ದಾವಣಗೆರೆ | ಸೆ.13ರಂದು ರೈತ ಹುತಾತ್ಮ ದಿನಾಚರಣೆ

Date:

ರೈತ ಹುತಾತ್ಮರ ಸ್ಮರಣಾರ್ಥ ಸಮಿತಿ ದಾವಣಗೆರೆ ಹಾಗೂ ಜಿಲ್ಲೆಯ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಸೆ.13 ಬೆಳಿಗ್ಗೆ 12 ಗಂಟೆಗೆ ಉಳಪನಕಟ್ಟೆ ಕ್ರಾಸ್ ರೈತ ಹುತಾತ್ಮರ ಸಮಾಧಿ ಬಳಿ ಓಬೇನಹಳ್ಳಿ ಕಲ್ಲಿಂಗಪ್ಪ ಮತ್ತು ಸಿದ್ಧನೂರು ನಾಗರಾಜಚಾರ್ ಅವರ 31ನೇ ಹುತಾತ್ಮರ ದಿನಾಚರಣೆ ಹಾಗೂ ಸ್ಮಾರಕ ಭವನ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಎನ್‌ ಜಿ ಪುಟ್ಟಸ್ವಾಮಿ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “1992 ರ ಸೆ.13ರಂದು ರಸಗೊಬ್ಬರ ಬೆಲೆ ಏರಿಕೆ ವಿರುದ್ಧ ನಡೆಸಿದ್ದ ರೈತರ ಹೋರಾಟದ ವೇಳೆ ನಡೆದ ಗೋಲಿಬಾರ್ ಗುಂಡೇಟಿಗೆ ಬಲಿಯಾಗಿ ಓಬೇನಹಳ್ಳಿ ಕಲ್ಲಿಂಗಪ್ಪ ಮತ್ತು ನಾಗರಾಜ್ ಹುತಾತ್ಮರಾದರು. ಅವರ ಸ್ಮರಣಾರ್ಥ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ” ಎಂದರು.

“ಹಿಂದಿನ ಸರ್ಕಾರ ಒಂದು ಎಕರೆ ಜಾಗವನ್ನು ಮಂಜೂರು ಮಾಡಿದ್ದು, ಜಾಗದಲ್ಲಿ ಸಮುದಾಯ ಭವನ ಹಾಗೂ ಮಳಿಗೆಗಳನ್ನು ನಿರ್ಮಿಸಲಾಗುವುದು. ಹಾಲಿ ಸರ್ಕಾರ ಈ ನಿಟ್ಟಿನಲ್ಲಿ ಸಹಕಾರ ನೀಡುವ ಭರವಸೆ ಇದೆ. ಹುತಾತ್ಮರ ದಿನಾಚರಣೆ ಮತ್ತು ಸ್ಮಾರಕ ಭವನ ಉದ್ಘಾಟನೆ ಕಾರ್ಯಕ್ರಮದ ಸಾನ್ನಿಧ್ಯವನ್ನು ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್‌ ಮಲ್ಲಿಕಾರ್ಜುನ್ ಚಾಲನೆ ಸಮಿತಿ ನೀಡಲಿದ್ದಾರೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕೋಮುವಾದಿಗಳ ಜೊತೆ ರಾಜಿ ಪ್ರಶ್ನೆಯೇ ಇಲ್ಲ, ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ

ಗೌರವಾಧ್ಯಕ್ಷ ಎಚ್ ನಂಜುಂಡಪ್ಪ ಉಪಸ್ಥಿತರಿದ್ದು, ಸಮಿತಿ ಅಧ್ಯಕ್ಷ ಎನ್ ಜಿ. ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಕೆ ಎಸ್‌ ಬಸವಂತಪ್ಪ, ಜಿಲ್ಲಾಧಿಕಾರಿ ಡಾ. ವೆಂಕಟೇಶ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿ ಪಂ ಸಿಇಒ ಸುರೇಶ್ ಹಿಟ್ನಾಳ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸುದ್ದಿಗೋಷ್ಟಿಯಲ್ಲಿ, ಹುಲ್ಲೂರು ಮುನಿಯಪ್ಪ, ಶಾಮನೂರು ಎಚ್‌ ಆರ್ ಲಿಂಗರಾಜ್‌, ಆರ್ ಜಿ ಹಳ್ಳಿ ರಾಜಶೇಖರ್, ಹಳ್ಳಿ ಕಕ್ಕರಗೊಳ್ಳ ಕೆ ಪಿ ಕಲ್ಲಿಂಗಪ್ಪ, ಜಿ ಹಳ್ಳಿ ರಮೇಶ್, ಆರ್ ಜಿ ಹಳ್ಳಿ ಪ್ರವೀಣ್, ಆರ್ ರುದ್ರಮುನಿ, ಕೆ ಎಸ್ ಮೋಹನ್ ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪ್ರಧಾನಿಯಾಗಿ ನಮೋ ಮುಂದುವರಿಕೆ; ಬೆಂಬಲ ತಿರಸ್ಕರಿಸಲು ಟಿಡಿಪಿ, ಜೆಡಿಯುಗೆ ಮನವಿ

ಮುಂದಿನ ಪ್ರಧಾನಿಯಾಗಿ ನರೇಂದ್ರಮೋದಿಯವರನ್ನು ನೇಮಕ ಮಾಡಲು ಟಿಡಿಪಿ ಮತ್ತು ಜೆಡಿಯು ಪಕ್ಷದ...

ದಾವಣಗೆರೆ | ಜೂ.9ರಂದು ಡಾ ಬಿ ಆರ್ ಅಂಬೇಡ್ಕರ್‌ ಮತ್ತು ಪ್ರೊ.ಬಿ.ಕೃಷ್ಣಪ್ಪನವರ ಜನ್ಮ ದಿನಾಚರಣೆ

ಜೂನ್ 9ರಂದು ಹರಿಹರದ ಪ್ರೊ.ಕೃಷ್ಣಪ್ಪ ಭವನ ಮೈತ್ರಿವನದಲ್ಲಿ ಡಾ ಬಿ ಆರ್...