ದಾವಣಗೆರೆ | ಪ್ರಿಯಾಂಕ ಗಾಂಧಿ ಹೇಳಿದಂತೆ ಆರನೇ ಗ್ಯಾರಂಟಿ ಜಾರಿಗೆ ತರಬೇಕು; ಬಿಸಿಯೂಟ ತಯಾರಕರ ಆಗ್ರಹ

Date:

Advertisements

2023ನೇ ವಿಧಾನಸಭಾ ಚುನಾವಣೆ ವೇಳೆ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರು ಬಿಸಿಯೂಟ ನೌಲಕರರಿಗೆ ನೀಡಿದ್ದ ಆರನೇ ಗ್ಯಾರಂಟಿ ಭರವಸೆಯನ್ನು ನೆರವೇರಿಸುವಂತೆ ಆಗ್ರಹಿಸಿ ಬಿಸಿಯೂಟ ತಯಾರಕರು ದಾವಣಗೆರೆ ದಕ್ಷಿಣ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಮನವಿ ಸಲ್ಲಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರ ನಿವಾಸಕ್ಕೆ ತೆರಳಿದ ಬಿಸಿಯೂಟ ತಯಾರಕರ ನಿಯೋಗ ಮನವಿ ಸಲ್ಲಿಸಿ, ಬಳಿಕ ಕಾರ್ಯಕರ್ತರು ಮಾತನಾಡಿದರು.

“ಬಿಸಿಯೂಟ ನೌಕರರಿಗಾಗಿ 6ನೇ ಗ್ಯಾರಂಟಿ ಜಾರಿ ತರುವುದು ಸೇರಿದಂತೆ ಬಿಸಿಯೂಟ ತಯಾರಕರು ನಿವೃತ್ತಿಯಾದಾಗ ₹2 ಲಕ್ಷ ಇಡುಗಂಟು ಹಣ ಮತ್ತು ಮರಣ ಪರಿಹಾರ ₹10 ಲಕ್ಷ, ಕೆಲಸದ ಭದ್ರತೆ, ಈಗ ಇರುವ ವೇತನ ₹3,600ಕ್ಕೆ ಬದಲಾಗಿ ₹6,000ಕ್ಕೆ ಹೆಚ್ಚಳ ಮಾಡುವುದು ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಡ ಹೇರುವಂತೆ ಶಾಸಕರಿಗೆ ಮನವಿ ಮಾಡಿದರು.

Advertisements

“ಬರುವ ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ತಾವುಗಳು ಸರ್ಕಾರಕ್ಕೆ ಒತ್ತಾಯಿಸಿ ಬಿಸಿಯೂಟ ತಯಾರಕರ ಪರವಾಗಿ ಧ್ವನಿ ಎತ್ತುವ ಮೂಲಕ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕೃತಿ ಲೋಕಾರ್ಪಣೆ

ಮನವಿ ಸ್ವೀಕರಿಸಿದ ಶಾಸಕ ಶಾಮನೂರು ಶಿವಶಂಕರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಶಾಸಕರ ನಿವಾಸಕ್ಕೆ ತೆರಳಿದ ನಿಯೋಗದಲ್ಲಿ ಬಿಸಿಯೂಟ ತಯಾರಕರ ಫೆಡರೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆವರಗೆರೆ ಚಂದ್ರು ಮತ್ತು ಜಿಲ್ಲಾ ಮುಖಂಡರುಗಳಾದ ಸಿ ರಮೇಶ್, ಜ್ಯೋತಿ ಲಕ್ಷ್ಮಿ, ಸರೋಜಾ, ಮಳಲ್ಕೆರೆ ಜಯಮ್ಮ, ಪದ್ಮ, ವನಜಾಕ್ಷಮ್ಮ ರುದ್ರಮ್ಮ ಮೀನಾಕ್ಷಮ್ಮ, ಅನುಸೂಯಮ್ಮ, ಮಾಧವಿ, ಸುವರ್ಣಮ್ಮ, ನೀಲಮ್ಮ, ಮಾಣಿಕ್ಯಮ್ಮ ಸೇರಿದಂತೆ ಐವತ್ತಕ್ಕೂ ಅಧಿಕ ಮಂದಿ ಬಿಸಿಯೂಟ ತಯಾರಕ ಮಹಿಳೆಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X