ದಾವಣಗೆರೆ | ರವೀಂದ್ರನಾಥ ಬಡಾವಣೆ ನಿರಾಶ್ರಿತರನ್ನು ಗಂಜಿಕೇಂದ್ರದಿಂದ ಹೊರದೂಡಿದ ಕ್ರಮಕ್ಕೆ ಕರವೇ ಆಕ್ರೋಶ

Date:

“ಇತ್ತೀಚಿಗೆ ಎರಡು ತಿಂಗಳ ಹಿಂದೆ ದಾವಣಗೆರೆಯ ಎಸ್ ಎ ರವೀಂದ್ರನಾಥ್ ಬಡಾವಣೆಯಲ್ಲಿ ಪಾರ್ಕ್ ಜಾಗದಲ್ಲಿ ಕಟ್ಟಿದ್ದಾರೆ ಎನ್ನಲಾದ 36 ಮನೆಗಳನ್ನು ತೆರವುಗೊಳಿಸಿ, ವಸತಿರಹಿತರನ್ನು ತುರ್ಚಘಟ್ಟ ಬಳಿ ಗಂಜಿ ಕೇಂದ್ರದಲ್ಲಿ ಬಿಡಲಾಗಿತ್ತು. ಸೋಮವಾರ ಅವರನ್ನು ಗಂಜಿ ಕೇಂದ್ರದಿಂದ ಹೊರಗಡೆ ಹಾಕಿದ್ದಾರೆ. ಗಂಜಿ ಕೇಂದ್ರದಿಂದ ಹೊರದೂಡಿದ ದಾವಣಗೆರೆ ಜಿಲ್ಲಾಡಳಿತದ ಕ್ರಮ ಸರಿಯಲ್ಲ. ತಕ್ಷಣ ಅವರಿಗೆ ಜಾಗದ ವ್ಯವಸ್ಥೆ ಮಾಡಿ ಮನೆಗಳನ್ನು ಕಟ್ಟಿ ಕೊಡಬೇಕು” ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ಜಿಲ್ಲಾಧ್ಯಕ್ಷ ರಾಮೇಗೌಡ ಆಗ್ರಹಿಸಿದರು.‌

- Advertisement -

ಗಂಜಿ ಕೇಂದ್ರದ ಹೊರಗೆ ಮನೆ ಕಳೆದುಕೊಂಡ ನಿರಾಶ್ರಿತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ ಅವರು “ಅಕ್ರಮವಾಗಿ ಬಾಂಗ್ಲಾದೇಶದಿಂದ ಬಂದವರಿಗೆ ಕರ್ನಾಟಕದಲ್ಲಿ ಜಾಗ ನೀಡುವ ಸರ್ಕಾರಕ್ಕೆ ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಮನೆ ಕಳೆದುಕೊಂಡ ಕಡುಬಡವರಿಗೆ ಮನೆ ಕೊಡುವುದಕ್ಕೆ ಜಾಗವಿಲ್ಲ. ಇದು ಯಾವ ಸೀಮೆ ಸರ್ಕಾರ. ಅಕ್ರಮ ವಲಸೆಗಾರಿಗೆ ಯಾವುದೇ ಕಾರಣಕ್ಕೂ ಜಾಗ ನೀಡಬಾರದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ನಮ್ಮ ರಾಜ್ಯದಲ್ಲಿ ಎಷ್ಟೋ ಕುಟುಂಬಗಳನ್ನು ಬೀದಿ ಪಾಲು ಮಾಡಿರುವ ಸರ್ಕಾರದ ನೀತಿ, ಕ್ರಮ ಸರಿ ಇಲ್ಲ. ತಕ್ಷಣ ರಾಜ್ಯದಲ್ಲಿ ಎಲ್ಲಾ ಜಿಲ್ಲೆಯ ತಾಲೂಕು ಹೋಬಳಿ ಮಟ್ಟದಲ್ಲಿ ಸರ್ಕಾರ ಜಾಗ ಹುಡುಕಿ ವಸತಿ ರಹಿತರಿಗೆ ಮನೆ ಕಲ್ಪಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್ ದಲಿತ ಮುಖಂಡರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ: ಕ್ರಮಕ್ಕೆ ಆಗ್ರಹ

“ಇತ್ತೀಚಿಗೆ ರವೀಂದ್ರನಾಥ ಬಡಾವಣೆ ನಿವಾಸಿಗಳ 36 ಮನೆಗಳನ್ನು ತೆರೆವುಗೊಳಿಸಿದ್ದರು. ಪಾಲಿಕೆ ಆಯುಕ್ತರು ತುರ್ಚಘಟ್ಟ ಬಳಿ ಗಂಜಿ ಕೇಂದ್ರಕ್ಕೆ 36 ಮನೆ ಕುಟುಂಬಗಳನ್ನು ಕಳಿಸಿಕೊಡಲಾಗಿತ್ತು. ಆದರೆ ಸೋಮವಾರದಿಂದ ಅವರನ್ನು ಗಂಜಿ ಕೇಂದ್ರದಿಂದ ಹೊರಗೆ ದೂಡಿ ಬೀಗ ಹಾಕಿದ್ದಾರೆ. ಈ ಕ್ರಮವನ್ನು ಕರವೇ ಖಂಡಸುತ್ತದೆ. ಜಿಲ್ಲಾಡಳಿತ ಮತ್ತು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರು ತಕ್ಷಣ ಅವರುಗಳಿಗೆ ಮನೆಗಳನ್ನು ಒದಗಿಸಿ ಕೊಡಬೇಕು” ಕರವೇ ಜಿಲ್ಲಾಧ್ಯಕ್ಷ ಎಂಎಸ್ ರಾಮೇಗೌಡ ಒತ್ತಾಯಿಸಿದ್ದಾರೆ.

ಈ ವೇಳೆ ರವೀಂದ್ರನಾಥ ಬಡಾವಣೆಯ ನಿರಾಶ್ರಿತರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....