ದಾವಣಗೆರೆ | ಬಿಸಿಯೂಟ ಸೇವಿಸಿದ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Date:

ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಬಿಸಿಯೂಟ ಸೇವಿಸಿದ ಕೆಲ ಸಮಯದ ಬಳಿಕ ಮಕ್ಕಳಲ್ಲಿ ವಾಂತಿ, ಹೊಟ್ಟೆ ನೋವು ಹಾಗೂ ಅಸ್ವಸ್ಥತೆಯ ಲಕ್ಷಣಗಳು ಕಾಣಿಸಿಕೊಂಡಿವೆ ಎನ್ನಲಾಗಿದೆ. ತಕ್ಷಣವೇ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

- Advertisement -

ಅಸ್ವಸ್ಥಗೊಂಡ ಮಕ್ಕಳನ್ನು ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಮಕ್ಕಳ ಆರೋಗ್ಯ ಸ್ಥಿತಿ ವೈದ್ಯರ ನಿಗಾದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಶಾಲೆಯಲ್ಲಿ ಮಕ್ಕಳಿಗೆ ಉಪ್ಪಿಟ್ಟು, ಬಾಳೆಹಣ್ಣು ಹಾಗೂ ಮೊಟ್ಟೆ ನೀಡಲಾಗಿತ್ತು. ಆಹಾರ ಸೇವಿಸಿದ ಬಳಿಕ ಇಬ್ಬರು ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡಿದೆ. ಇದನ್ನು ಕಂಡು ಭಯಭೀತರಾದ ಇತರ ಕೆಲವು ಮಕ್ಕಳು ಕೂಡ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ ಎಂದು ಶಾಲೆಯ ಶಿಕ್ಷಕರು ತಿಳಿಸಿದ್ದಾರೆ.

ಶಾಲೆಯಲ್ಲಿ ಒಟ್ಟು 43 ಮಕ್ಕಳು ಇದೇ ಆಹಾರ ಸೇವಿಸಿದ್ದು, ಬಹುತೇಕ ಮಕ್ಕಳು ಯಾವುದೇ ಸಮಸ್ಯೆಯಿಲ್ಲದೆ ಆರೋಗ್ಯವಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇಬ್ಬರು ಮಕ್ಕಳಿಗೆ ಈಗಾಗಲೇ ಜ್ವರ ಮತ್ತು ಕೆಮ್ಮು ಇದ್ದುದಾಗಿ ತಿಳಿಸಿದ್ದಾರೆ.

ಘಟನೆಗೆ ಬಿಸಿಯೂಟದಲ್ಲಿನ ಆಹಾರ ಗುಣಮಟ್ಟ ಅಥವಾ ಇತರೆ ಕಾರಣವೇ ಕಾರಣ ಎಂಬುದು ಇನ್ನೂ ಖಚಿತವಾಗಿಲ್ಲ. ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸುವ ಸಾಧ್ಯತೆ ಇದ್ದು, ಸಂಬಂಧಪಟ್ಟ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ಮಕ್ಕಳು ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಹಾಗೂ ಬಿಸಿಯೂಟ ಪೂರೈಕೆ ವ್ಯವಸ್ಥೆಯ ಕುರಿತು ಪೋಷಕರಲ್ಲಿ ಆತಂಕ ಉಂಟಾಗಿದೆ. ಘಟನೆಯ ನಿಖರ ಕಾರಣ ತಿಳಿಯಲು ತನಿಖೆ ಅಗತ್ಯವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಆಕಸ್ಮಿಕ ಅಗ್ನಿ ಅವಘಡ: ಉತ್ಪನ್ನಗಳು ಭಸ್ಮ 

ಕಡೂರು ತಾಲೂಕಿನ ಬೀರೂರು ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಮಂಜುನಾಥ ಕಾಯರ್...

ಉಡುಪಿ | ಕುಂದಾಪುರ ಕೋಡಿ ಹಿನ್ನೀರು ಪ್ರದೇಶದಲ್ಲಿ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಕಾಂಡ್ಲಾ ವನ ವೀಕ್ಷಣೆ

ಕುಂದಾಪುರ ನಗರದ ಕೋಡಿ-ಕುಂದಾಪುರ ಸೇತುವೆ ಬಳಿಯ ಕೋಡಿ ಹಿನ್ನೀರು ಪ್ರದೇಶಕ್ಕೆ ರವಿವಾರ...

ಉಡುಪಿ | ಬೆಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬೈಂದೂರಿನ ಯುವ ಇಂಜಿನಿಯರ್ ಅಪಘಾತದಲ್ಲಿ ಸಾವು

ಉದ್ಯೋಗದ ನಿಮಿತ್ತ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬೈಂದೂರು ತಾಲೂಕಿನ ನಾಡ-ಪಡುಕೋಣೆ ಸಮೀಪದ...

ಹಾವೇರಿ ವಿವಿ ಹಾಸ್ಟೆಲ್‌, ಅಪರಿಚಿತನ ಅನುಚಿತ ವರ್ತನೆ: ವಿದ್ಯಾರ್ಥಿನಿಯರು ಪ್ರತಿಭಟನೆ

ಹಾವೇರಿ ವಿವಿ ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಪರಿಚಿತನ ಅನುಚಿತ ವರ್ತನೆಯಿಂದ ವಿದ್ಯಾರ್ಥಿನಿಯರು...