ದಾವಣಗೆರೆ | ಹೊಸ ಕಾನೂನು ರದ್ದು ಹಾಗೂ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಎಐಟಿಯುಸಿ ಪ್ರತಿಭಟನೆ

Date:

ಹೊಸ ಕಾರ್ಮಿಕ ಸಂಹಿತೆಗಳನ್ನು ಹಿಂದಕ್ಕೆ ಪಡೆದು ಈ ಮುಂಚೆ ಇದ್ದ ಕಾರ್ಮಿಕ ಕಾನೂನುಗಳನ್ನು ಪುನಃ ಜಾರಿಗೊಳಿಸಬೇಕು ಹಾಗೂ ವಸತಿ, ಪರಿಹಾರ ಸೇರಿದಂತೆ ಕಟ್ಟಡ ನಿರ್ಮಾಣ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಕಟ್ಟಡ ನಿರ್ಮಾಣ ಕಾರ್ಮಿಕರ ಒಕ್ಕೂಟದ (ಎಐಟಿಯುಸಿ) ದಾವಣಗೆರೆಯ ಜಿಲ್ಲಾ ಘಟಕದ ವತಿಯಿಂದ ದಾವಣಗೆರೆಯಲ್ಲಿ ಉಪವಿಭಾಗಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ಲತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಎಐಟಿಯುಸಿ ಜಿಲ್ಲಾ ಮುಖಂಡ, ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರಾದ ಉಮೇಶ್ ಆವರಗೆರೆ “ಬಹುಕಾಲದ ಹೋರಾಟಗಳ ನಂತರ 1996ರಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ಎರಡು ಕಾನೂನುಗಳನ್ನು ಜಾರಿಗೊಳಿಸಲಾಯಿತು. ಕಾನೂನುಗಳಿಂದ ಕಾರ್ಮಿಕರು ಲಾಭ ಪಡೆಯುವ ಮೊದಲೇ ಅವುಗಳನ್ನು ರದ್ದುಪಡಿಸಲಾಯಿತು. ಈ ಹಿಂದೆ ಇದ್ದ 44 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಲಾಗಿದೆ. ಇವು ಕಾರ್ಮಿಕರ ಶೋಷಣೆಗೆ ಕಾರಣವಾಗುತ್ತಿದ್ದು, ಇವುಗಳನ್ನು ಕೂಡಲೇ ಹಿಂಪಡೆಯಬೇಕು. ಜೊತೆಗೆ ಕಟ್ಟಡ ಕಾರ್ಮಿಕರ ಮತ್ತು ಇತರೆ ಕಾರ್ಮಿಕರ ಬೇಡಿಕೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
1003750739

“ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಬೇಡಿಕೆಗಳಾದ ಕಾರ್ಮಿಕರ ಕಲ್ಯಾಣ ಸೆಸ್ ಕಾಯ್ದೆ 1996ನ್ನು ಮರುಸ್ಥಾಪಿಸಬೇಕು, ಪ್ರಾದೇಶಿಕ ಸ್ಥಿತಿಗಳಿಗೆ ಅನುಗುಣವಾಗಿ ಕಾರ್ಮಿಕ ಕಾನೂನುಗಳನ್ನು ರೂಪಿಸುವ ಹಕ್ಕನ್ನು ರಾಜ್ಯಗಳಿಗೆ ನೀಡಬೇಕು. ಎಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಇಎಸ್ಐ, ಪಿಎಫ್ ( ESI,PF) ಹಾಗೂ ಭದ್ರತಾ ಯೋಜನೆಗಳ ಅಡಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಕಾರ್ಮಿಕರಿಗೆ ಕನಿಷ್ಠ 36,000 ಮಾಸಿಕ ವೇತನ ನಿಗದಿಪಡಿಸಿ, 60 ವರ್ಷದ ನಂತರ 6 ಸಾವಿರ ಪಿಂಚಣಿ ನೀಡಬೇಕು” ಎಂದು ಒತ್ತಾಯಿಸಿದರು.

