ದಾವಣಗೆರೆ | ಕಳಪೆ ಆಹಾರ ಸೇವಿಸಿ 23 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ

Date:

Advertisements

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಾಕನೂರಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 23 ಮಕ್ಕಳು ಭಾನುವಾರ ರಾತ್ರಿಯ ಊಟ, ಸೋಮವಾರ ಬೆಳಗ್ಗೆ ತಿಂಡಿ ಸೇವಿಸಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದ್ದು, ಮಕ್ಕಳನ್ನು ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

“ವಸತಿ ಶಾಲೆಯ ಸಿಬ್ಬಂದಿ ಬೇಜವಾಬ್ದಾರಿ, ಉದಾಸೀನದ ಫಲವಾಗಿ ಮಕ್ಕಳು ಆಸ್ಪತ್ರೆ ಸೇರಿದ್ದಾರೆ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಬಸವರಾಜು ವಿ ಶಿವಗಂಗ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳಪೆ ತರಕಾರಿ

ಅಸ್ವಸ್ಥಗೊಂಡ ಮಕ್ಕಳ ಮಾಹಿತಿ ಪಡೆದ ಶಾಸಕರು, ತಕ್ಷಣವೇ ಎಲ್ಲ ಮಕ್ಕಳನ್ನು ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಭೇಟಿ ನೀಡಿ ಕಳಪೆ ಆಹಾರ ನೀಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ. ಸರ್ಕಾರಿ ವೇತನವನ್ನು ಪಡೆದು ಮಕ್ಕಳ ಅನಾರೋಗ್ಯಕ್ಕೆ ಕಾರಣರಾಗಿರುವ ವಸತಿ ನಿಲಯದ ವಾರ್ಡನ್ ಮತ್ತು ಸಿಬ್ಬಂದಿಯನ್ನು ಕೂಡಲೇ ಅಮಾನತು ಮಾಡುವಂತೆ ಶಾಸಕರು ಇಲಾಖೆಯ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.

Advertisements

ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಆಹಾರ ತಯಾರಿಕೆಗೆ ಬಳಸಿರುವುದು, ಸ್ವಚ್ಛತೆ ಇಲ್ಲದಿರುವುದು, ಮಕ್ಕಳ ದೈನಂದಿನ ಜೀವನಕ್ಕೆ ಅವಶ್ಯಕ ಮೂಲ ಸೌಲಭ್ಯಗಳನ್ನು ನೀಡದೇ ಇರುವುದು, ಕೊಳೆತ ತರಕಾರಿಗಳನ್ನು ಉಪಯೋಗಿಸಿರುವುದು, ವಿದ್ಯಾರ್ಥಿಗಳಿಗೆ ಹಾಸಿಗೆ, ಎಣ್ಣೆ, ಬಿಸಿ ನೀರು ನೀಡದೇ ಇರುವುದರ ಬಗ್ಗೆ ಆರೋಪ ಕೇಳಿಬಂದಿದೆ.

ಮಕ್ಕಳನ್ನು ಪರಿಶೀಲಿಸಿದ ಶಾಸಕರು

ಈ ಸಂಬಂಧ ಶಾಸಕರು ತಾಲೂಕು ಸಮಾಜ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್ ಅವರ ನಿರ್ಲಕ್ಷ್ಯ ಧೋರಣೆಯೇ ಇಲಾಖೆಯ ಅವ್ಯವಸ್ಥೆಗೆ ನೇರ ಕಾರಣವಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅವರ ಕಾರ್ಯವೈಖರಿ ಬಗ್ಗೆ ಇಲಾಖೆಯ ಮುಖ್ಯಸ್ಥರೊಂದಿಗೆ ಈಗಾಗಲೇ ಚರ್ಚಿಸಿರುವ ಶಾಸಕರು, ಮಕ್ಕಳ ಈ ಪರಿಸ್ಥಿತಿಯನ್ನು ಕಂಡು ಸಾರ್ವಜನಿಕರೊಂದಿಗೆ, ಪೋಷಕರೊಂದಿಗೆ ಸ್ವತಃ ಕಣ್ಣೀರು ತುಂಬಿಕೊಂಡರು. ಮಾನವೀಯತೆಯೊಂದಿಗೆ ಪ್ರಾಮಾಣಿಕ ಸೇವೆಯು ಇಲ್ಲದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಭತ್ತದ ಇಳುವರಿ ಕುಸಿತ; ಎಪಿಎಂಸಿಯಲ್ಲಿ ನೆರೆ ರಾಜ್ಯಗಳ ರೈತರ ಪಾರುಪತ್ಯ

ಇಲಾಖೆಯ ಮುಖ್ಯಸ್ಥರನ್ನು ತೀವ್ರ ತರಾಟೆ ತೆಗೆದುಕೊಂಡ ಶಾಸಕರು, ಉತ್ತಮ ಶಿಕ್ಷಣ ಕೊಡುವುದರ ಜೊತೆ ಮಕ್ಕಳ ಹಕ್ಕುಗಳಿಗೆ ಚ್ಯುತಿ ಬಂದರೆ ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಕ್ಕಳ ಆರೋಗ್ಯದ ಬಗ್ಗೆ ತಾಲೂಕು ಆರೋಗ್ಯಾಧಿಕಾರಿಯವರಿಗೆ ಶಾಸಕರು ಸ್ವತಃ ಫೋನ್ ಮಾಡಿದಾಗ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಹಿನ್ನೆಲೆಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಕರೆ ಮಾಡಿ ಅಸ್ವಸ್ಥಗೊಂಡ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X