ದಾವಣಗೆರೆ | ಜನಪರ ಶಿಕ್ಷಣ ನೀತಿಗಾಗಿ ಅಖಿಲ ಭಾರತ ಮಟ್ಟದ “ಜನ ಸಂಸತ್ತು” ಕಾರ್ಯಕ್ರಮ

Date:

ಜನಪರ ಶಿಕ್ಷಣ ನೀತಿಗಾಗಿ “ಜನ ಸಂಸತ್ತು” ಅಖಿಲ ಭಾರತ ಮಟ್ಟದ ಕಾರ್ಯಕ್ರಮವನ್ನು 24 ಜನವರಿ 2026 ರಂದು ಬೆಂಗಳೂರಿನಲ್ಲಿ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಅಪೆಕ್ಸ್ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜನವಿರೋಧಿ ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ಕ್ಕೆ ಪರ್ಯಾಯವಾಗಿ “ಜನಪರ ಶಿಕ್ಷಣ ನೀತಿ”ಯನ್ನು ಅಂತಿಮಗೊಳಿಸಲಾಗುವುದು ಇದರ ಭಾಗವಾಗಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯು ದಾವಣಗೆರೆ ಘಟಕದಿಂದ ದಾವಣಗೆರೆಯ ವಿವಿಧ ಹಾಸ್ಟೆಲ್ ಗಳಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಪ್ರಚಾರವನ್ನು ಕೈಗೊಳ್ಳಲಾಗಿದೆ.

- Advertisement -
1003535413

ಈ ಕುರಿತು ಮಾಹಿತಿ ನೀಡಿದ ಮುಖಂಡರು “ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ದೇಶದ ಶಿಕ್ಷಣ ವ್ಯವಸ್ಥೆ ದಯನೀಯ ಸ್ಥಿತಿಯಲ್ಲಿದ್ದು, ಇದಕ್ಕೆ ಸರ್ಕಾರಗಳೇ ಹೊಣೆಗಾರರು. ಕೋವಿಡ್-19 ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಚರ್ಚೆ ಇಲ್ಲದೆ ಬಲವಂತವಾಗಿ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಸಾರ್ವಜನಿಕ ಶಿಕ್ಷಣದ ಮೂಲವನ್ನೇ ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...
1003535416

ಕೇಂದ್ರ ಸರ್ಕಾರ ಎನ್‌ಇಪಿ ಮೂಲಕ ಸರ್ಕಾರಿ ಶಾಲೆಗಳ ಮುಚ್ಚುವಿಕೆ, ಶಿಕ್ಷಣದ ವ್ಯಾಪಾರೀಕರಣ, ತಾರತಮ್ಯ ವೃದ್ಧಿ, ಸರ್ಕಾರದ ಜವಾಬ್ದಾರಿಯಿಂದ ಹಿಂತೆಗೆತ, ಭಾಷಾ ಹಾಗೂ ಉದ್ಯೋಗ ಕೌಶಲ್ಯಗಳ ಮೇಲಿನ ನಿರ್ಲಕ್ಷ್ಯ, ಪಠ್ಯಕ್ರಮದಲ್ಲಿ ರಾಜಕೀಯ ಹಸ್ತಕ್ಷೇಪ, ಧರ್ಮನಿರಪೇಕ್ಷ–ಪ್ರಜಾತಾಂತ್ರಿಕ ಮೌಲ್ಯಗಳ ಕುಸಿತ ನಡೆಯುತ್ತಿದೆ ಎನ್ನುವ ಆತಂಕ ಮೂಡಿಸಿದೆ” ಎಂದರು.

1003535414

“ಕೇಂದ್ರಿಕೃತ ನಿಯಂತ್ರಣದ ಮೂಲಕ ವಿಶ್ವವಿದ್ಯಾಲಯಗಳ ಸ್ವಾಯತ್ತತೆ ಮತ್ತು ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಈ ಸಮಸ್ಯೆಗಳಿಗೆ, ಎನ್‌ಇಪಿಗೆ ಪರ್ಯಾಯವಾಗಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯು ‘ಜನ ಶಿಕ್ಷಣ ನೀತಿ’ಯ ಪ್ರಮುಖ ಅಂಶಗಳನ್ನು ಮುಂದಿಟ್ಟಿದೆ. ಸರ್ಕಾರವೇ ಶಿಕ್ಷಣದ ಸಂಪೂರ್ಣ ಜವಾಬ್ದಾರಿ ವಹಿಸಬೇಕು, ಶಿಕ್ಷಣಕ್ಕೆ ಹೆಚ್ಚಿನ ಹಣಕಾಸು ಮೀಸಲಿಡಬೇಕು, ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು, ವ್ಯಾಪಾರೀಕರಣ, ಕೋಮುವಾದ, ತಾರತಮ್ಯಗಳನ್ನು ತೊಡೆದುಹಾಕಬೇಕು, ಮಾತೃಭಾಷೆ ಹಾಗೂ ಇಂಗ್ಲಿಷ್ ದ್ವಿಭಾಷಾ ಶಿಕ್ಷಣ ಜಾರಿಗೊಳಿಸಬೇಕು, ವೈಜ್ಞಾನಿಕ ಮತ್ತು ಧರ್ಮನಿರಪೇಕ್ಷ ಪಠ್ಯಕ್ರಮ ರೂಪಿಸಬೇಕು ಹಾಗೂ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸಂಪೂರ್ಣ ಸ್ವಾಯತ್ತತೆ ನೀಡಬೇಕು ಎಂದು ಜನ ಶಿಕ್ಷಣ ನೀತಿಯಲ್ಲಿ ಎಂದು ಒತ್ತಾಯಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತರಿಗೆ ಕೃಷಿಸಾಲ ನೀಡದ ಬ್ಯಾಂಕ್ ವಿರುದ್ಧ ಮಲೆಬೆನ್ನೂರಿನಲ್ಲಿ ರೈತಸಂಘ ಪ್ರತಿಭಟನೆ

ಜನ ಸಂಸತ್ತಿನ ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ವಿಶ್ವವಿದ್ಯಾಲಯಗಳ ಪ್ರಮುಖ ಶಿಕ್ಷಣ ತಜ್ಞರು ಭಾಗವಹಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ.

ಪ್ರಚಾರದ ವೇಳೆ ಸಮಿತಿಯ ಸಂಚಾಲಕರಾದ ತಿಪ್ಪೇಸ್ವಾಮಿ ಅಣಬೇರು ಹಾಗೂ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...