ದಾವಣಗೆರೆ | ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ವತಿಯಿಂದ 134 ನೇ ಅಂಬೇಡ್ಕರ್ ಜಯಂತಿ.

Date:

ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ವತಿಯಿಂದ 134ನೇ ಡಾ.ಬಿಆರ್ ಅಂಬೇಡ್ಕರ್ ಜಯಂತಿಯನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ವಿಶೇಷವಾಗಿ ಮಹಿಳೆಯರು ಸೇರಿದಂತೆ ಸಂಭ್ರಮ ಸಡಗರದಿಂದ ಆಚರಿಸಲಾಯಿತು.

- Advertisement -
1001845892
ಚಿಕ್ಕ ಮಲ್ಲನಹೊಳೆ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಹಿಳೆಯರು

ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಮುಖಂಡರು, “ಸಂವಿಧಾನ ಶಿಲ್ಪಿ, ವಿಶ್ವ ಜ್ಞಾನಿ ಅಂಬೇಡ್ಕರ್ ಸಂವಿಧಾನ ರಚಿಸಿ ಎಲ್ಲರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮಹಾ ತ್ಯಾಗ ಮಾಡಿದ ಮಹಾ ಜ್ಞಾನಿ.‌ ತಮ್ಮ ಜೀವನದಲ್ಲಿ ಅವರು ಏನೆಲ್ಲಾ ಕಳೆದುಕೊಂಡರೂ ಛಲ ಬಿಡದೆ ದಲಿತ, ಶೋಷಿತ ಸಮುದಾಯಗಳಿಗೆ ನ್ಯಾಯ, ಸಮಾನತೆ ಒದಗಿಸುವ ನಿಟ್ಟಿನಲ್ಲಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ದಲಿತರ ಸ್ವಾಭಿಮಾನದ ಹೆಗ್ಗುರುತು ಅಂಬೇಡ್ಕರ್. ಅವರ ದಾರಿಯಲ್ಲಿ ನಾವೆಲ್ಲರೂ ನೆಡೆಯಬೇಕು” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಈ ಸುದ್ದಿ ಓದಿದ್ದೀರಾ ? ಚಿತ್ರದುರ್ಗ | ಹಸಿದವರು ಕಾಂತರಾಜ್ ವರದಿ ಜಾರಿಗಾಗಿ ಕಾಯುತ್ತಿದ್ದಾರೆ, ಹೊಟ್ಟೆ ತುಂಬಿದವರು ವಿರೋಧಿಸುತ್ತಾರೆ ; ಈಶ್ವರಾನಂದಪುರಿ ಶ್ರೀ

ಕಾರ್ಯಕ್ರಮದಲ್ಲಿ ಮುಖಂಡರಾದ ಪ್ರದೀಪ್, ಗಿಡ್ಡ ರಂಗಪ್ಪ, ಸಿದ್ದಬಸಪ್ಪ, ಮಧುಸೂದನ, ತಿಪ್ಪೇಸ್ವಾಮಿ, ತಿಪ್ಪೇಶ್, ಶಾಮಿಯಾನ ರಾಮಣ್ಣ, ನಾಗರಾಜ್, ಯೋಗೀಶ್, ಮಹಾಂತೇಶ, ರವಿ, ಎಂ ಶ್ರೀಧರ್, ಮಂಜುನಾಥ್, ನಾಗೇಂದ್ರ, ಬಸವರಾಜು, ನಾಗೇಂದ್ರಪ್ಪ, ನಾಗಮ್ಮ, ಹೊನ್ನಮ್ಮ, ತಿಪ್ಪಮ್ಮ, ಸಾಕಮ್ಮ, ಶರಣಮ್ಮ, ಗಂಗಮ್ಮ, ರತ್ನಮ್ಮ ಸೇರಿದಂತೆ ಹಲವು ಮಹಿಳೆಯರು, ಭಾಗವಹಿಸಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...