ದಾವಣಗೆರೆ | ಬಾಯ್ಲರ್ ಬಿದ್ದು ಬಾಲಕನ ಸಾವು, ಮುಖ್ಯೋಪಾಧ್ಯಾಯ, ವಾರ್ಡನ್ ನ್ಯಾಯಾಂಗ ಬಂಧನ

Date:

ದಾವಣಗೆರೆ ನಗರದ ಮಂಜುನಾಥಸ್ವಾಮಿ ಪರಿಶಿಷ್ಠ ವರ್ಗಗಳ ವಸತಿಯುತ ಪ್ರಾಥಮಿಕ ಶಾಲೆಯಲ್ಲಿ ಬಾಲಕನ ಮೇಲೆ ಬಾಯ್ಲರ್‌ ಉರುಳಿಬಿದ್ದು ಸಾವನ್ನಪ್ಪಿದ ಪ್ರಕರಣದಲ್ಲಿ ಪೊಲೀಸರು ಶಾಲೆಯ ಮುಖ್ಯೋಪಾಧ್ಯಾಯ, ವಾರ್ಡನ್ ನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

- Advertisement -

ಮೃತಪಟ್ಟ 11 ವರ್ಷದ ಬಾಲಕ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಜಿಗಳಿ ಗ್ರಾಮದನಾಗಿದ್ದು, ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ಶ್ರೀ ಮಂಜುನಾಥಸ್ವಾಮಿ ಪರಿಶಿಷ್ಠ ವರ್ಗಗಳ ವಸತಿಯುತ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವಿಧ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಬಾಲಕನ ತಂದೆ ರಾಮಪ್ಪ, ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ‘ಶಾಲಾ, ಹಾಸ್ಟೆಲ್ ಸಿಬ್ಬಂದಿ ನಿರ್ಲಕ್ಷ್ಯದಿಂದ ಬಾಯ್ಲರ್ ಮೇಲುರುಳಿ ಸಾವಿಗೀಡಾಗಿದ್ದಾನೆ” ಎಂದು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಸುದ್ದಿ ಓದಿದ್ದೀರಾ | ರಾಯಚೂರು | ಕೃಷಿ ಹೊಂಡದ ಹೆಸರಲ್ಲಿ ಕಲ್ಲು ಗಣಿಗಾರಿಕೆ: ಗ್ರಾಮಸ್ಥರ ಮನೆಯ ಗೋಡೆಯಲ್ಲಿ ಬಿರುಕು

ಶಾಲೆಯ ಕಟ್ಟಡದ ಮೇಲ್ಭಾಗದಲ್ಲಿರುವ ಬಾಯ್ಲರ್ ಹಳೆಯದಾಗಿದ್ದು, ಬಾಲಕ ಮತ್ತು ಆತನ ಸ್ನೇಹಿತರನ್ನು ಉರಿ ಹಾಕಲು ಸಿಬ್ಬಂದಿ ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಉರಿ ಹಾಕುತ್ತಿರುವಾಗ ಬಾಯ್ಲರ್ ಮೇಲೆ ಬಿದ್ದು ಒಳಗಿನ ಅಂಗಾಂಗಗಳಿಗೆ ತೀವ್ರ ಪೆಟ್ಟು ಬಿದ್ದು ಗಾಯಗೊಂಡಿದ್ದರೂ ಚಿಕಿತ್ಸೆ ಕೊಡಿಸದೆ ನಿರ್ಲಕ್ಷ ವಹಿಸಿದ್ದಾರೆ. ತನ್ನ ಮಗನ ಸಾವಿಗೆ ಆಡಳಿತ ಮಂಡಳಿ ಮತ್ತು ಶಾಲೆಯ ಸಿಬ್ಬಂದಿಗಳು ಕಾರಣವಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ದಾವಣಗೆರೆ ನಗರದ ಕೆಟಿ ಜಂಬಣ್ಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಎಸ್‌ಪಿ ಉಮಾ ಪ್ರಶಾಂತ್ ಆದೇಶಿಸಿದ್ದರು. ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್. ಎಸ್. ಸುನೀಲ್‌ಕುಮಾರ್, ಪಿಎಸ್ಐ ಲತಾ‌ ಆರ್, ಪ್ರಕರಣದ ತನಿಖೆ ನಡೆಸಿ ಆರೋಪಿತರಾದ ಮಂಜುನಾಥ ಸ್ವಾಮಿ ಪರಿಶಿಷ್ಟ ಪಂಗಡ ವಸತಿಯುತ ಶಾಲೆಯ ಮುಖ್ಯೋಪಾಧ್ಯಾಯ, ವಾರ್ಡನ್ ನನ್ನು ಬಂಧಿಸಿ ವಿಚಾರಣೆ ನೆಡೆಸಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...