ದಾವಣಗೆರೆ | ರೈತರ ನೆರವಿಗೆ ಭತ್ತ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ: ರೈತಸಂಘ ಪ್ರತಿಭಟನಾ ರ್ಯಾಲಿ

Date:

ಎಪಿಎಂಸಿ ಮಾರುಕಟ್ಟೆ ಮತ್ತು ಮಾರುಕಟ್ಟೆ ಹೊರಗೆ ರೈತರಿಂದ ನೇರವಾಗಿ ಭತ್ತ ಮತ್ತು ಮೆಕ್ಕೆಜೋಳವನ್ನು ಖಾಸಗಿ ಖರೀದಿದಾರರು ಖರೀದಿ ಮಾಡುತ್ತಿದ್ದು ರೈತರಿಗೆ ಸೂಕ್ತವಾದ ಬೆಲೆ ಸಿಗದ ಕಾರಣ ಸರ್ಕಾರದ ವತಿಯಿಂದ ಬೆಂಬಲ ಬೆಲೆಯಲ್ಲಿ ಭತ್ತ ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರವನ್ನು ತೆರೆಯಬೇಕು ಎಂದು ಒತ್ತಾಯಿಸಿ ದಾವಣಗೆರೆ ನಗರದ ಜಯದೇವ ವೃತ್ತದಿಂದ ಜಿಲ್ಲಾಡಳಿತದ ಕಛೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ದಾವಣಗೆರೆ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಿತು.

- Advertisement -
1002988941
ಜಯದೇವ ವೃತ್ತದಲ್ಲಿ ಪ್ರತಿಭಟನೆ

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ್ “ಈಗಾಗಲೇ ಜಿಲ್ಲೆಯಾದ್ಯಂತ ರೈತರು ಬೆಳೆದಿರುವ ಭತ್ತ ಮತ್ತು ಮೆಕ್ಕೆಜೋಳ ಕಟಾವಿಗೆ ಬಂದಿರುತ್ತದೆ. ಅಲ್ಲಲ್ಲಿ ರೈತರು ಕಟಾವನ್ನು ಕೂಡ ಮಾಡಿರುತ್ತಾರೆ. ಈಗಾಗಲೇ ರೈತರಿಗೆ ಸೂಕ್ತವಾದ ಬೆಲೆ ಇರುವುದಿಲ್ಲ. ಮೆಕ್ಕೆಜೋಳಕ್ಕೆ 1500 ರಿಂದ 1800 ರೂ.ಗೆ ಭತ್ತವನ್ನು 1700 ರಿಂದ 1900 ಕ್ಕೆ ಖರೀದಿ ಮಾಡುತ್ತಿದ್ದಾರೆ. ಇದು ರೈತರಿಗೆ ಸೂಕ್ತ ಬೆಲೆ ಅಲ್ಲದೇ, ಆರ್ಥಿಕ ನಷ್ಟದಿಂದ ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ರೈತರ ಬೇಡಿಕೆಯಂತೆ ಮೆಕ್ಕೆಜೋಳಕ್ಕೆ 2500ರಿಂದ 3000 ದವರೆಗೆ ಮತ್ತು ಭತ್ತಕ್ಕೆ 3000 ದಿಂದ 3500 ವರೆಗೆ ಬೆಂಬಲ ಬೆಲೆ ನೀಡಿ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಖರೀದಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
1002988942

“ಈ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿ ಮಾಡಿದರೆ ರೈತರು ಆರ್ಥಿಕವಾಗಿ ಸಂಕಷ್ಟ ಎದುರಿಸಬೇಕಾಗುತ್ತದೆ. ಜಿಲ್ಲಾಡಳಿತವು 2024ರಲ್ಲಿ ಸುಳ್ಳು ಭರವಸೆ ನೀಡಿ ಖರೀದಿ ಕೇಂದ್ರ ಆರಂಭ ಮಾಡುತ್ತೇವೆ ಎಂದು ಹೇಳಿ ರೈತರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿತ್ತು. ರೈತರು ಸಾಲ ಮಾಡಿ ಬೆಳೆಗಳನ್ನು ಬೆಳೆದಿದ್ದು ಮರುಪಾವತಿ ಮಾಡದೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಈ ಕೂಡಲೇ ಜಿಲ್ಲಾಡಳಿತ ಸ್ಪಂದಿಸಿ ಬೆಂಬಲ ಬೆಲೆ ನೀಡಿ ಖರೀದಿ ಕೇಂದ್ರವನ್ನು ಪ್ರಾರಂಭಿಸಿ ಅನುಕೂಲ ಕಲ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕೃಷಿಗೆ ಸಂಬಂಧಪಟ್ಟ ಅಧಿಕಾರಿ ಮತ್ತು ಕಚೇರಿಗಳ ಮುಂದೆ ಉಪವಾಸ ಸತ್ಯಾಗ್ರಹ ಆರಂಭಿಸಲಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದೇಶಾದ್ಯಂತ ಮದ್ಯ ನಿಷೇಧಕ್ಕೆ, ಮಹಿಳಾ ಗ್ರಾಮ ಸಭೆಗೆ ಪರಮಾಧಿಕಾರಕ್ಕೆ ಒತ್ತಾಯ

ಪ್ರತಿಭಟನಾ ರ್ಯಾಲಿಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷರಾದ ಕೆಂಚಮ್ಮನಹಳ್ಳಿ ಹನುಮಂತಪ್ಪ, ಭರಮಸಮುದ್ರ ಕುಮಾರ್, ಸುನಿಲ್ ವಟಗನಹಳ್ಳಿ, ಜಿಲ್ಲಾ ಉಪಾಧ್ಯಕ್ಷ ಭಗತ್ ಸಿಂಹ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೊಣ್ಣೆಹಳ್ಳಿ ಲೋಕಣ್ಣ, ಸಿದ್ದಪ್ಪನಾಯಕ, ಮುಖಂಡರಾದ ಮಲ್ಲಿಕಪ್ಪ ಚಿಕ್ಕತೊಗಲೇರಿ, ಉಚ್ಚಂಗಪ್ಪ, ಬಸಣ್ಣ, ನೀರ್ತಡಿ ಭೀಮಣ್ಣ, ಅತ್ತಿಗೆರೆ ಮೂರ್ತಪ್ಪ, ಕೃಷ್ಣಪ್ಪ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...