ದಾವಣಗೆರೆ | ನಾಯಕ ವಿದ್ಯಾರ್ಥಿನಿಲಯದಲ್ಲಿ ರಾಜವೀರ ಮದಕರಿ ನಾಯಕರ ಜಯಂತಿ ಆಚರಣೆ

Date:

ದಾವಣಗೆರೆಯ ಕರ್ನಾಟಕ ವೀರ ಮದಕರಿ ಸೇನೆ ವತಿಯಿಂದ ದಾವಣಗೆರೆ ನಗರದ ನಾಯಕ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಶ್ರೀ ರಾಜವೀರ ಮದಕರಿ ನಾಯಕರ 283ನೇ ವರ್ಷದ ಜಯಂತಿಯನ್ನು ಆಚರಿಸಲಾಯಿತು.

- Advertisement -

ಕರ್ನಾಟಕ ವೀರ ಮದಕರಿ ಸೇನೆಯ ರಾಜ್ಯಾಧ್ಯಕ್ಷರಾದ ಅಣಜಿ ಅಂಜಿನಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, “ಶ್ರೀ ರಾಜವೀರ ಮದಕರಿನಾಯಕರ ಜಯಂತಿಯನ್ನು ಪ್ರತಿವರ್ಷವು ಆಚರಿಸಬೇಕು ಹಾಗೂ ರಾಜ್ಯ ಸರ್ಕಾರವು ಕೂಡ ನಾಡ ದೊರೆ ಶ್ರೀ ರಾಜವೀರ ಮದಕರಿನಾಯಕರ ಜಯಂತಿಯನ್ನು ಸಕಲ ಸರ್ಕಾರಿ ಗೌರವಾದರದೊಂದಿಗೆ ಆಚರಿಸಲು ಕ್ರಮ ಕೈಗೊಳ್ಳಬೇಕು” ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹುಲ್ಲುಮನೆ ಗಣೇಶ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ರಾಜವೀರ ಮದಕರಿನಾಯಕರು ಇತಿಹಾಸದಲ್ಲಿ ಶೌರ್ಯ ಪರಾಕ್ರಮಗಳಿಗೆ ಹೆಸರಾದವರು. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಕೆರೆಯ ನಿರ್ಮಾತೃ ಶ್ರೀ ರಾಜವೀರ ಭರಮಣ್ಣ ನಾಯಕರ ಬೃಹತ್ ಪ್ರತಿಮೆಯನ್ನು ಭರಮಸಾಗರದ ಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ನಿರ್ಮಿಸಲು ಸರ್ಕಾರ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆ ಪ್ರಯತ್ನ ಖಂಡಿಸಿ ವಕೀಲನ ಗಡೀಪಾರಿಗೆ ದಸಂಸ ಆಗ್ರಹ

ಕಾರ್ಯಕ್ರಮದಲ್ಲಿ ತಾಲೂಕು ನಾಯಕ ಸಂಘದ ಗೌರವ ಅಧ್ಯಕ್ಷರಾದ ಅಣ್ಣಾಪುರದ ಹೇಮಣ್ಣ, ನಾಯಕ ಹಾಸ್ಟೆಲ್ ನಿರ್ದೇಶಕ ಹಾಗೂ ವಕೀಲರಾದ ಆಂಜನೇಯ ಗುರೂಜಿ, ತಾಲೂಕು ನಾಯಕ ಸಂಘದ ಉಪಾಧ್ಯಕ್ಷರಾದ ಕರೂರು ಗಣೇಶ್‌, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ತುಂಬಿಗೆರೆ ಗಂಗಾಧರಪ್ಪ ಸೇರಿದಂತೆ ಇತರ ಮುಖಂಡರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...