ದಾವಣಗೆರೆ | ಯೂರಿಯಾ ರಸಗೊಬ್ಬರ ಅಭಾವ; ರೈತರ ಬೆಳೆಗಳಿಗೆ ಅಗತ್ಯ ಗೊಬ್ಬರ ಒದಗಿಸಲು ರೈತ ಸಂಘ ಆಗ್ರಹ

Date:

ರೈತರ ಬೆಳೆಗಳ ಬೆಳವಣಿಗೆಗೆ ಸಮಯವಾಗಿರುವ ಕಾರಣ ರೈತರಿಗೆ ಯೂರಿಯಾ ರಸಗೊಬ್ಬರ ಅಭಾವ ಉಂಟಾಗಿದೆ.‌ ಅಗತ್ಯವಾದ ರಸಗೊಬ್ಬರ ಸಮರ್ಪಕ ಪೂರೈಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ(ವಾಸುದೇವ ಮೇಟಿ)ಬಣದಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ತಾಲೂಕು ಕಛೇರಿ ಮುಂಬಾಗ ಪ್ರತಿಭಟನೆ ನಡೆಸಲಾಯಿತು.

- Advertisement -

ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಕಾರರು ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಮಹಾತ್ಮಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ತಾಲೂಕು ಕಛೇರಿ ಮುಂಬಾಗ ಜಮಾಯಿಸಿ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
1002366557

ಈ ವೇಳೆ ಸಂಘದ ತಾಲೂಕು ಅಧ್ಯಕ್ಷ ಕುಮಾರ್ ಭರಮಸಮುದ್ರ ಮಾತನಾಡಿ, “ಅತ್ಯಂತ ಹಿಂದುಳಿದ ತಾಲೂಕು ಜಗಳೂರಿನಲ್ಲಿ ರೈತರು ಹೇರಳವಾಗಿ ಮೆಕ್ಕೆಜೋಳ ಬೆಳೆಯನ್ನೇ ಅವಲಂಬಿಸಿದ್ದಾರೆ. ಕಳೆದ ವಾರದಿಂದ ಮಳೆ ಸುರಿಯುತ್ತಿದ್ದು ಪೈರುಗಳು
ಶೀತಮಯದಿಂದ ಬೆಳವಣಿಗೆ ಕುಂಠಿತಗೊಳ್ಳುತ್ತಿದೆ. ಆದರೆ ಪೋಷಕಾಂಶಭರಿತ ಹಾಗೂ ಶೀತ ನಿಯಂತ್ರಣಕ್ಕಾಗಿ ಅಗತ್ಯವಿರುವ ಯೂರಿಯಾ ರಸಗೊಬ್ಬರ ತಾಲೂಕಿನಾದ್ಯಂತ ಕೊರತೆ ಉಂಟಾಗಿದೆ. ಪ್ರತಿನಿತ್ಯ ರೈತರು ಖಾಸಗಿ ಫರ್ಟಿಲೈಸರ್ ಅಂಗಡಿ, ಕಂಪನಿಗಳ ಮುಂದೆ ಮುಗಿಬಿದ್ದು ರಸಗೊಬ್ಬರಕ್ಕಾಗಿ ಹರಸಾಹಸ ಪಡಬೇಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

1002366559

“ಅಲ್ಲದೆ ಖಾಸಗಿ ಆಗ್ರೋ ಫರ್ಟಿಲೈಸರ್, ಗೊಬ್ಬರದಂಗಡಿ ಮಾಲೀಕರು ರೈತರಿಂದ ನಿಗದಿತ ದರಕ್ಕಿಂತ ಹೆಚ್ಚು ವಸೂಲಿ ಮಾಡಿ ರೈತರನ್ನು ಶೋಷಿಸುತ್ತಿದ್ದಾರೆ. ಕೃಷಿ ಅಧಿಕಾರಿಗಳು ಕೂಡ ಈ ಬಗ್ಗೆ ಗಮನಹರಿಸುತ್ತಿಲ್ಲ. ಕೂಡಲೇ ಕೃಷಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಸರ್ಕಾರ ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿರುವುದು ಸರಿಯಲ್ಲ. ಕೂಡಲೇ ಅಗತ್ಯ ಯೂರಿಯಾ ಗೊಬ್ಬರ ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಧರ್ಮಸ್ಥಳ ದೌರ್ಜನ್ಯ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ, ಆರೋಪಿಗಳ ಶಿಕ್ಷೆಗೆ ಕರ್ನಾಟಕ ಜನಶಕ್ತಿ ಆಗ್ರಹ

ಇದೇ ವೇಳೆ ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ, ಕೃಷಿ ಇಲಾಖೆ ಸಹಾಯಕಿ ನಿರ್ದೇಶಕಿ ಶ್ವೇತಾ ಇದ್ದರು. ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಲೋಕೇಶ್ ದೊಣೆಹಳ್ಳಿ, ಉಪಾಧ್ಯಕ್ಷ ಬಸವರಾಜ್, ಗೌರವಾಧ್ಯಕ್ಷ ಪಾಲನಾಯಕ, ಪದಾಧಿಕಾರಿಗಳಾದ ತಿಪ್ಪೇಸ್ವಾಮಿ, ಕಿರಣ್ ಕುಮಾರ್, ಚೌಡಮ್ಮ, ಬೊಮ್ಮಕ್ಕ, ಶಿವರಾಜ್,ಚನ್ನಪ್ಪ,
ಏಕಾಂತಪ್ಪ, ಸೂರಜ್ಜ ,ಭೀಮಣ್ಣ, ಸಕ್ರೇಶ್, ಶಿವರಾಜ್, ಡಿಎಸ್ ಎಸ್ ನ ಸತೀಶ್ ಮಲೆಮಾಚಿಕೆರೆ, ವಕೀಲ ಆರ್ ಓಬಳೇಶ್ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...