ದಾವಣಗೆರೆ | ಸರ್ಕಾರಿ ಶಾಲೆಗಳ ಮುಚ್ಚುವಿಕೆ ವಿರೋಧಿಸಿ ವಿದ್ಯಾರ್ಥಿ ಯುವಜನ ಫೆಡರೇಷನ್ ಪ್ರತಿಭಟನೆ

Date:

ರಾಜ್ಯ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಯ ವಿರುದ್ಧ ಪ್ರತಿಭಟನೆ ನಡೆಸಿ 50 ಕ್ಕಿಂತ ಕಡಿಮೆ ದಾಖಲಾತಿ ಇರುವ ಶಾಲೆಗಳನ್ನು ವಿಲೀನಗೊಳಿಸುವ ಮೂಲಕ ಶಾಶ್ವತವಾಗಿ ಮುಚ್ಚಲು ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ದಾವಣಗೆರೆ- ಅಖಿಲ ಭಾರತ ವಿದ್ಯಾರ್ಥಿ ಯುವಜನ (AISF) ಮತ್ತು ಅಖಿಲ ಭಾರತ ಯುವಜನ ಫೆಡರೇಷನ್ (AIYF) ದಾವಣಗೆರೆ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಆವರಗೆರೆಯ ಸರ್ಕಾರಿ ಪ್ರಾಥಮಿಕ ಶಾಲೆ ಬಳಿ ಪ್ರತಿಭಟನೆ ನಡೆಸಿದರು.

- Advertisement -

ಈ ವೇಳೆ ಮಾತನಾಡಿದ ಮುಖಂಡರು, “ಸರ್ಕಾರಿ ಶಾಲೆಗಳ ವಿಲೀನ ಮತ್ತು ಮುಚ್ಚುವ ಮೂಲಕ ಗ್ರಾಮೀಣ ಪ್ರದೇಶದ ಕೃಷಿ, ಕೂಲಿ ಕಾರ್ಮಿಕರ, ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣ ಹಕ್ಕನ್ನು ಹತ್ತಿಕ್ಕಲಾಗುತ್ತಿದೆ. ಈ ಕ್ರಮದಿಂದ ಅವರನ್ನು ಇನ್ನಷ್ಟು ಬಡತನ, ಮೌಢ್ಯಕ್ಕೆ ತಳ್ಳಲಾಗುತ್ತಿದೆ. ಆದ್ದರಿಂದ ವಿಲೀನ ಕ್ರಮವನ್ನು ಕೈಬಿಟ್ಟು ಶಾಲೆಗಳಿಗೆ ಮೂಲಭೂತ ಸೌಕರ್ಯ, ಉತ್ತಮ ಶಿಕ್ಷಣ ಒದಗಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ಪ್ರತಿಭಟನೆ ನಂತರ ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನೇತೃತ್ವವನ್ನು ಅಖಿಲ ಭಾರತ ಯುವಜನ ಫೆಡರೇಶನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ ತಿಪ್ಪೇಶ್ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿದ್ಯಾರ್ಥಿಗಳಿಗೆ “ಪರೀಕ್ಷೆ ಮತ್ತು ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಯುವಜನ ಮುಖಂಡರಾದ ಅನಿಲ್ ಕುಮಾರ್, ನಾಗರಾಜ, ಅಣ್ಣೇಶ್, ಪ್ರಭು, ಮಂಜುನಾಥ್, ಪ್ರವೀಣ ಕೆಸಿ, ಮದನ್, ರಘುವೀರ, ಶಂಭುಲಿಂಗಪ್ಪ, ಸಂತೋಷ ಹೆಚ್ ,ಭೀಮೇಶ್, ಮುದಹದಡಿ ಸುರೇಶ್, ನಾಗರಾಜ ಎ ಸಿ, ನವೀನ್ ಸಿದ್ದಪ್ಪ ಮುಂತಾದವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...