1003750720

“ನಿರ್ಮಾಣ ಕಾರ್ಮಿಕರಿಗೆ ಕನಿಷ್ಠ 250 ದಿನಗಳ ಉದ್ಯೋಗ ಖಾತರಿ ನೀಡಿ, ಕಲ್ಯಾಣ ಸೆಸ್ ಶೇ. 2ಕ್ಕೆ ಹೆಚ್ಚಿಸುವುದು ಮತ್ತು ನಿರ್ಮಾಣ ವಲಯದ ಮಹಿಳಾ ಕಾರ್ಮಿಕರಿಗೆ ಆರು ತಿಂಗಳ ವೇತನ ಸಹಿತ ಹೆರಿಗೆ ನೀಡುವುದು ಹಾಗೂ ನಿರ್ಮಾಣ ಕಾರ್ಮಿಕರಿಗೆ ವಸತಿಗಾಗಿ ಭೂಮಿ ಮತ್ತು ಸಹಾಯಧನ ಒದಗಿಸಬೇಕು. ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

1003750721

“ಕಟ್ಟಡ ಕಾಮಗಾರಿ ಸಮಯದಲ್ಲಿ, ಅಪಘಾತದ ಸಮಯದ ಪರಿಹಾರದಲ್ಲಿ ತಾರತಮ್ಯ ಸರಿಯಲ್ಲ. ಕಾರ್ಮಿಕ, ದುಡಿಯುವ ಯಜಮಾನನ್ನು ಕಳೆದುಕೊಂಡ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಹಾಗೂ ಸಂಬಂಧಿತ ಕುಟುಂಬ ಸದಸ್ಯರಿಗೆ 5000 ಮಾಸಿಕ ಪಿಂಚಣಿ ನೀಡಬೇಕು ಎಂದು (AITUC) ಅಖಿಲ ಭಾರತ ಸಾಮಾನ್ಯ ಮಂಡಳಿ ಸಭೆಯಲ್ಲಿ ಅಂಗೀಕರಿಸಲಾಗಿದ್ದು, ಈ ಮೇಲಿನ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಎಸ್‌ಸಿಪಿಎಸ್‌ಟಿ ದುರ್ಬಳಕೆ ತಡೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ದಸಂಸ ಮನವಿ

ಪ್ರತಿಭಟನೆಯಲ್ಲಿ ಎಐಟಿಯುಸಿ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಮುಖಂಡರಾದ
ವಿ ಲಕ್ಷಣ್, ಎಸ್ ಮುರುಗೇಶ್, ಶಿವಕುಮಾರ ಡಿ ಶೆಟ್ರು,
ಎಸ್ ಎಂ ಸಿದ್ದಲಿಂಗಪ್ಪ , ಲಕ್ಷ್ಮಣ, ಶಾಗಲೆ ಹನುಮಂತಪ್ಪ,
ಸುರೇಶ್ ಯರಗುಂಟಿ, ಸುರೇಶ್ ಹೆಚ್ ಕೆ ಆರ್, ತಿಪ್ಪೇಸ್ವಾಮಿ, ಸುರೇಶ್ ಮುದಹದಡಿ, ನಾಗಮ್ಮ, ಶೇಖರ್ ಹಾಲವರ್ತಿ, ಮೋಹನ್ ಆಚಾರ್, ಗಂಗಾಧರಾಚಾರಿ, ಭೀಮಶಿ ಕೆ ಜಿ, ಚನ್ನಗಿರಿ ತಾಲೂಕಿನ ಅಧ್ಯಕ್ಷರ ಜಯಾನುಲ್ಲ, ಪ್ರಧಾನ ಕಾರ್ಯದರ್ಶಿ ಮಧು, ಶಿವಾಜಿ ರಾವ್, ಶಾಂತಣ್ಣ ಸೇರಿದಂತೆ ನೂರಾರು ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಇತರ ಕಾರ್ಮಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...