ದಾವಣಗೆರೆ | ಅತಿಥಿ ಉಪನ್ಯಾಸಕರ ಕಾಯಮಾತಿಗೆ ಆಗ್ರಹ; ಅರೆಬೆತ್ತಲೆ ಪ್ರತಿಭಟನೆ

Date:

ಅತಿಥಿ ಉಪನ್ಯಾಸಕರ ಕಾಯಮಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟವು ಮುಂದುವರಿದಿದ್ದು,  ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ.

- Advertisement -

ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಬೆಳಿಗ್ಗೆ 36ನೇ ದಿನದಂದು ಅತಿಥಿ ಉಪನ್ಯಾಸಕರು ಅರೆಬೆತ್ತಲೆಯಾಗಿ ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ನಾವು ಅರೆಬೆತ್ತಲೆ ಪ್ರತಿಭಟನೆ ಮಾಡುತ್ತಿದ್ದೇವೆ. ಇಂದು ಶರ್ಟ್ ತೆಗೆದಿರಬಹುದು. ಆದರೆ ನಮ್ಮ ವಾಸ್ತವಿಕ ಜೀವನ ಅರೆಬೆತ್ತಲೆಯಾಗಿದೆ. ಈ ಅತಿಥಿ ಉಪನ್ಯಾಸಕ ಪದವೇ ಮೂಲಭೂತವಾಗಿ ನಮ್ಮ ಜೀವನಕ್ಕೆ ಶೋಷಣೆಯ ಒಂದು ಪ್ರತಿಕವಾಗಿ ಕಾಡುತ್ತಿದೆ. ಯಾಕೆಂದರೆ ನಮ್ಮಲ್ಲಿ ರ‍್ಯಾಂಕ್ ಬಂದವರಿದ್ದಾರೆ. ಪಿಹೆಚ್‌ಡಿ, ಎನ್‌ಇಟಿ, ಎಸ್‌ಎಲ್‌ಇಟಿ ಸೇರಿದಂತೆ ಗೋಲ್ಡ್ ಮೆಡಲ್ ಪಡೆದವರೂ ಇದ್ದಾರೆ. ಆದರೆ ಸರ್ಕಾರವು ತಾತ್ಕಾಲಿಕ ನೇಮಕಾತಿ ಎಂದು ಎಂಟು ತಿಂಗಳು, 10 ತಿಂಗಳ ಅವಧಿಗೆ ನಿಗದಿ ಮಾಡಿ ಪುಡಿಗಾಸು ನೀಡಿ ನಮ್ಮ ಬದುಕನ್ನೇ ಅರೆಬೆತ್ತಲೆ ಮಾಡಿದೆ” ಎಂದು ಆರೋಪಿಸಿದರು.

“ಕಳೆದ ಎರಡು ವರ್ಷಗಳಿಂದ ನಮಗೆ ವಿವಿಧ ಹಂತಗಳಲ್ಲಿ ಕನಿಷ್ಠ ₹26,000 ಹಾಗೂ ಗರಿಷ್ಠ ₹32,000 ಗೌರವಧನ ನೀಡಿ ದುಡಿಸಿಕೊಳ್ಳುತ್ತಿದೆ. ಖಾಯಂ ಉಪನ್ಯಾಸಕರಿಗೆ ಹಾಗೂ ನಮಗೂ ಒಂದೇ ಅವಧಿ ವ್ಯತ್ಯಾಸದ ಕಾರ್ಯಭಾರ ಹಂಚಿ ಬಿಟ್ಟಿ ಚಾಕರಿ ಮಾಡಿಸಿಕೊಳ್ಳುತ್ತಿರುವ ಸರ್ಕಾರವು ಖಾಯಂಗೊಳಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತಿಲ್ಲ. ಕೂಡಲೇ 11 ಸಾವಿರ ಮಂದಿ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

“ಹಲವು ರಾಜ್ಯಗಳಲ್ಲಿ ಹೊರಗುತ್ತಿಗೆ, ಸ್ಟಾಪ್ ಗ್ಯಾಪ್‌ ಅರೆಕಾಲಿಕ ಅತಿಥಿ ಉಪನ್ಯಾಸಕ, ಅತಿಥಿ ಶಿಕ್ಷಕರು ಹೀಗೆ ಹಲವು ಪದನಾಮಗಳ ಅಡಿಯಲ್ಲಿ ನೇಮಕ ಮಾಡಿಕೊಂಡು ಈಗ ಕಾಯಮಾತಿ ಮಾಡಿರುವ ನಿದರ್ಶನಗಳಿವೆ. ಅಂತೆಯೇ ಕರ್ನಾಟಕ ಸರ್ಕಾರವೂ ಈ ಅತಿಥಿ ಉಪನ್ಯಾಸಕ ಎಂಬ ಪದನಾಮಕ್ಕೆ ಮುಕ್ತಿ ಕೊಟ್ಟು ಖಾಯಂ ಮಾಡಿ ಈ ಅತಿಥಿ ಎಂಬ ಅರೆಬೆತ್ತಲೆ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು” ಎಂದು ಆಗ್ರಹಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಹಿರಿಯ ಸಿವಿಲ್ ನ್ಯಾಯಾಧೀಶ‌ ಮಹಾವೀರ ಎಂ. ಕರೆಣ್ಣವರ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ತಲುಪಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಎಸ್‌ಎಫ್‌ಐ ಆಗ್ರಹ

ಪ್ರತಿಭಟನೆಯಲ್ಲಿ ಕೆ. ಶ್ಯಾಮ್ ಪ್ರಸಾದ್, ಸಿದ್ದೇಶ್, ಕಳಕಪ್ಪ ಚೌರಿ, ಮೋಹನ್, ಜಗದೀಶ್, ಹನುಮಂತಪ್ಪ, ಪ್ರವೀಣ್ ಕುಮಾರ್, ಸಂತೋಷ್ ಕುಮಾರ್, ವೀರೇಶ್, ಹರೀಶ್, ರಂಗನಾಥ್, ಶುಭ, ರೇಖಾ, ಲಕ್ಷ್ಮಿ, ಶ್ವೇತಾ ಜಗಳೂರು, ಸಮ್ರೀನ್ ಬಾನು, ಶ್ವೇತಾ ಹೊಳಲ್ಕೆರೆ, ಅನೀಸ್ ಫಾತೀಮಾ, ಸಮೀನಾ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...