ದಾವಣಗೆರೆ | ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿಯವರಿಗೆ ಹರಿಹರ ದಸಂಸ ಶ್ರದ್ದಾಂಜಲಿ

Date:

ಮಂಗಳವಾರ ರಸ್ತೆ ಅಪಘಾತದಲ್ಲಿ ನಿಧನರಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿಯವರಿಗೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬುಧವಾರ ಹರಿಹರ ನಗರದ ಗಾಂಧಿ ವೃತ್ತದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.

- Advertisement -

ಈ ವೇಳೆ ದಸಂಸ ಹರಿಹರ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, “ಕಡು ಬಡತನದಲ್ಲಿ ಹುಟ್ಟಿ ಐಎಎಸ್ ನಂತಹ ಹುದ್ದೆ ಅಲಂಕರಿಸಿದ ಮಹಾಂತೇಶ್ ಬೀಳಗಿರವರ ಶ್ರಮದ ಬದುಕು ನಮಗೆಲ್ಲಾ ಮಾದರಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಅವರು ಬಸವಣ್ಣನವರ ಕಟ್ಟಾ ಅನುಯಾಯಿ ಯಾಗಿದ್ದು, ಅವರು ಬಡವರ ಏಳಿಗೆಗೆ ಶ್ರಮಿಸಿದರು. ಜನ ಸಾಮಾನ್ಯರ ಕಷ್ಟ, ಕಾರ್ಪಣ್ಯಗಳನ್ನು ಆಲಿಸಿ ಪರಿಹರಿಸುತ್ತಿದ್ದರು. ಅವರು ಜಿಲ್ಲಾಧಿಕಾರಿಯಾಗಿದ್ದ ಕೋವಿಡ್ ಅವಧಿಯಲ್ಲಿ ಜಿಲ್ಲೆಯಲ್ಲಿ ಕ್ವಾರಂಟೈನ್, ರೋಗಿಗಳ ಚಿಕಿತ್ಸೆಗೆ ಹಗಲು, ರಾತ್ರಿ ಶ್ರಮಿಸಿದರು” ಎಂದು ಸ್ಮರಿಸಿದರು.

“ಹರಿಹರ ನಗರದ ಎ.ಕೆ.ಕಾಲೋನಿಯಲ್ಲಿರುವ ಕದಸಂಸ ಸ್ಥಾಪಕರಾದ ಪ್ರೊ.ಬಿ.ಕೃಷ್ಣಪ್ಪರ ಶಿಥಿಲಗೊಂಡಿದ್ದ ಮನೆಗೆ ಭೇಟಿ ನೀಡಿ ಮನೆಯ ಜೀರ್ಣೋದ್ದಾರಕ್ಕೆ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದರು, ಆದರೆ ತಾಂತ್ರಿಕ ಕಾರಣಗಳಿಂದಾಗಿ ಆ ಅನುದಾನ ಬಿಡುಗಡೆಯಾಗಿಲ್ಲ” ಎಂದು ಸ್ಮರಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪೊಕ್ಸೋ ಪ್ರಕರಣ ಕೋರ್ಟ್ ತೀರ್ಪು; ಮುರುಘಾ ಶರಣರಿಗೆ ಬಿಗ್ ರಿಲೀಫ್

ಬೆಸ್ಕಾಂ ಎಇಗಳಾದ ಮಾರ್ಕಂಡೇಯ ಎಂ ಮನೋಜ್, ವಿನಾಯಕ ಬೆಳ್ಳೂಡಿ, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳಾದ ಎಚ್.ಕೆ.ಕೊಟ್ರಪ್ಪ, ಎ.ಕೆ.ಭೂಮೇಶ್, ಕೃಷ್ಣಮೂರ್ತಿ ಯಶಸ್ವಿನಿ, ಎಂ.ಎಸ್.ಆನಂದಪ್ಪ, ಕೇಶವ, ರಮೇಶ್ ಮಾನೆ, ಪ್ರೀತಂ ಬಾಬು, ಬಿ.ಮಗ್ದುಮ್, ಇಲಿಯಾಸ್ ಅಹ್ಮದ್, ಪ್ರಕಾಶ್ ಬೆಳ್ಳೂಡಿ, ಪ್ರವೀಣ್, ಮಂಜುನಾಥ್ ವಡುವಲಕೇರಿ, ನಾಗರಾಜ್ ಬೆಂಡಿಗೇರಿ, ಪ್ರಕಾಶ್ ಜಿ.ಎಂ., ಮಂಜುನಾಥ್ ಕಾಯಿ, ಗಂಗಾಧರ, ಆಕಾಶ್ ಎಂ.ಡಿ., ನಗರಸಭಾ ಸದಸ್ಯ ಆಟೋ ಹನುಮಂತಪ್ಪ ಹಾಗೂ ಇತರರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...