ದಾವಣಗೆರೆ | ಜಿಲ್ಲಾಸ್ಪತ್ರೆಯಲ್ಲಿ ಶಾರ್ಟ್‌ ಸರ್ಕಿಟ್‌: ಅಧಿಕಾರಿಗಳ ನಿರ್ಲಕ್ಷ್ಯ ಬಿಚ್ಚಿಟ್ಟ ತನಿಖಾ ವರದಿ

Date:

ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಅವಘಡಕ್ಕೆ ದುರಸ್ತಿಗೆ ಬಂದಿದ್ದ ಯಂತ್ರಗಳೇ ಕಾರಣ ಎಂಬುದನ್ನು ತನಿಖಾ ಸಮಿತಿ ಬಹಿರಂಗಪಡಿಸಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹತ್ತಿಕೊಂಡ ಪರಿಣಾಮ ಅಂದಾಜು 75 ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳು ಬೆಂಕಿಗಾಹುತಿಯಾಗಿದ್ದವು.

- Advertisement -

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಎಂ. ಗಂಗಾಧರಸ್ವಾಮಿ ಅವರ ಸೂಚನೆಯ ಮೇರೆಗೆ ಅಗ್ನಿ ಅವಘಡದ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ವರದಿ ಸಲ್ಲಿಸಲು 8 ಜನರ ತನಿಖಾ ಸಮಿತಿಯನ್ನು ರಚಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸಂತೋಷ್ ಕುಮಾರ್ ಅವರ ಮುಖ್ಯಸ್ಥತೆಯಲ್ಲಿ ಈ ಸಮಿತಿಯಲ್ಲಿ ನಗರ ಉಪವಿಭಾಗದ ಡಿಎಸ್‌ಪಿ ಶರಣ ಬಸವೇಶ್ವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮೊಹಮ್ಮದ್ ಸುಹೇಲ್, ಬೆಸ್ಕಾಂ ಕಾರ್ಯಪಾಲಕ ಅಭಿಯಂತರ ಎಸ್.ಕೆ. ಪಾಟೀಲ್, ಜೆಜೆಎಂ ವೈದ್ಯಕೀಯ ಕಾಲೇಜಿನ ಅರವಳಿಕೆ ವಿಭಾಗದ ಮುಖ್ಯಸ್ಥರು, ಸಿ.ಜಿ. ಆಸ್ಪತ್ರೆಯ ಅರವಳಿಕೆ ವಿಭಾಗದ ಮುಖ್ಯಸ್ಥರು ಹಾಗೂ ಬಳ್ಳಾರಿ ವಿಮ್ಸ್ ಬಯೋಮೆಡಿಕಲ್ ಇಂಜಿನಿಯರ್ ಎನ್. ಶಾಂತಮೂರ್ತಿ ಇದ್ದರು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ತನಿಖಾ ತಂಡ ಪರಿಶೀಲನೆ ನಡೆಸಿದ್ದು, ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿದ್ದ ಯಂತ್ರೋಪಕರಣಗಳು ಸುಸ್ಥಿತಿಯಲ್ಲಿರಲಿಲ್ಲ ಎಂಬ ಮಾಹಿತಿ ವೈದ್ಯಾಧಿಕಾರಿಗಳ ತಿಳುವಳಿಕೆಗೆ ಈ ಮೊದಲೇ ಬಂದಿತ್ತು. ಹಾಗಿದ್ದೂ ನಿರ್ಲಕ್ಷ್ಯ ತಾಳಿದ್ದರು ಎಂಬ ಸತ್ಯ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ದೋಷಯುಕ್ತ ಯಂತ್ರಗಳಲ್ಲಿನ ಬ್ಯಾಟರಿಗಳು ಹಾಳಾಗಿದ್ದರಿಂದ ಬದಲಿಸುವಂತೆ ಸೂಚನೆ ನೀಡಲಾಗಿತ್ತು. ನಿರ್ವಹಣೆಯ ಜವಾಬ್ದಾರಿ ತೆಗೆದುಕೊಂಡಿದ್ದ ಏಜೆನ್ಸಿ ಶಸ್ತ್ರಚಿಕಿತ್ಸಾ ಕೊಠಡಿಯ ಯಂತ್ರಗಳನ್ನು ಬಳಸದಂತೆ ಸಲಹೆ ನೀಡಿತ್ತು ಎಂಬುದನ್ನು ಸಮಿತಿಯ ವರದಿ ವಿಷದಪಡಿಸಿದ್ದು, ತನಿಖಾ ವರದಿ ಶೀಘ್ರವೇ ಜಿಲ್ಲಾಧಿಕಾರಿಗೆ ಸಲ್ಲಿಕೆಯಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷಿಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

ಈ ದಿನ ಸಂಪಾದಕೀಯ | ಡಿಕೆಶಿ ಪ್ರತಿರೋಧಕ್ಕೆ ಮಣಿದ ಚುನಾವಣಾ ಆಯೋಗ; ಈವರೆಗಿನ ಅಕ್ರಮಗಳಿಗೆ ಹೊಣೆ ಯಾರು?

ಕರ್ನಾಟಕದಲ್ಲಿ ಎಸ್‌ಐಆರ್‌ ಆರಂಭವಾಗುವ ಮೊದಲೇ ನಾಗರಿಕ ಸಂಘಟನೆಗಳು ಕಾಂಗ್ರೆಸ್‌ ಗೆ ಎಸ್‌ಐಆರ್‌...