ದಾವಣಗೆರೆ | ವಿದ್ಯುತ್ ಗುಣಮಟ್ಟ ಕಾಯ್ದುಕೊಳ್ಳಲು, ಉದ್ಯೋಗ ಸೃಷ್ಟಿಗೆ ಶೀಘ್ರ 3000 ಪವರ್ ಮ್ಯಾನ್ ನೇಮಕ.

Date:

“ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಕೃಷಿಗೆ 7 ತಾಸು, ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ದ, ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು ನೀಡುತ್ತಿದ್ದೇವೆ. ವಿದ್ಯುತ್ ಗುಣಮಟ್ಟ ಕಾಯ್ದುಕೊಳ್ಳಲು ಶೀಘ್ರ 3000 ಪವರ್ ಮ್ಯಾನ್ ನೇಮಕ‌ ಮಾಡಲಾಗುವುದು. ನಿರುದ್ಯೋಗಿಗಳಿಗೆ , ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗಲಿದೆ” ಎಂದು ದಾವಣಗೆರೆಯಲ್ಲಿ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದರು.

- Advertisement -

ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು “ಕುಸುಮ್-ಸಿ ಯೋಜನೆಯ ಮೂಲಕ ಮುಂದಿನ ಒಂದೂವರೆ ವರ್ಷದಲ್ಲಿ ಸೋಲಾರ್‍ನಿಂದ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿಯಡಿ ಕುಸುಮ್ ಯೋಜನೆಯಲ್ಲಿ ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿದ್ದು ಸೋಲಾರ್ ಪ್ಯಾನಲ್ ಅಳವಡಿಕೆ, ವಿದ್ಯುತ್ ಉತ್ಪಾದನೆ ಹಂತ, ಭೂಮಿ ಸಮತಟ್ಟು ಮಾಡುವ ಕೆಲಸ ಪ್ರಗತಿಯಲ್ಲಿದ್ದು ಬರುವ ಏಪ್ರಿಲ್‍ನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಗ್ರಿಡ್‍ಗೆ ಕಳುಹಿಸಲು ಕಾರ್ಯಕ್ರಮ ರೂಪಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
1001592320
ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ದಾವಣಗೆರೆ

“ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆಗಾಗಿ ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಇದರಲ್ಲಿ 1;5 ರನ್ವಯ ದೈಹಿಕ ಪರೀಕ್ಷೆಗೆ ಆಯ್ಕೆ ಮಾಡಿ ಅಂತಿಮವಾಗಿ ಅತ್ಯಂತ ಪಾರದರ್ಶಕವಾಗಿ ಮೀಸಲಾತಿ ಹಾಗೂ ಅಂಕಗಳ ಆಧಾರದ ಮೇಲೆ ಏಪ್ರಿಲ್ ಒಳಗಾಗಿ ನೇಮಕಾತಿ ನಡೆಯಲಿದೆ” ಎಂದು ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದರು.‌

ಸ್ಥಳೀಯ ಸಂಸ್ಥೆಗಳು ಸೇರಿದಂತೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ಎಸ್ಕಾಂಗಳಿಗೆ ಬರಬೇಕಾದ ಹಣ ಬಾಕಿ ಇದೆ. ಗ್ರಾಮ ಪಂಚಾಯಿತಿಗಳು ಸ್ವಂತವಾಗಿ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳುವ ಯೋಜನೆ ಇದ್ದು ದಾವಣಗೆರೆ ಜಿಲ್ಲೆಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಲು ಉದ್ದೇಶಿಸಿ ಇದನ್ನು ಪೈಲೆಟ್ ಕಾರ್ಯಕ್ರಮವಾಗಿ ರೂಪಿಸಲಾಗುತ್ತದೆ. ಪಂಚಾಯಿತಿಗಳು ಕುಡಿಯುವ ನೀರು ಪೂರೈಕೆ, ಬೀದಿದೀಪಗಳಿಗೆ ಅಗತ್ಯವಿರುವ ವಿದ್ಯುತ್‍ನ್ನು ಉತ್ಪಾದನೆ ಮಾಡಿಕೊಂಡು ಸ್ವಾವಲಂಬಿಯಾಗಬೇಕು. ಇದಕ್ಕಾಗಿ 400 ಎಕರೆ ಜಾಗವನ್ನು ಗುರುತಿಸಿ ಸೋಲಾರ್ ಪ್ಯಾನಲ್ ಅಳವಡಿಸಿ ಗ್ರಿಡ್‍ಗೆ ವಿದ್ಯುತ್ ನೀಡಿ ಅಷ್ಟೆ ವಿದ್ಯುತ್‍ನ್ನು ವಾಪಸ್ ನೀಡಲಾಗುತ್ತದೆ. ಇದರಿಂದ ವಿದ್ಯುತ್ ಉಳಿತಾಯವಾಗಲಿದೆ ಮತ್ತು ಪಂಚಾಯಿತಿಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಔಷಧಿ ಚೀಟಿಯ ಹಾವಳಿ; ಚಿಕಿತ್ಸೆಗೆ ಹೊರಗಿನಿಂದ ಔಷಧಿ ತರಿಸಿದ ಆರೋಪ

ಸಭೆಯಲ್ಲಿ ಶಾಸಕರಾದ ಕೆ.ಎಸ್.ಬಸವಂತಪ್ಪ, ಲತಾ ಮಲ್ಲಿಕಾರ್ಜುನ್, ಬಿ.ದೇವೇಂದ್ರಪ್ಪ, ಕೆಪಿಟಿಸಿಎಲ್ ಎಂಡಿ ಪಂಕಜ್‍ಕುಮಾರ್ ಪಾಂಡೆ, ಬೆಸ್ಕಾಂ ಎಂಡಿ ಡಾ; ಶಿವಶಂಕರ್ ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಪಾಟೀಲ್ ಹಾಗೂ ಬೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...