ದಾವಣಗೆರೆ ಜಿಲ್ಲೆಯ ಜನರಿಗೆ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಕೊರತೆ ಇದ್ದು, ಅವ್ಯವಸ್ಥೆಗಳು ಮುಂದುವರಿದಿವೆ ಜನರಿಗೆ ಉತ್ತಮ ಸೇವೆ ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಒತ್ತಾಯಿಸಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಹಾಗೂ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಇಂದು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು “ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ರೋಗಿಗಳಿಗೆ ಸರಿಯಾದ ಸೇವೆಗಳ ಸಿಗದೇ ಅಭಾವ ಎದುರಿಸುತ್ತಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಆರೋಗ್ಯ ಸೇವೆ ನೀಡಲು ತಕ್ಷಣ ಕ್ರಮ ಕೈಗೊಂಡು ವ್ಯವಸ್ಥೆಯನ್ನು ಸರಿಪಡಿಸಬೇಕು. ಜನರ ಆರೋಗ್ಯದ ಜೊತೆ ನಿರ್ಲಕ್ಷ್ಯ ಸಹಿಸಲಾರದ್ದು” ಎಂದು ಸಮಸ್ಯೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪಂಚಮಸಾಲಿ ಪೀಠ ಖಾಲಿ ಮಾಡಲು ವಚನಾನಂದಶ್ರೀಗೆ ಟ್ರಸ್ಟ್ ಮುಖಂಡರ ಗಡುವು
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸಾದ್, ರಾಜ್ಯ ಸಮಿತಿ ಸದಸ್ಯ ಫಯಾಜ್ ಅಹಮದ್, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಬಸವರಾಜಪ್ಪ, ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಮೋಹಸಿನ್ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಸಮಿತಿ ಸದಸ್ಯರಾದ ಆದಿಲ್, ಅಶ್ರಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.





