್ನಗಿರಿ, ಶಿವಮೊಗ್ಗ, ಭದ್ರಾವತಿಯ ತೋಟಗಾರಿಕೆ ಬೆಳೆಯ ರೈತರ ಒತ್ತಡದಿಂದ ನೀರು ನಿಲ್ಲಿಸಲು ಸಭೆ ಕರೆಯಲಾಗಿದೆ” ಎಂದು ಆರೋಪಿಸಿದರು.

“ನೀರು ಹರಿಸಲು ಪ್ರಾರಂಭವಾಗಿ 25 ದಿನ ಕಳೆದಿದ್ದು, ಉಳಿದ 75 ದಿನಗಳ ಕಾಲವೂ ನೀರು ಹರಿಸಬೇಕು. ಈಗಾಗಲೇ ರೈತರು ತಮ್ಮ ಜಮೀನುಗಳಲ್ಲಿ ಭತ್ತ ನಾಟಿ ಮಾಡಿದ್ದು, ಕಾಡಾದಿಂದ ನೀರು ನಿಲ್ಲಿಸಲು ಇದೀಗ ಸಭೆ ಕರೆದಿರುವುದು ರೈತರು ಹೋರಾಟಕ್ಕಿಳಿಯುವಂತೆ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಭೂಸ್ವಾಧೀನವಾಗಿರುವ ಭೂಮಿ ಹಸ್ತಾಂತರಿಸದೇ ವಂಚನೆ; ಭೂರಹಿತರ ಆರೋಪ

“ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ರೈತರು ಅಕ್ರಮ ಪಂಪ್‌ಸೆಟ್ ಹಾಕಿಕೊಂಡಿದ್ದು, ಅಡಿಕೆ ತೋಟಗಳಿಗೆ ನೀರು ಹರಿಸುತ್ತಿದ್ದಾರೆ. ಆದರೆ, ದಾವಣಗೆರೆ ಭಾಗದ ಭತ್ತ ಬೆಳೆದ ರೈತರು ನೀರಿಲ್ಲದೇ ಪರದಾಡುತ್ತಿದ್ದಾರೆ. ಕಾಡಾ ಸಭೆಯನ್ನು ದಾವಣಗೆರೆ ರೈತರು ಬಹಿಷ್ಕಾರ ಮಾಡುತ್ತೇವೆ” ಎಂದು ಕಿಡಿಕಾರಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...