ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

Date:

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಎನ್‌ಎಸ್‌ಯುಐ ಜಿಲ್ಲಾ ಕಾಂಗ್ರೆಸ್, ವಿದ್ಯಾರ್ಥಿ ಸಂಘಟನೆಗಳು ವಿದ್ಯಾರ್ಥಿಗಳೊಡಗೂಡಿ ದಾವಣಗೆರೆ ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು.

- Advertisement -

ಪ್ರತಿಭಟನೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಮಾತನಾಡಿ, “ರಾಷ್ಟ್ರೀಯ ಮಟ್ಟದ ನೀಟ್ (NEET) ಪರೀಕ್ಷೆಯನ್ನು ರದ್ದುಗೊಳಿಸಿ, ರಾಜ್ಯದ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟು ಈ ಹಿಂದೆ ಯಶಸ್ವಿಯಾಗಿ ಜಾರಿಯಲ್ಲಿದ್ದ ಹಳೆಯ ಸಿಇಟಿ (CET) ಪರೀಕ್ಷಾ ಪದ್ಧತಿಯನ್ನು ಮರುಜಾರಿಗೆ ತರಬೇಕು” ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ವಿದ್ಯಾರ್ಥಿ ಮುಖಂಡರು ಮಾತನಾಡಿ, “ನೀಟ್ ಪರೀಕ್ಷೆಯಿಂದ ಗ್ರಾಮೀಣ ಭಾಗದ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದು, ಸಮಾನ ಶಿಕ್ಷಣದ ಅವಕಾಶಕ್ಕೆ ಧಕ್ಕೆಯಾಗುತ್ತಿದೆ” ಎಂದು ಆರೋಪಿಸಿದರು.

“ರಾಜ್ಯದ ಶಿಕ್ಷಣ ವ್ಯವಸ್ಥೆ, ಪಠ್ಯಕ್ರಮ ಹಾಗೂ ವಿದ್ಯಾರ್ಥಿಗಳ ಅಗತ್ಯಗಳಿಗೆ ಅನುಗುಣವಾಗಿ ಸಿಇಟಿ ಪರೀಕ್ಷಾ ಪದ್ಧತಿಯೇ ಹೆಚ್ಚು ಸೂಕ್ತವಾಗಿದ್ದು, ಅದನ್ನು ಮರುಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

“ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ರಾಜ್ಯದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಶೀಘ್ರವೇ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ಹಳೆಯ ಸಿಇಟಿ ಪರೀಕ್ಷಾ ಪದ್ಧತಿಯನ್ನು ಮರುಜಾರಿಗೆ ತರಬೇಕು” ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಮುಖಂಡರು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...