ದಾವಣಗೆರೆ | ಯುವಜನರ ಧನಾತ್ಮಕ ಚಿಂತನೆ ದೇಶದ ಬೆಳವಣಿಗೆಗೆ ಅವಶ್ಯಕ: ಎಸ್‌ಪಿ ಉಮಾ ಪ್ರಶಾಂತ್

Date:

ಯುವಜನರೇ ದೇಶದ ಆಸ್ತಿ. ಅವರ ಉತ್ತಮ ಚಿಂತನೆ ಮತ್ತು ಧನಾತ್ಮಕ ವರ್ತನೆಯ ಮೂಲಕ ದೇಶದ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅಭಿಪ್ರಾಯಪಟ್ಟರು.

- Advertisement -

ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ಮೊದಲ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಇಂಡಕ್ಷನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಯುವಜನರು ಯಾವುದೇ ಅನಗತ್ಯ ಚಟುವಟಿಕೆಗಳಲ್ಲಿ ಭಾಗವಹಿಸದೆ, ಮದ್ಯ ಮತ್ತು ಮಾದಕ ವ್ಯಸನಿಗಳಾಗದೆ ಉತ್ತಮ ಜೀವನ ರೂಢಿಸಿಕೊಂಡು, ನಾಡಿನ ಉತ್ತಮ ಪ್ರಜೆಗಳಾಗಿ, ಮನೆಯ ಪ್ರೀತಿಯ ಮಕ್ಕಳಾಗಿ ಬೆಳೆಯಬೇಕು” ಎಂದು ಕರೆ ಕೊಟ್ಟರು.

“ಪ್ರತಿ ವರ್ಷದಂತೆ ಈ ವರ್ಷವೂ ಮೊದಲ ವರ್ಷದ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾಗುವ ಮುನ್ನ 10 ದಿನಗಳ ಇಂಡಕ್ಷನ್ ಪ್ರೋಗ್ರಾಮ್ ಮಾಡುವುದರ ಮೂಲಕ ಹಲವು ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರುಗಳನ್ನು ಆಹ್ವಾನಿಸಿ ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ ಮತ್ತು ಆತ್ಮವಿಶ್ವಾಸ ಬೆಳೆಸುವುದಾಗಿದೆ” ಎಂದರು.

ಶ್ರೀಶೈಲ ಎಜುಕೇಶನಲ್ ಟ್ರಸ್ಟ್‌ನ ಖಜಾಂಚಿ ಅನಿತ್ ಕುಮಾರ್ ಜಿ ಎಸ್ ಮಾತನಾಡಿ, ಎಲ್ಲ ವಿದ್ಯಾರ್ಥಿಗಳು ಮತ್ತು ಅವರ ಪೋಷಕ ವೃಂದದವರಿಗೆ ಧನ್ಯವಾದ ತಿಳಿಸಿದ್ದು, ಜಿಎಂಐಟಿ ಆಯ್ಕೆ ಮಾಡುವುದರ ಮೂಲಕ ತಮ್ಮ ವೃತ್ತಿ ಬೆಳವಣಿಗೆಯನ್ನು ಪ್ರಾರಂಭಿಸುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿದರು.

ಜಿಎಂ ವಿಶ್ವವಿದ್ಯಾಲಯದ ಉಪಕುಲಪತಿ ಡಾ ಎಚ್ ಡಿ ಮಹೇಶಪ್ಪ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಲವು ವಿಭಾಗದ ಮುಖ್ಯಸ್ಥರು, ಅಧ್ಯಾಪಕ ವರ್ಗದವರು, ವಿದ್ಯಾರ್ಥಿಗಳು ಮತ್ತು ಅವರ ಪೋಷಕ ವರ್ಗದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...